6 ವಾರದಲ್ಲಿ 26ನೇ ಬಾರಿ ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರ್ಕಾರ: ಐತಿಹಾಸಿಕ ಗರಿಷ್ಠ ದರ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಮತ್ತೊಂದೆಡೆ ಮಾರಣಾಂತಿಕ ಕೊರೋನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾಗಿ ಜನ ಸಾಮಾನ್ಯರ ಬದುಕು ಜರ್ಜರಿತವಾಗಿದೆ.

0
21

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೋಮವಾರ ಮತ್ತೊಮ್ಮೆ ಡೀಸೆಲ್ ಬೆಲೆಯನ್ನು ಏರಿಸುವ ಮೂಲಕ ಕಳೆದ 6 ವಾರದಲ್ಲಿ 26ನೇ ಭಾರಿ ಡೀಸೆಲ್ ಬೆಲೆ ಏರಿಸಿ ಕೇಂದ್ರ ಸರ್ಕಾರ ಐತಿಹಾಸಿಕ ದಾಖಲೆ ಬರೆದಿದೆ. ಈ ಮೂಲಕ ಭಾರತದಲ್ಲಿ ತೈಲದ ಬೆಲೆ ಈವರೆಗಿನ ಐತಿಹಾಸಿಕ ದಾಖಲೆ ಮಟ್ಟಕ್ಕೆ ಏರಿಕೆಯಾದಂತಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಮತ್ತೊಂದೆಡೆ ಮಾರಣಾಂತಿಕ ಕೊರೋನಾ ಸೋಂಕು ಮತ್ತು ಲಾಕ್‌ಡೌನ್‌ನಿಂದಾಗಿ ಜನ ಸಾಮಾನ್ಯರ ಬದುಕು ಜರ್ಜರಿತವಾಗಿದೆ.

ಈ ನಡುವೆ ವಿರೋಧ ಪಕ್ಷಗಳು ಸತತವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯ ವಿರುದ್ಧ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಆದರೂ, ಇದ್ಯಾವುದನ್ನೂ ಪರಿಗಣಿಸದ ಕೇಂದ್ರ ಸರ್ಕಾರ ತೈಲ ಬೆಲೆಯನ್ನು ಏರಿಸುತ್ತಲೇ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ದರ ಹೆಚ್ಚಳವಾದಾಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ದರ ಕಡಿಮೆಯಾದಾಗ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ.

ಆದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಂತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಈ ಮೂಲಕ ಕೊರೋನಾ ಕಾಟದಿಂದಾಗಿ ಬಸವಳಿದಿರುವ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಳೆದ ತಿಂಗಳು ಬರೊಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು.

ಈಗ ಕಳೆದೊಂದು ವಾರದಲ್ಲಿ ಮೂರು ಭಾರೀ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಮೊದಲು ಐದು ದಿನಗಳ ಹಿಂದೆ (ಜುಲೈ 7ರಂದು) ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿತ್ತು. ನಂತರ ನಿನ್ನೆ (ಜುಲೈ 12ರಂದು) ಮತ್ತೆ 16 ಪೈಸೆ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಇಂದು ಪ್ರತಿ ಲೀಟರ್ ಡೀಸೆಲ್ ಗೆ 11 ಪೈಸೆ ಹೆಚ್ಚಳ ಮಾಡಲಾಗಿದೆ.

ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಪ್ರತಿ ಲೀಟರ್ ಡೀಸೆಲ್ ಗೆ 11.53 ರೂಪಾಯಿ ಹೆಚ್ಚಳವಾದಂತಾಗಿದೆ.

ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಈ ರೀತಿ ಇವೆ

ಭೂಪಾಲ್- ಪೆಟ್ರೋಲ್ 88.08 ರೂ., ಡೀಸೆಲ್ 80.39 ರೂ.
ಮುಂಬೈ- ಪೆಟ್ರೋಲ್ 87.19 ರೂ., ಡೀಸೆಲ್ 79.28 ರೂ.
ಚೆನ್ನೈ- ಪೆಟ್ರೋಲ್ 83.63 ರೂ., ಡೀಸೆಲ್ 78.12 ರೂ.
ಪಾಟ್ನಾ- ಪೆಟ್ರೋಲ್ 83.31ರೂ., ಡೀಸೆಲ್ 77.88 ರೂ.
ಬೆಂಗಳೂರು- ಪೆಟ್ರೋಲ್ 83.02 ರೂ., ಡೀಸೆಲ್ 76. 60 ರೂ.
ಕೋಲ್ಕತ್ತಾ- ಪೆಟ್ರೋಲ್ 82.10 ರೂ., ಡೀಸೆಲ್ 76.16 ರೂ.
ಲಕ್ನೋ- ಪೆಟ್ರೋಲ್ 80.98 ರೂ., ಡೀಸೆಲ್ 72.92 ರೂ.
ದೆಹಲಿ- ಪೆಟ್ರೋಲ್ 80.43 ರೂ., ಡೀಸೆಲ್ 81.05 ರೂ.
ರಾಂಚಿ- ಪೆಟ್ರೋಲ್ 80.29 ರೂ., ಡೀಸೆಲ್ 76.95 ರೂ.


ಇದನ್ನೂ ಓದಿ: ಸೂಕ್ಷ್ಮತೆ ಇಲ್ಲದ ಕೇಂದ್ರ ಸರ್ಕಾರ ಬಿಕ್ಕಟ್ಟಿನ ಸಮುಯದಲ್ಲೂ ತೈಲ ಬೆಲೆ ಹೆಚ್ಚಿಸಿದೆ: ಸೋನಿಯಾ ಗಾಂಧಿ

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here