HomeಮುಖಪುಟITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

ITI ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕದ ನಿರ್ವಹಣೆ ತರಬೇತಿಗೆ ಮುಂದಾದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆಯು ಈಗ ITI ವಿದ್ಯಾರ್ಥಿಗಳಿಗೆ ವೈದ್ಯಕೀಯ ಆಮ್ಲಜನಕ ಘಟಕದ ನಿರ್ವಹಣೆ ಮತ್ತು ಘಟಕದಲ್ಲಿ ಆಮ್ಲಜನಕ ಒತ್ತಡ (PSA) ನಿರ್ವಹಣೆಯ ಕುರಿತು ತರಬೇತಿ ನೀಡಲು ಮುಂದಾಗಿದೆ. ದೇಶಾದ್ಯಂತ ಐಐಟಿ ಕಾಲೇಜುಗಳಲ್ಲಿ ಆಮ್ಲಜನಕ ಘಟಕಕ್ಕೆ ಸಂಬಂಧಿಸಿದ ಹೊಸ  ತರಬೇತಿಯನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಮುಂದಾಗಿದೆ.

ಈಗಗಾಲೇ 84 ಜನರಿಗೆ ಆಮ್ಲಜನಕ ಘಟಕದ ತರಬೇತಿಯನ್ನು ನೀಡಲಾಗಿದ್ದು ಅವರು ಸ್ವತಂತ್ರವಾಗಿ ಆಮ್ಲಜನಕ ಘಟಕವನ್ನು ನಡೆಸಲು ಸಶಕ್ತರಾಗಿದ್ದಾರೆ. ಮುಂದೆ ಜಿಲ್ಲಾಮಟ್ಟದಲ್ಲಿ ಹೆಚ್ಚಿನ ಐಟಿಐ ವಿದ್ಯಾರ್ಥಿಗಳಿಗೆ ಆಮ್ಲಜನಕ ಘಟಕ ನಿರ್ವಹಣೆಯ ತರಬೇತಿಯನ್ನು ನೀಡಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಆಮ್ಲಜನಕ ಘಟಕವನ್ನು ತೆರೆಯಲು ಪ್ರೋತ್ಸಾಹಿಸಲಾಗುವುದು ಎಂದು ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕ ಘಟಕಗಳನ್ನು ಸುಸ್ಥಿತಿಯಲ್ಲಿ ನೋಡಿಕೊಳ್ಳುವಂತೆ ಸೂಚಿಸಿತ್ತು. ಹಾಗೇ ಸಿಬ್ಬಂದಿಗೆ ಘಟಕದ ನಿರ್ವಹಣೆಯ ತರಬೇತಿಯನ್ನು ಮತ್ತು ಅಗತ್ಯ ಒತ್ತಡವನ್ನು ರಕ್ಷಿಸಿಡುವ ತರಬೇತಿಯನ್ನು ನೀಡುವಂತೆಯೂ ಸೂಚಿಸಿತ್ತು.

ಇದನ್ನೂ ಓದಿ : ಕೊರೊನಾದಿಂದ ಬಾಧಿತರಾದ 30,000 ಮಕ್ಕಳು : ಮಕ್ಕಳ ಹಕ್ಕು ಆಯೋಗದಿಂದ ಸುಪ್ರೀಂಗೆ ಮಾಹಿತಿ

ಪ್ರಧಾನ ಮಂತ್ರಿಗಳ ಕಚೇರಿಯು ಇದಕ್ಕೆ ಪೂರಕವಾಗಿ ಏಪ್ರಿಲ್‌ನಲ್ಲಿ 541 ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ PM ಕೇರ್ಸ್‌ ಫಂಡ್‌ ಮೂಲಕ ಹಣವನ್ನು ಮಂಜೂರು ಮಾಡಿತ್ತು. ಹಾಗೆ ಅದಕ್ಕೆ ಹೆಚ್ಚಳವಾಗಿ 162 ಘಟಕಗಳ ಸ್ಥಾಪನೆಗೂ ಹಣ ಮಂಜೂರು ಮಾಡಿತ್ತು. ದೇಶದ ಪ್ರತಿ ಜಿಲ್ಲೆಯ ಜಿಲ್ಲಾಕೇಂದ್ರಗಳಲ್ಲಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಆಕ್ಸಿಜನ್‌ ಘಟಕವನ್ನು ಸ್ಥಾಪಿಸುವ ಯೋಜನೆ ಇದಾಗಿದೆ.

ಕಳೆದ ತಿಂಗಳು ಮಹರಾಷ್ಟ್ರದ ನಾಸಿಕ್‌ನಲ್ಲಿ ಆಕ್ಸಿಜನ್‌ ಘಟಕದಲ್ಲಿ ಸೋರಿಕೆ ಉಂಟಾದ ಪರಿಣಾಮ 22 ರೋಗಿಗಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟರು. ಇದೇ ತರಹದ ಘಟನೆ ಮಹರಾಷ್ಟ್ರದ ಪ್ರಭಾನಿಯಲ್ಲಿಯೂ ನಡೆದಿತ್ತು. ಜೊತೆಗೆ ಕೊರೋನಾ ಎರಡನೇ ಅಲೆಯ ವೇಳೆ ದೇಶಾದ್ಯಂತ ಮೆಡಿಕಲ್‌ ಆಕ್ಸಿಜನ್‌ ಕೊರತೆ ಉಂಟಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಸಕ್ಷಮ ಆಕ್ಸಿಜನ್‌ ಘಟಕಗಳ ಸ್ಥಾಪನೆಗೆ ಮುಂದಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯು ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್‌ ಘಟಕಗಳ ನಿರ್ವಹಣೆಗೆ ಕನಿಷ್ಠ 2-3 ತರಬೇತಿ ಹೊಂದಿದ ಸಿಬ್ಬಂದಿಯನ್ನು ಗುರುತಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಹಾಗೇ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ ಘಟಕದ ಸಿಬ್ಬಂದಿಯನ್ನು ತರಬೇತಿಗೊಳಿಸುವ 5 ಜನ ಮಾಸ್ಟರ್‌ ಟ್ರೈನರ್‌ಗಳನ್ನು ಗುರುತಿಸುವಂತೆ ಕೇಂದ್ರ ಕೌಶಲ್ಯಾಭಿವೃದ್ದಿ ಇಲಾಖೆ  ರಾಜ್ಯಗಳಿಗೆ ತಿಳಿಸಿದೆ.

ಕೇಂದ್ರ ಕೌಶಲ್ಯಾಭಿವೃದ್ಧಿ ಇಲಾಖೆ  IIT ಕಾನ್ಪುರ ಮತ್ತು ನೇವಲ್‌ ಡಾಕ್‌ ವಿಶಾಖಪಟ್ಟಣ ಸಂಸ್ಥೆಗಳ ಸಹಯೋಗದಲ್ಲಿ 84 ಜನರನ್ನು ಮಾಸ್ಟರ್‌ ಟ್ರೈನರ್‌ಗಳನ್ನಾಗಿ ಈಗಾಗಲೇ ತರಬೇತಿಗೊಳಿಸಿದೆ. ರಾಜ್ಯ ಸರ್ಕಾರ ಇವರನ್ನು ತನ್ನ ಸಿಬ್ಬಂದಿಗಳ ತರಬೇತಿಗೆ ಕರೆಸಿಕೊಳ್ಳ ಬಹುದಾಗಿದೆ ಎಂದು ಇಲಾಖೆಯ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕ್ಸಿಜನ್‌ ಘಟಕವನ್ನು ನಿರ್ವಹಿಸುವ ಸಿಬ್ಬಂದಿಗಳು ಎಲೆಕ್ಟ್ರಿಕ್‌ ಮತ್ತು ತಾಂತ್ರಿಕ ದೋಶಗಳನ್ನು ಸರಿಪಡಿಸಲು ತಿಳಿದಿರುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಿದೆ. ಬೆಡ್‌ ಸೈಡ್‌ ಸಿಲಿಂಡರ್‌, ಚಿಕ್ಕ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ನಿರ್ವಹಣೆ ಮುಂತಾದ ತರಬೇತಿಗಳನ್ನು ಜಿಲ್ಲಾಮಟ್ಟದ ಸಿಬ್ಬಂದಿಗಳಿಗೆ ನೀಡಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಂಸ್ಥೆ ಸೂಚಿಸಿದೆ.


ಇದನ್ನೂ ಓದಿ : ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...