Homeಮುಖಪುಟಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರದಿಂದ ಬಂಪರ್: ಶೇ. 5ರಷ್ಟು ತುಟ್ಟಿಭತ್ಯೆ ಹೆಚ್ಚಳ

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರದಿಂದ ಬಂಪರ್: ಶೇ. 5ರಷ್ಟು ತುಟ್ಟಿಭತ್ಯೆ ಹೆಚ್ಚಳ

- Advertisement -
- Advertisement -

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಈ ಬಾರಿಯ ದೀಪಾವಳಿಗೆ ಭರ್ಜರಿ ಗಿಫ್ಟ್ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ. 5ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಪ್ರಧಾನಿ ಮೋದಿ ಒಪ್ಪಿಗೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.

ನವದೆಹಲಿಯ ಶಾಸ್ತ್ರಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವ್ಡೇಕರ್, ಈ ಬಾರಿಯ ದೀಪಾವಳಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಶೇ. 5ರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿದೆ. 7ನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ತುಟ್ಟಿಭತ್ಯೆ ಏರಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

48 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 62 ಲಕ್ಷ ಪಿಂಚಣಿದಾರರು ಫಲಾನುಭವ ಪಡೆಯಲಿದ್ದಾರೆ. ಅಕ್ಟೋಬರ್ 27ರಂದು ಈ ಸೌಲಭ್ಯ ಜಾರಿಯಾಗಲಿದೆ. ಇನ್ನು ಶೇ. 5ರಷ್ಟು ತುಟ್ಟಿ ಪರಿಹಾರ ( ಡಿ.ಆರ್) ಕೂಡ ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರದಿಂದ ಕೇಂದ್ರಕ್ಕೆ ವಾರ್ಷಿಕ 16 ಸಾವಿರ ಕೋಟಿ ರೂ. ಹೊರ ಬೀಳಲಿದೆ. ಇದುವರೆಗೆ ಯಾವ ಸರ್ಕಾರವೂ ಶೇ. 5ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...