Homeಎಕಾನಮಿಬಿಜೆಪಿ ಸಂವಿಧಾನಿಕ ಸಂಸ್ಥೆಗಳ ದಾಳಿ ನಡೆಸುತ್ತಿದೆ: ಕಾಂಗ್ರೆಸ್ ನಾಯಕ ಆನಂದ್ ಶರ್ಮ

ಬಿಜೆಪಿ ಸಂವಿಧಾನಿಕ ಸಂಸ್ಥೆಗಳ ದಾಳಿ ನಡೆಸುತ್ತಿದೆ: ಕಾಂಗ್ರೆಸ್ ನಾಯಕ ಆನಂದ್ ಶರ್ಮ

- Advertisement -
- Advertisement -

ದೇಶದ ಆರ್ಥಿಕತೆ ಮತ್ತು ಜಿಡಿಪಿ ದರ ಕುಸಿದಿದೆ. ಉದ್ದಿಮೆಗಳು ಮುಚ್ಚಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮ ಆರೋಪಿಸಿದ್ದಾರೆ.

ಕೇಂದ್ರಸರ್ಕಾರ ಪ್ರತಿಯೊಂದು ರಂಗದಲ್ಲೂ ವಿಫಲವಾಗಿದೆ. ರೈತರು ರಂಕಷ್ಟದಲ್ಲಿದ್ದಾರೆ. ಅತಿವೃಷ್ಠಿ ಅನಾವೃಷ್ಟಿಯಿಂದ ರೈತರು ತತ್ತರಿಸಿ ಹೋಗಿದ್ದಾರೆ. ಆದರೂ ಸರ್ಕಾರ ಅವರ ನೆರವಿಗೆ ಬರುತ್ತಿಲ್ಲ. ನಮ್ಮ ದೇಶದ ಆದಾಯ ಸಂಗ್ರಹದಲ್ಲೂ ಕುಸಿತವಾಗಿದೆ. ದೇಶದ ಪರಿಸ್ಥಿತಿ ಹದಗೆಟ್ಟಿದೆ ಎಂದು ಟೀಕಿಸಿದರು.

ನವದೆಹಲಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ ದೊಡ್ಡದೊಡ್ಡ ಕಾರ್ಪೋರೇಟ್ ಧಣಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಎಲ್ಲವನ್ನೂ ಹಣಕಾಸು ಮಸೂದೆಗಳೆಂದು ಬಿಂಬಿಸಿ ರಾಜ್ಯಸಭೆಯನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು.

ಸಂವಿಧಾನಿಕ ಸಂಸ್ಥೆಗಳಿಗೆ ಗೌರವ ಕೊಡಬೇಕು. ರಾಜಕೀಯ ನೈತಿಕತೆಯನ್ನು ಉಳಿಸಬೇಕೆಂಬ ಬಗ್ಗೆ ಕಾಂಗ್ರೆಸ್ ಹೋರಾಡುತ್ತದೆ. ಆದರೆ ಬಿಜೆಪಿ ಸಂವಿಧಾನಿಕ ಸಂಸ್ಥೆಗಳ ದಾಳಿ ನಡೆಸುತ್ತಿದೆ. ರಾಜಕೀಯದಲ್ಲಿ ನೈತಿಕತೆ ಇಲ್ಲದಂತೆ ಮಾಡುತ್ತಿದೆ ಎಂದು ಆಪಾದಿಸಿದರು.

ಕಾಂಗ್ರೆಸ್ ಮಾಧ್ಯಮ ವಕ್ತಾರ ಸರ್ಜಿವಾಲ ಮಾತನಾಡಿ ಭಾರತೀಯ ರಿಸರ್ವ್‌ ಬ್ಯಾಂಕ್ ಆಕ್ಟ್ ಮತ್ತು ಪ್ರಜಾ ಪ್ರತಿನಿಧಿಗಳ ಕಾಯ್ದೆಯನ್ನು ಕಾನೂನು ಉಲ್ಲಂಘಿಸಿ ತಿದ್ದುಪಡಿಸ ಮಾಡಲಾಗಿದೆ. ಪ್ರಧಾನ ಮಂತ್ರಿ ಕಚೇರಿ ಕಾನೂನುಗಳನ್ನು ಉಲ್ಲಂಘಿಸುತ್ತಲೇ ಇದೆ. ಲೋಕಸಭೆ ಮತ್ತು ರಾಜ್ಯಸಭೆ ಸಂಪ್ರದಾಯಕ್ಕೆ ತಿಲಾಂಜಲಿ ಇಡಲಾಗುತ್ತದೆ ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಶಿವಸೇನೆಯನ್ನು ವಿಭಜಿಸಿ, ಇಲ್ಲವೇ ಬಂಧನ ಎದುರಿಸಿ ಎಂದು ಏಕನಾಥ್ ಶಿಂದೆಗೆ ಕೇಂದ್ರ ಸರ್ಕಾರ ಬೆದರಿಕೆ...

0
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಏಕನಾಥ್ ಶಿಂದೆ ಸಚಿವರಾಗಿದ್ದಾಗ, ಅವರನ್ನು ಬಂಧಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜಿಸಿತ್ತು ಎಂದು ಮಂಗಳವಾರ ಶಿವಸೇನೆ (ಯುಬಿಟಿ) ನಾಯಕ...