Homeಚಳವಳಿಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ - ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

"ಈ ಹಿಂದೆಯೂ ಕೇಂದ್ರದೊಟ್ಟಿಗೆ ಹಲವು ಸುತ್ತಿನ ಮಾತುಕತೆಗಳು, ಸಂಧಾನ ಸಭೆಗಳು ನಡೆದಿದ್ದವು. ಆದರೆ ಇವುಗಳೆಲ್ಲಾ ವಿಫಲವಾಗಿದ್ದವು. ಈಗ ನಡೆಯುವ ಈ ಮಾತುಕತೆ ನಿರ್ಣಾಯಕ ಎಂಬುದು ರೈತರು ಮತ್ತು ಸರ್ಕಾರದ ಅಭಿಪ್ರಾಯವಾಗಿದೆ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ರೈತರು ಪ್ರತಿಭಟನೆ ಮಾಡುತ್ತಿದ್ದು, ಪ್ರತಿಭಟನಾ ನಿರತ ರೈತರು ಈಗ ಕೇಂದ್ರದೊಟ್ಟಿಗೆ ಮಾತುಕತೆಗೆ ಮುಂದಾಗಿದ್ದಾರೆ. ಜೊತೆಗೆ ಈ ಮಾತುಕತೆಯಲ್ಲಿ ರೈತರು ಚರ್ಚಿಸ ಬಯಸುವ ವಿಷಯಗಳನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದ್ದು, “ಡಿಸಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರದೊಟ್ಟಿಗೆ ಮತ್ತೊಂದು ಸುತ್ತಿನ ಮಾತುಕತೆಗೆ ಮುಂದಾಗಿದ್ದೇವೆ. ಈ ಮಾತುಕತೆಯಲ್ಲಿ ನಮ್ಮ ಎರಡು ಉದ್ದೇಶಗಳ ಬಗ್ಗೆ ಚರ್ಚಿಸಲಿದ್ದೇವೆ. ಒಂದು, ಈ ಕೃಷಿ ಕಾನೂನುಗಳನ್ನು ಹಿಂಪಡೆಯುವ ವಿಧಾನಗಳ ಕುರಿತು, ಮತ್ತೊಂದು, ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಜಾರಿಗೊಳಿಸುವ ಪ್ರಕ್ರಿಯೆಗಳ ಕುರಿತು ಚರ್ಚಿಸುತ್ತೇವೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ತೀವ್ರಗೊಂಡ ಹೋರಾಟ: ಟೋಲ್‌ ಪ್ಲಾಜಾಗಳನ್ನು ವಶಕ್ಕೆ ಪಡೆದ ರೈತರು

ಇದನ್ನೂ ಓದಿ: ರೈತ ಹೋರಾಟದಲ್ಲಿ ಖಲೀಸ್ತಾನಿ ಕರಪತ್ರ‌ ಹಂಚಿಕೆ: RSS‌ ಕಾರ್ಯಕರ್ತ ಬಂಧನ!

ಈ ಮೂಲಕ ರೈತರು ತಮ್ಮ ದೃಢ ನಿಲುವನ್ನು ಸ್ಪಷ್ಟಪಡಿಸಿದ್ದು, ಈ ಕರಾಳ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎನ್ನುವ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎನ್ನುವುದನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಈ ಹಿಂದೆಯೂ ಕೇಂದ್ರದೊಟ್ಟಿಗೆ ಹಲವು ಸುತ್ತಿನ ಮಾತುಕತೆಗಳು, ಸಂಧಾನ ಸಭೆಗಳು ನಡೆದಿದ್ದವು. ಆದರೆ ಇವುಗಳೆಲ್ಲಾ ವಿಫಲವಾಗಿದ್ದವು. ಈಗ ನಡೆಯುವ ಈ ಮಾತುಕತೆ ನಿರ್ಣಾಯಕ ಎಂಬುದು ರೈತರು ಮತ್ತು ಸರ್ಕಾರದ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ರೈತ ಹೋರಾಟ: ಭಾರತದೊಂದಿಗೆ ಮಾತನಾಡುವಂತೆ ಒತ್ತಾಯ – ಅಮೆರಿಕದ ಸಂಸದರ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...