Homeಮುಖಪುಟಜಾತಿಗಣತಿಗೆ ಕೇಂದ್ರ ಸರಕಾರಕ್ಕೆ ಮಾತ್ರ ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆ

ಜಾತಿಗಣತಿಗೆ ಕೇಂದ್ರ ಸರಕಾರಕ್ಕೆ ಮಾತ್ರ ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆ

- Advertisement -
- Advertisement -

ಜತಿಗಣತಿ ಅಥವಾ ಜನಗಣತಿಗೆ ಸಮಾನವಾದ ಯಾವುದೇ ಗಣತಿ ನಡೆಸಲು ಕೇಂದ್ರಕ್ಕೆ ಮಾತ್ರ ಅಧಿಕಾರ ಇದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರವು ಈ ಪ್ರತಿಕ್ರಿಯೆ ನೀಡಿದೆ. ಕೇಂದ್ರವು ಸುಪ್ರೀಂಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಸಂವಿಧಾನದ ಅಡಿಯಲ್ಲಿ ಬರುವ ಸಂಸ್ಥೆ ಅಥವಾ ಇತರ ಯಾವುದೇ ಸಂಸ್ಥೆಯು ಜನಗಣತಿ ಅಥವಾ ಜನಗಣತಿಗೆ ಹೋಲುವ ಯಾವುದೇ ಕ್ರಿಯೆಯನ್ನು ನಡೆಸಲು ಅರ್ಹತೆ ಹೊಂದಿಲ್ಲ ಎಂದು ಹೇಳಿದೆ.

ಜನಗಣತಿ ಕಾಯ್ದೆ 1948ರ ಅನ್ವಯ ಜಾತಿಗಣತಿ ಸೇರಿದಂತೆ ಈ ಮಾದರಿಯ ಇತರೆ ಯಾವುದೇ ಗಣತಿ ಪ್ರಕ್ರಿಯೆ ಕೈಗೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ಸೋಮವಾರ ಅಫಿಡವಿಟ್  ಸಲ್ಲಿಸಲಾಗಿದೆ. 1948 ರ ಜನಗಣತಿ ಕಾಯಿದೆಯ ಸೆಕ್ಷನ್ 3ರ ಅಡಿಯಲ್ಲಿ ಜಾತಿಗಣತಿ ನಡೆಸಲು ಕಾಯಿದೆಯು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರ ನೀಡುತ್ತದೆ ಎಂದು ಹೇಳಿದೆ.

ಇದಲ್ಲದೆ ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳು (ಎಸ್‌ಇಬಿಸಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಉನ್ನತಿಗಾಗಿ ಎಲ್ಲಾ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಲು ಕೇಂದ್ರವು ಬದ್ಧವಾಗಿದೆ ಎಂದು ಅಫಿಡವಿಟ್ ನಲ್ಲಿ ಕೆಂದ್ರ ಸರಕಾರವು ಉಲ್ಲೇಖಿಸಿದೆ.

ಜಾತಿ ಗಣತಿ ನಡೆಸುವ ಬಿಹಾರ ಸರ್ಕಾರದ ನಿರ್ಧಾರವನ್ನು ಇತ್ತೀಚೆಗೆ ಬಿಹಾರ ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಕೇಂದ್ರ ಸರ್ಕಾರದ  ಪರವಾಗಿ ಅಫಿಡವಿಟ್‌ ಸಲ್ಲಿಸಿರುವ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ‘ಜನಗಣತಿಯು 1948ರ ಸೆನ್ಸಸ್‌ ಕಾಯ್ದೆ ಅನ್ವಯ ಶಾಸನಾತ್ಮಕ ಪ್ರಕ್ರಿಯೆಯಾಗಿದೆ. ಈ ಕಾಯ್ದೆಯು ಕೇಂದ್ರ ಸರ್ಕಾರಕ್ಕೆ ಮಾತ್ರವೇ ಗಣತಿ ನಡೆಸುವ ಅಧಿಕಾರವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗುರುಗ್ರಾಮ: ಮುಸ್ಲಿಮರಿಗೆ ಮನೆ ತೊರೆಯುವಂತೆ ಪೋಸ್ಟರ್ ಮೂಲಕ ಬೆದರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...