Homeಮುಖಪುಟ'ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್‌' ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

‘ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್‌’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

- Advertisement -
- Advertisement -

ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ಹುರಿಯತ್ ಕಾನ್ಫರೆನ್ಸ್‌ನ ಅಂಗವಾದ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್‌ನ್ನು (ಜೆಕೆಎನ್‌ಎಫ್) ಐದು ವರ್ಷಗಳ ಅವಧಿಗೆ ನಿಷೇಧಿಸಿ ಕೇಂದ್ರ ಸರಕಾರ ಆದೇಶವನ್ನು ಹೊರಡಿಸಿದೆ.

ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ದೇಶದ ಏಕತೆ, ಸಾರ್ವಭೌಮತೆ ಹಾಗೂ ಭದ್ರತೆಗೆ ಧಕ್ಕೆಯಾಗುವಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದೆ. ನಯೀಮ್ ಅಹ್ಮದ್ ಖಾನ್ ನೇತೃತ್ವದ JKNF ಕಾನೂನು ಬಾಹಿರ ಸಂಘಟನೆಯಾಗಿದ್ದು, ತಕ್ಷಣದಿಂದ ಬರುವಂತೆ ಸಂಘಟನೆಯನ್ನು ನಿಷೇಧಿಸಲಾಗಿದೆ. ಈ ಆದೇಶವು ಐದು ವರ್ಷಗಳ ಅವಧಿಗೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಭಾರತದಿಂದ ಜಮ್ಮು-ಕಾಶ್ಮೀರವನ್ನು  ಬೇರ್ಪಡಿಸಲು ಯತ್ನ ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವುದು, ರಾಷ್ಟ್ರದ ಸಾರ್ವಭೌಮತೆ, ಭದ್ರತೆ ಮತ್ತು ಸಮಗ್ರತೆಗೆ ಸವಾಲು ಹಾಕಲು ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಭಾರತೀಯರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಭಯೋತ್ಪಾದಕ ಪಡೆಗಳನ್ನು ಬೇರುಸಹಿತ ಕಿತ್ತುಹಾಕಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

JKNF ಸದಸ್ಯರು ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಲು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರಿಗೆ  ಸರಕು ಸಾಗಣೆಗೆ ನೆರವು ಒದಗಿಸುತ್ತಿದ್ದಾರೆ. ಅವರು ಭಯೋತ್ಪಾದಕ ಚಟುವಟಿಕೆಗಳು ಮತ್ತು ಭಾರತ ವಿರೋಧಿ ಪ್ರಚಾರವನ್ನು ಬೆಂಬಲಿಸುವಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಕಳೆದ ಡಿಸೆಂಬರ್‌ನಲ್ಲಿ  ರಾಷ್ಟ್ರ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇಲೆ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ(ಮಸರತ್ ಆಲಂ ಬಣ) ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು. “ಮುಸ್ಲಿಂ ಲೀಗ್ ನಿಷೇಧ ಮಾತ್ರವಲ್ಲದೆ, ಈ ಸಂಘಟನೆಯ ವಿರುದ್ದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967, ಭಾರತೀಯ ದಂಡ ಸಂಹಿತೆಯ 1860, ದಿ ಆರ್ಮ್ಸ್ ಆಕ್ಟ್ 1959 ಮತ್ತು ರಣಬೀರ್ ದಂಡ ಸಂಹಿತೆ 1932 ರ ವಿವಿಧ ವಿಭಾಗಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿತ್ತು.

ಇದಲ್ಲದೆ ಕಳೆದ ಡಿಸೆಂಬರ್‌ 31ರಂದು  ಜಮ್ಮು-ಕಾಶ್ಮೀರದ ತೆಹ್ರೀಕ್-ಎ-ಹುರಿಯತ್ (ಟಿಇಹೆಚ್) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯವು ಆದೇಶವನ್ನು ಹೊರಡಿಸಿತ್ತು. ತೆಹ್ರೀಕ್-ಇ-ಹುರಿಯತ್ ಜಮ್ಮು-ಕಾಶ್ಮೀರ (ಟಿಹೆಚ್)ನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಈ ಸಂಘಟನೆಯು ಭಾರತದಿಂದ ಜಮ್ಮು-ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಅಮಿತ್‌ ಶಾ ಹೇಳಿದ್ದರು. ತೆಹ್ರೀಕ್-ಇ-ಹುರಿಯತ್  ಸಂಘಟನೆಯನ್ನು ಸೈಯದ್ ಅಲಿ ಶಾ ಗಿಲಾನಿ ಅವರು ಸ್ಥಾಪಿಸಿದ್ದರು. ಗಿಲಾನಿ ಜಮಾತ್‌-ಎ-ಇಸ್ಲಾಮಿ ಕಾಶ್ಮೀರವನ್ನು ತೊರೆದ ನಂತರ 2004ರ ಆಗಸ್ಟ್‌ 7ರಂದು ಈ ಸಂಘಟನೆಯನ್ನು ಸ್ಥಾಪಿಸಿದ್ದರು. ಅವರ ನಿಧನದ ಬಳಿಕ ಮಸರತ್ ಆಲಂ ಭಟ್ ಅವರು ಉತ್ತರಾಧಿಕಾರಿಯಾದರು. ಭಟ್ ಪ್ರಸ್ತುತ ಜೈಲಿನಲ್ಲಿದ್ದಾರೆ.

ಇದನ್ನು ಓದಿ: ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್ ಮಾಹಿತಿ ಸಲ್ಲಿಸಿದ ಎಸ್ ಬಿಐ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ಕೊಟ್ಟ ಬಿಜೆಪಿ

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಉತ್ತರ ಪ್ರದೇಶದ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೈಬಿಟ್ಟು, ಪುತ್ರ ಕರಣ್ ಭೂಷಣ್ ಸಿಂಗ್‌ಗೆ...