Homeಮುಖಪುಟಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು...

ಮಹಾರಾಷ್ಟ್ರ| ಮಾವೋವಾದಿಗಳ ಹಿಡಿತವಿದ್ದ ಗಡ್ಚಿರೋಲಿಯಲ್ಲಿ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಅನುಮೋದನೆ; 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು ಅನುಮತಿ

- Advertisement -
- Advertisement -

ಮಾವೋವಾದಿಗಳ ಹಿಡಿತವಿದ್ದ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಹೊಸ ಕಬ್ಬಿಣದ ಅದಿರು ಸಂಸ್ಕರಣಾ ಘಟಕಕ್ಕೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಾತ್ವಿಕ ಅರಣ್ಯ ಅನುಮತಿಯನ್ನು ನೀಡಿದೆ ಎಂದು indianexpress.com ವರದಿ ಮಾಡಿದೆ.

ಕೇಂದ್ರದ ಈ ತಾತ್ವಿಕ ಅನುಮತಿಯು 937 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಗಳಿಗೆ ಬಳಸಲು ಮತ್ತು 1.23 ಲಕ್ಷ ಮರಗಳನ್ನು ಕಡಿಯಲು ಕಂಪನಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಸಚಿವಾಲಯದ ದಾಖಲೆಗಳು ಉಲ್ಲೇಖಿಸಿ ವರದಿ ಹೇಳಿದೆ.

ಗಡ್ಚಿರೋಲಿ ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ವಿಸ್ತರಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರುವ ಮಧ್ಯೆ, ಪ್ರಸ್ತಾವಿತ ಸ್ಥಾವರಕ್ಕೆ ಅರಣ್ಯ ಅನುಮತಿ ದೊರೆತಿದೆ.

ಕಳೆದ ತಿಂಗಳು, ಮಹಾರಾಷ್ಟ್ರದ ಸಚಿವ ಸಂಪುಟವು ಪ್ರಮುಖ ಮತ್ತು ಸಣ್ಣ ಖನಿಜಗಳ ನಿರ್ವಹಣೆಗಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅಧ್ಯಕ್ಷತೆಯಲ್ಲಿ ಗಡ್ಚಿರೋಲಿ ಜಿಲ್ಲಾ ಗಣಿಗಾರಿಕೆ ಪ್ರಾಧಿಕಾರವನ್ನು ಸ್ಥಾಪಿಸಲು ಒಪ್ಪಿಗೆ ನೀಡಿದೆ. ಗಡ್ಚಿರೋಲಿ ಜಿಲ್ಲೆಯು ಕಬ್ಬಿಣದ ಅದಿರು, ಸುಣ್ಣದ ಕಲ್ಲು ಮತ್ತು ವಜ್ರ ನಿಕ್ಷೇಪಗಳನ್ನು ಹೊಂದಿದೆ ಎಂದು ಹೇಳಲಾಗ್ತಿದೆ.

ಸುರ್ಜಾಗಢದಲ್ಲಿ ಪ್ರಸ್ತುತ ಇರುವ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ನ ಕಂಪನಿಯ ಗಣಿಯಿಂದ ಹೊರತೆಗೆಯುವ ಕಡಿಮೆ ದರ್ಜೆಯ ಕಬ್ಬಿಣದ ಅದಿರನ್ನು (ಹೆಮಟೈಟ್ ಕ್ವಾರ್ಟ್‌ಜೈಟ್) ಸಂಸ್ಕರಿಸಲು ಈ ಹೊಸ ಸಂಸ್ಕರಣಾ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಸುರ್ಜಾಗಢದಲ್ಲಿ 348 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕಬ್ಬಿಣದ ಅದಿರು ಗಣಿಯ ಗುತ್ತಿಗೆಯನ್ನು 2007ರಲ್ಲಿ 20 ವರ್ಷಗಳ ಅವಧಿಗೆ ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿಗೆ ನೀಡಲಾಗಿತ್ತು. ನಂತರ ಗುತ್ತಿಗೆಯನ್ನು ಮೇ 2057ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರಕ್ಕೆ ಸಲ್ಲಿಸಿರುವ ಕಂಪನಿ ದಾಖಲೆಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಅರಣ್ಯ ಅನುಮತಿ ಕೋರುವ ಪ್ರಸ್ತಾವನೆಗಳನ್ನು ಪರಿಶೀಲಿಸುವ ಕೇಂದ್ರ ಸಚಿವಾಲಯದ ಅರಣ್ಯ ಸಲಹಾ ಸಮಿತಿ (ಎಫ್‌ಎಸಿ) ಶಿಫಾರಸಿನ ಮೇರೆಗೆ ಮೇ 12ರಂದು ಹೊಸ ಅದಿರು ಸಂಸ್ಕರಣಾ ಘಟಕಕ್ಕೆ ಷರತ್ತುಬದ್ಧ ತಾತ್ವಿಕ ಅನುಮೋದನೆಯನ್ನು ನೀಡಲಾಗಿದೆ.

ಗಡ್ಚಿರೋಲಿ ಜಿಲ್ಲೆಯ ಅರಣ್ಯ ನಾಶಕ್ಕೆ ಪರಿಹಾರವಾಗಿ ಮಹಾರಾಷ್ಟ್ರದ ಕರಾವಳಿಯ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ನಲ್ಲಿ 900 ಹೆಕ್ಟೇರ್‌ಗೂ ಹೆಚ್ಚು ಭೂಮಿಯಲ್ಲಿ ಅರಣ್ಯ ಬೆಳೆಸಲು ಪ್ರಸ್ತಾಪಿಸಲಾಗಿದೆ ಎಂದು ಎಫ್‌ಎಸಿ ಸಭೆಯ ಮಿನಿಟ್ಸ್ ತೋರಿಸಿದೆ ಎಂದು ವರದಿ ಹೇಳಿದೆ.

ಪರಿಸರ ಜವಾಬ್ದಾರಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಕಾಪಾಡಿಕೊಳ್ಳಲು ಗಡ್ಚಿರೋಲಿಯ ಅರಣ್ಯ ಭೂಮಿಯನ್ನು ಹಂತ ಹಂತವಾಗಿ ಮತ್ತು ನಿಯಂತ್ರಿತ ರೀತಿಯಲ್ಲಿ ಕಟ್ಟುನಿಟ್ಟಾಗಿ ಅದಿರು ಸಂಸ್ಕರಣಾ ಘಟಕ ಸ್ಥಾಪನೆಗೆ ಬಳಸಬೇಕು ಎಂಬುದು ಅನುಮತಿ ನೀಡುವಾಗ ವಿಧಿಸಿರುವ ಪ್ರಮುಖ ಷರತ್ತುಗಳಲ್ಲಿ ಒಂದಾಗಿದೆ.

ಮೊದಲ ಹಂತದ ಯಶಸ್ವಿ ಅನುಷ್ಠಾನ ಮತ್ತು ಪರಿಶೀಲನೆ ನಡೆದರೆ ಹಾಗೂ ಭೂಮಿಯ ಸಂಪೂರ್ಣ ಬಳಕೆಯ ನಂತರವೇ ಉಳಿದ 237.077 ಹೆಕ್ಟೇರ್‌ ಬಳಕೆಗೆ ಅನುಮತಿಸಲಾಗುತ್ತದೆ ಎಂದು ಹೇಳಲಾಗಿದೆ.

ತಡೋಬಾ ಹುಲಿ ಮೀಸಲು ಪ್ರದೇಶ ಮತ್ತು ಇಂದ್ರಾವತಿ ಹುಲಿ ಮೀಸಲು ಪ್ರದೇಶಗಳ ನಡುವೆ ಹುಲಿಗಳ ವಲಸೆಗೆ ಸಹಾಯ ಮಾಡುವ ಹುಲಿ ಕಾರಿಡಾರ್ ವ್ಯಾಪ್ತಿಯಲ್ಲಿ ಯೋಜನಾ ಪ್ರದೇಶದ ಒಂದು ಭಾಗ ಬರುವುದರಿಂದ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯಿಂದ ಅನುಮೋದನೆ ಪಡೆಯುವಂತೆ ಸಚಿವಾಲಯವು ಕಂಪನಿಗೆ ನಿರ್ದೇಶನ ನೀಡಿದೆ.

ಲಾಯ್ಡ್ ಮೆಟಲ್ಸ್ ಅಂಡ್ ಎನರ್ಜಿ ಲಿಮಿಟೆಡ್‌ ಕಂಪನಿ 2007ರಲ್ಲಿ ಗಣಿಗಾರಿಕೆ ಗುತ್ತಿಗೆಯನ್ನು ಪಡೆದಿದ್ದರೂ, ಗಣಿಗಾರಿಕೆ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದು 2016ರಲ್ಲಿ ಆಗಿದೆ. ಮಾವೋವಾದಿಗಳ ತೀವ್ರ ವಿರೋಧ, ಬುಡಕಟ್ಟು ಮತ್ತು ಅರಣ್ಯ ಹಕ್ಕುಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬುಡಕಟ್ಟು ಸಮುದಾಯಗಳಿಂದ ವ್ಯಕ್ತವಾದ ತೀವ್ರ ತರಹದ ಪ್ರತಿಭಟನೆಗಳು ಮತ್ತು ಆಂದೋಲನಗಳು ಗಣಿಗಾರಿಕೆ ಪ್ರಾರಂಭಕ್ಕೆ ಅಡ್ಡಿಯಾಗಿತ್ತು.

ಡಿಸೆಂಬರ್ 2016ರಲ್ಲಿ, ಗಡ್ಚಿರೋಲಿಯ ಸುರ್ಜಾಗಢದಲ್ಲಿ ಮಾವೋವಾದಿಗಳು ಗಣಿಗಾರಿಕೆಗೆ ಸಂಬಂಧಿಸಿದ 69 ಟ್ರಕ್‌ಗಳು ಮತ್ತು ಮೂರು ಮಣ್ಣು ತೆಗೆಯುವ ಯಂತ್ರಗಳನ್ನು ಸುಟ್ಟುಹಾಕಿದ್ದರು. ಇದು ಈ ಪ್ರದೇಶದಲ್ಲಿ ಮಾವೋವಾದಿಗಳು ನಡೆಸಿದ ಅತಿದೊಡ್ಡ ದಾಳಿಗಳಲ್ಲಿ ಒಂದಾಗಿದೆ. 2016ರ ಘಟನೆಗೂ ಮುನ್ನ ಲಾಯ್ಡ್ ಸ್ಟೀಲ್‌ನ ಉಪಾಧ್ಯಕ್ಷ ಜಸ್ಪಾಲ್ ಸಿಂಗ್ ಧಿಲ್ಲೋನ್ ಅವರನ್ನು ಮಾವೋವಾದಿಗಳು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಇದನ್ನೂ ಮಾವೋವಾದಿಗಳೇ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾರಾಷ್ಟ್ರದ ನಕ್ಸಲ್ ವಿರೋಧಿ ಕಮಾಂಡೋ ಪಡೆ ಸಿ60ಯ ಮತ್ತು ಕೇಂದ್ರ ಪಡೆಗಳ ಕಾರ್ಯಾಚರಣೆಗಳಿಂದಾಗಿ ಗಡ್ಚಿರೋಲಿಯಲ್ಲಿ ಮಾವೋವಾದಿ ಹಿಡಿತ ಕ್ರಮೇಣ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ವರ್ಷದ ಮೊದಲ ದಿನವನ್ನು ಗಡ್ಚಿರೋಲಿಯಲ್ಲಿ ಕಳೆದಿದ್ದರು. ಅಲ್ಲಿ 11 ಮಾವೋವಾದಿಗಳು ಸಿಎಂ ಮುಂದೆ ಶರಣಾಗಿದ್ದರು. ಇದೇ ವೇಳೆ ಸಿಎಂ 32 ಕಿಮೀ ಉದ್ದದ ರಾಜ್ಯ ಸಾರಿಗೆ ಬಸ್ ಸೇವೆಯನ್ನು ಸಹ ಉದ್ಘಾಟಿಸಿದ್ದರು.

ಈಶಾನ್ಯ ರಾಜ್ಯಗಳಲ್ಲಿ ರಿಲಯನ್ಸ್ 75,000 ಕೋಟಿ ರೂ. ಹೂಡಿಕೆ ಮಾಡಲಿದೆ: ಮುಖೇಶ್ ಅಂಬಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...