Homeಕರ್ನಾಟಕ60ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ಬಂಧ: ರಾಜ್ಯಸಭೆಗೆ ಸರ್ಕಾರದ ಮಾಹಿತಿ

60ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ಬಂಧ: ರಾಜ್ಯಸಭೆಗೆ ಸರ್ಕಾರದ ಮಾಹಿತಿ

- Advertisement -
- Advertisement -

ಭಾರತದ ವಿರುದ್ಧ ನಕಲಿ ಸುದ್ದಿಗಳನ್ನು ಹರಡಲು ಬಳಸಲಾಗುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದ 60ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಕಳೆದ ಎರಡು ತಿಂಗಳಲ್ಲಿ ನಿರ್ಬಂಧಿಸಲಾಗಿದೆ ಎಂದು ಒಕ್ಕೂಟ ಸರ್ಕಾರ ಗುರುವಾರ ರಾಜ್ಯಸಭೆಯಲ್ಲಿ ಹೇಳಿದೆ.

ದೇಶ ವಿರೋಧಿ ಮತ್ತು ನಕಲಿ ಸುದ್ದಿಗಳನ್ನು ವಿಷಯಗಳನ್ನು ಪ್ರಕಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್, “ಸರ್ಕಾರವು ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ದೇಶ ವಿರೋಧಿ ನಕಲಿ ಪೋಸ್ಟ್‌ಗಳನ್ನು ಪ್ರಕಟಿಸಿದ್ದ ಯೂಟ್ಯೂಬ್, ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ 60ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಜನವರಿ 21 ರಂದು 35 ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್‌ಗಳನ್ನು ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಎರಡು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲು ಸಚಿವಾಲಯವು ಆದೇಶಿಸಿದೆ. ಡಿಸೆಂಬರ್‌ನಲ್ಲಿಯೂ 20 ಯೂಟ್ಯೂಬ್ ಚಾನೆಲ್‌ಗಳು ಮತ್ತು ಎರಡು ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲಾಗಿದೆ. ನಿರ್ಬಂಧಿಸಲಾದ ಕೆಲವು ಯೂಟ್ಯೂಬ್ ಚಾನೆಲ್‌ಗಳು ಪಾಕಿಸ್ತಾನದಿಂದ ಪ್ರಾಯೋಜಿತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿರುದ್ಯೋಗ, ಸಾಲದ ಸಮಸ್ಯೆಯಿಂದ 3 ವರ್ಷಗಳಲ್ಲಿ 25 ಸಾವಿರ ಭಾರತೀಯರ ಆತ್ಮಹತ್ಯೆ: ಸರ್ಕಾರ

ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವ ಸುಳ್ಳು ಸುದ್ದಿಗಳ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವು ಸ್ವಾಯತ್ತ ಶಾಸನಬದ್ಧ ಸಂಸ್ಥೆಯಾಗಿದೆ. ಅದು ಪತ್ರಕರ್ತರ ನೀತಿ ಸಂಹಿತೆಯ ಬಗ್ಗೆ ಗಮನ ಹರಿಸುತ್ತದೆ. ಪತ್ರಕರ್ತರು ನೀತಿ ಸಂಹಿತೆಯನ್ನು ಅನುಸರಿಸಬೇಕು, ಪತ್ರಿಕಾ ಮಂಡಳಿ ಕಾಯಿದೆ ಸೆಕ್ಷನ್ 14ರ ಅಡಿಯಲ್ಲಿ ಎಲ್ಲೆಲ್ಲಿ ನೀತಿ ಸಂಹಿತೆ ಪಾಲಿಸಿಲ್ಲವೋ ಅಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. 150 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪತ್ರಕರ್ತರ ವಿರುದ್ಧ ಕ್ರಮಕೈಗೊಂಡಿದ್ದೇವೆ’ ಎಂದು ವಿವರಿಸಿದ್ದಾರೆ.

2019ರ ನವೆಂಬರ್‌ನಲ್ಲಿ ಸಚಿವಾಲಯದ ಪತ್ರಿಕಾ ಮಾಹಿತಿ ಬ್ಯೂರೋ ಅಡಿಯಲ್ಲಿ, ‘ಫ್ಯಾಕ್ಟ್ ಚೆಕ್ ಘಟಕ’ ಸ್ಥಾಪಿಸಲಾಗಿದೆ. ಇದು ಸ್ವಯಂ ಪ್ರೇರಿತವಾಗಿ ಸಾಮಾಜಿಕ ಜಾಲತಾಣದಲ್ಲಿ ಬರುವ ನಕಲಿ ಸುದ್ದಿಗಳ ಬಗ್ಗೆ ಜನರಿಗೆ ಅರಿವನ್ನು ಮೂಡಿಸುತ್ತದೆ. ಘಟಕವು @PIBFactcheck ಎಂಬ ಟ್ವಿಟರ್ ಖಾತೆಯನ್ನು ಸಹ ನಿರ್ವಹಿಸುತ್ತದೆ. ನಕಲಿ ಸುದ್ದಿಗಳ ಪ್ರಕರಣಗಳನ್ನು ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗುತ್ತದೆ. ಈವರೆಗೂ, ಪಿಐಬಿ ಫ್ಯಾಕ್ಟ್ ಚೆಕ್ ಘಟಕವು 30,533 ಫ್ಯಾಕ್ಟ್‌ಚೆಕ್ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದೆ” ಎಂದು ಸಚಿವರು ಹೇಳಿದ್ದಾರೆ.

ವಿದ್ಯುನ್ಮಾನ ಮಾಧ್ಯಮಕ್ಕಾಗಿ (ದೂರದರ್ಶನ), ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯಿದೆ-1995 ರ ಅಡಿಯಲ್ಲಿ ಎಲ್ಲಾ ಟಿವಿ ಚಾನೆಲ್‌ಗಳು ಪ್ರೋಗ್ರಾಂ ಕೋಡ್‌ಗೆ ಬದ್ಧವಾಗಿರಬೇಕು. ಕೋಡ್ ಪ್ರಕಾರ, ಟಿವಿ ಕಾರ್ಯಕ್ರಮಗಳು ಅಶ್ಲೀಲ, ಮಾನಹಾನಿಕರ, ದುರುದ್ದೇಶಪೂರ್ವಕ, ಸುಳ್ಳು ಮತ್ತು ಅರ್ಧ-ಸತ್ಯಗಳನ್ನು ಒಳಗೊಂಡಿರಬಾರದು. ಡಿಜಿಟಲ್ ಸುದ್ದಿಗಾಗಿ, ಮಾಹಿತಿ ತಂತ್ರಜ್ಞಾನ ಕಾಯಿದೆ-2000 ಅಡಿಯಲ್ಲಿ, 2021ರ ಫೆಬ್ರವರಿ 25 ರಂದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು-2021ನ್ನು ಸರ್ಕಾರವು ಸೂಚಿಸಿದೆ. ಇದು ಡಿಜಿಟಲ್ ಸುದ್ದಿ ಪ್ರಕಾಶಕರು ಅನುಸರಿಸಲು ನೀತಿ ಸಂಹಿತೆಯನ್ನು ಒದಗಿಸುತ್ತದೆ. ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...