Homeಮುಖಪುಟರಾಮಮಂದಿರ ಉದ್ಘಾಟನೆ: ಸುಳ್ಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುದ್ದಿ ಪ್ರಕಟಿಸದಂತೆ ಸೂಚಿಸಿದ ಕೇಂದ್ರ ಸರಕಾರ

ರಾಮಮಂದಿರ ಉದ್ಘಾಟನೆ: ಸುಳ್ಳು, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸುದ್ದಿ ಪ್ರಕಟಿಸದಂತೆ ಸೂಚಿಸಿದ ಕೇಂದ್ರ ಸರಕಾರ

- Advertisement -
- Advertisement -

ಜನವರಿ 22ರಂದು ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆ ಅಯೋಧ್ಯೆಯಲ್ಲಿನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಸುಳ್ಳು ಅಥವಾ ಆಕ್ಷೇಪಾರ್ಹ ಸುದ್ದಿ ಪ್ರಕಟಿಸದಂತೆ ಮುಖ್ಯವಾಹಿನಿ ಮಾದ್ಯಮಗಳಿಗೆ ಮತ್ತು ಸಾಮಾಜಿಕ ಮಾದ್ಯಮಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಎಚ್ಚರಿಕೆಯನ್ನು ನೀಡಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊರಡಿಸಿದ ಸಲಹೆಯಲ್ಲಿ, ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವುದನ್ನು ಗಮನಿಸಲಾಗಿದೆ. ಇದು ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತದೆ.  ಪತ್ರಿಕೆಗಳು, ಖಾಸಗಿ ಉಪಗ್ರಹ ಟಿವಿ ಚಾನೆಲ್‌ಗಳು ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಮತ್ತು  ದೇಶದಲ್ಲಿ ಕೋಮು ಸೌಹಾರ್ದತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಯಾವುದೇ ವಿಷಯವನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದನ್ನು ತಡೆಯುವಂತೆ ಸೂಚನೆಯನ್ನು ನೀಡಿದೆ.

ಇದಲ್ಲದೆ ಸಾಮಾಜಿಕ ಮಾದ್ಯಮಗಳ ಬಳಕೆದಾರರು ಕೂಡ ಯಾವುದೇ ರೀತಿಯ ಸುಳ್ಳು, ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನು ಪ್ರಕಟಿಸದಂತೆ ಸಲಹೆ ನೀಡಲಾಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ 1995ರ ಅಡಿಯಲ್ಲಿನ ಪ್ರೋಗ್ರಾಂ ಕೋಡ್‌ನ ನಿಬಂಧನೆಗಳನ್ನು ಮತ್ತು ಪ್ರೆಸ್ ಕೌನ್ಸಿಲ್ ಆಕ್ಟ್-1978ರ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳನ್ನು ಸಲಹೆಯ ಜೊತೆ ಉಲ್ಲೇಖಿಸಿದೆ. ಇದಲ್ಲದೆ ಪತ್ರಿಕಾ ಮಂಡಳಿ ಕಾಯ್ದೆ, ಮಾಹಿತಿ ತಂತ್ರಜ್ಞಾನ(ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಾವಳಿಗಳು 2021ರ ಅಡಿ ನಿಬಂಧನೆಗಳನ್ನು ಉಲ್ಲೇಖಿಸಿದೆ. ಈ ನಿಬಂಧನೆಗಳಿಗೆ ಅನುಗುಣವಾಗಿ ಸುಳ್ಳು ಅಥವಾ ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯನ್ನುಂಟು ಮಾಡಬಹುದಾದ ಯಾವುದೇ ಸುದ್ದಿ, ಮಾಹಿತಿಯನ್ನು ಪ್ರಕಟಿಸದಂತೆ ಮತ್ತು ಪ್ರಚಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.

ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ದೇಶದಾದ್ಯಂತ ಕೇಂದ್ರ ಸರಕಾರದ ಅಧೀನದಲ್ಲಿನ ಕಚೇರಿಗಳಿಗೆ ಅರ್ಧ ದಿನ ರಜೆಯನ್ನು ಘೋಷಿಸಿದೆ. ಇದಲ್ಲದೆ ತ್ರಿಪುರಾ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಗುಜರಾತ್‌, ಉತ್ತರಖಂಡ, ಪುದುಚೇರಿ ಸರಕಾರಗಳು ರಾಮಮಂದಿರ ಉದ್ಘಾಟನೆ ಹಿನ್ನೆಲೆ ಅರ್ಧದಿನ ರಜೆಯನ್ನು ಘೋಷಿಸಿದೆ. ಗೋವಾದಲ್ಲಿ ಶಾಲೆಗಳಿಗೆ ಮತ್ತು ಸರಕಾರಿ ಕಚೇರಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಹರ್ಯಾಣದಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮಹಾರಾಷ್ಟ್ರ ಸರಕಾರ ರಾಜ್ಯದಲ್ಲಿ ಜ.22ರಂದು ಸಾರ್ವಜನಿಕ ರಜೆಯನ್ನು ಘೋಷಿಸಿದೆ.

ರಾಮಮಂದಿರ ಪ್ರಾಣ ಪ್ರತಿಷ್ಟಾಪಾನಾ ದಿನ ಸರಕಾರಿ ಕಚೇರಿ, ಶಾಲೆಗಳಿಗೆ ರಜೆ ನೀಡಿರುವ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವು ಇಂತಹ ಸುತ್ತೋಲೆ ಹೊರಡಿಸುವ ಮೂಲಕ ಅಧಿಕಾರದ ದುರುಪಯೋಗ ಮಾಡಿದೆ. ಧಾರ್ಮಿಕ ನಂಬಿಕೆಯ ವಿಚಾರದಲ್ಲಿ ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವ ಹಕ್ಕು ನೌಕರರಿಗೆ ಇದೆ. ಸರ್ಕಾರದ ಇಂತಹ ಕ್ರಮವು ಸಂವಿಧಾನ ಮತ್ತು ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯವೊಂದು ಈದ್‌ ಮಿಲಾದ್‌ ದಿನದ ರಜೆಯನ್ನು ರದ್ದುಗೊಳಿಸಿದೆ. ಶುಕ್ರವಾರದ ನಮಾಝ್‌ಗೆ ಮೀಸಲಿಟ್ಟಿದ್ದ 30 ನಿಮಿಷಗಳ ವಿರಾಮದ ಅವಧಿಯನ್ನು ಸಾಂವಿಧಾನಿಕ ಹುದ್ದೆಯಲ್ಲಿರುವ ಒಬ್ಬರು ರದ್ದು ಮಾಡಿದ್ದಾರೆ. ಯಾರ ತುಷ್ಟೀಕರಣವೂ ಇಲ್ಲದೆ ಎಲ್ಲರ ಅಭಿವೃದ್ಧಿ ಎಂದರೆ ಇದೇನಾ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಪ್ರಶ್ನಿಸಿದ್ದರು.

ಇದನ್ನು ಓದಿ: ರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ ‘ಉದ್ಯೋಗ’ ಕಸಿದುಕೊಂಡ ಬಿಜೆಪಿ ಸರಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...