Homeಮುಖಪುಟದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

ದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

- Advertisement -
- Advertisement -

ದೆಹಲಿಯ ಜಾಮಾ ಮಸೀದಿ ಸೇರಿದಂತೆ  ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಬುಧವಾರ ನೋಟಿಸ್ ನೀಡಿದೆ.

ಈ ಕುರಿತು ನೇಮಕವಾದ ಇಬ್ಬರು ಸದಸ್ಯರ ಸಮಿತಿಯ ವರದಿಯ ಆಧಾರದ ಮೇಲೆ ಮಸೀದಿಗಳು, ದರ್ಗಾಗಳು ಮತ್ತು ಸ್ಮಶಾನಗಳು ಸೇರಿದಂತೆ 123  ವಕ್ಫ್ ಬೋರ್ಡ್ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಚಿವಾಲಯವು ಫೆಬ್ರವರಿಯಲ್ಲೇ ನಿರ್ಧರಿಸಿತ್ತು.

ಫೆಬ್ರವರಿ 8ರ ಪತ್ರದಲ್ಲಿ ಜಮೀನು ಮತ್ತು ಅಭಿವೃದ್ಧಿ ಅಧಿಕಾರಿಯೋರ್ವರು 123 ವಕ್ಫ್ ಆಸ್ತಿಗಳಿಗೆ ಸಂಬಂಧಿಸಿ ಎಲ್ಲಾ ವಿಷಯಗಳಿಂದ ವಕ್ಪ್‌ನಿಂದ ಅದನ್ನು “ಮುಕ್ತಗೊಳಿಸುವ” ನಿರ್ಧಾರದ ಬಗ್ಗೆ ಮಂಡಳಿಗೆ ಪತ್ರ ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಕುರಿತು ನಿವೃತ್ತ ನ್ಯಾಯಮೂರ್ತಿ ಎಸ್‌ಪಿ ಗರ್ಗ್‌ ಅವರ ನೇತೃತ್ವದ ಸಮಿತಿಯೊಂದರ ಶಿಫಾರಸಿನ ಬಗ್ಗೆ ದಿಲ್ಲಿ ವಕ್ಫ್‌ ಮಂಡಳಿಯಿಂದ ಯಾವುದೇ ಮನವಿ ಅಥವಾ ಆಕ್ಷೇಪ ವ್ಯಕ್ತವಾಗಿಲ್ಲ ಎಂದು ಕೇಂದ್ರ ಸಚಿವಾಲಯದ ಜಮೀನು ಮತ್ತು ಅಭಿವೃದ್ಧಿ ಕಚೇರಿಯು ತಿಳಿಸಿದೆ.

ದಿಲ್ಲಿಯ ಜಾಮಾ ಮಸ್ಜಿದ್‌ ಸೇರಿದಂತೆ 123 ಆಸ್ತಿಗಳನ್ನು ವಕ್ಫ್‌ ಮಂಡಳಿಯಿಂದ ತನ್ನ ಸ್ವಾಧೀನಕ್ಕೆ ಪಡೆಯಲು ಕೇಂದ್ರ ಸರ್ಕಾರ ಆಗಸ್ಟ್‌ 22ರಂದು ನೋಟಿಸ್‌ ಹೊರಡಿಸಿದೆ ಎಂದು ವರದಿಯಾಗಿದೆ.

ಪಟ್ಟಿ ಮಾಡಲಾದ 123 ಆಸ್ತಿಗಳಲ್ಲಿ ದೆಹಲಿ ವಕ್ಫ್ ಬೋರ್ಡ್ ಯಾವುದೇ ಪಾಲನ್ನು ಹೊಂದಿಲ್ಲ. ಅಥವಾ ಅವರು  ವರದಿ ಕುರಿತು ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿಲ್ಲ. ಆದ್ದರಿಂದ 123 ವಕ್ಫ್ ಆಸ್ತಿಗಳನ್ನು ದೆಹಲಿ ವಕ್ಫ್ ಮಂಡಳಿಯಿಂದ ವಶಕ್ಕೆ ಪಡೆಯಲಾಗುವುದು ಎಂದು ಜಮೀನು ಮತ್ತು ಅಭಿವೃದ್ಧಿ ಕಚೇರಿ ಪತ್ರದಲ್ಲಿ ತಿಳಿಸಿದೆ.

ನೊಟೀಸ್ ನೀಡಿರುವ ಕುರಿತು ಆಮ್ ಆದ್ಮಿ ಪಕ್ಷದ ಶಾಸಕ ಮತ್ತು ವಕ್ಪ್ ಮಂಡಳಿಯ ಅಧ್ಯಕ್ಷ ಅಮಾನತುಲ್ಲಾ ಖಾನ್‌  ವಿರೋಧವನ್ನು ವ್ಯಕ್ತಪಡಿಸಿದ್ದು, ಈ ನಿರ್ಧಾರವು ಮುಸ್ಲಿಂ ಸಮುದಾಯದಲ್ಲಿ ವ್ಯಾಪಕವಾದ  ಆತಂಕ, ಭಯ ಮತ್ತು ಅಸಮಾಧಾನವನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.

ವಕ್ಫ್ ಆಸ್ತಿ ವಿಚಾರದಲ್ಲಿ ಕೆಲವರನ್ನು ಸುಳ್ಳನ್ನು ಹರಡುತ್ತಿದ್ದಾರೆ. ನಾವು ವಕ್ಪ್ ಆಸ್ತಿಯನ್ನು ಯಾರಿಗೂ ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು  ಅಮಾನತುಲ್ಲಾ ಖಾನ್‌ ಹೇಳಿದ್ದಾರೆ.

ಇದನ್ನು ಓದಿ: ಭಾರತ ಹಿಂದೂ ರಾಷ್ಟ್ರವಲ್ಲ: ಮೋಹನ್ ಭಾಗವತ್‌ಗೆ ತಿರುಗೇಟು ಕೊಟ್ಟ ಸ್ವಾಮಿ ಪ್ರಸಾದ್ ಮೌರ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುಣಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...