Homeಕರ್ನಾಟಕಭದ್ರಾವತಿ ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು, ಎರಡು ತಿಂಗಳಲ್ಲಿ ಡಿಪಿಆರ್: ಹೆಚ್‌.ಡಿ ಕುಮಾರಸ್ವಾಮಿ

ಭದ್ರಾವತಿ ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು, ಎರಡು ತಿಂಗಳಲ್ಲಿ ಡಿಪಿಆರ್: ಹೆಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ಭದ್ರಾವತಿಯ ಸರ್.ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ ಎಂದರು.

ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಇಡೀ ಕಾರ್ಖಾನೆಯನ್ನು ಹೊಸದಾಗಿ, ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ತಿಳಿಸಿದರು.

ಸುಮಾರು 8,000ರಿಂದ 10,000 ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ  ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ಒಂದು ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್ಎಲ್ ಕಾರ್ಖಾನೆಯನ್ನೂ ಕೂಡ ಪುನಶ್ಚೇತನಗೊಳಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಸ್ಟೀಲ್ ಉತ್ಪಾದನೆ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರ್ಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದರು.

ಸಾರಿಗೆ ಮಾಲಿನ್ಯ ಶೂನ್ಯ ಮಟ್ಟಕ್ಕೆ; ರಾಜ್ಯಕ್ಕೆ 4,500 ಎಲೆಕ್ಟ್ರಿಕ್ ಬಸ್

ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಂತೆಯೇ ಕರ್ನಾಟಕಕ್ಕೆ 4,500 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕದ ಮಟ್ಟಿಗೆ ದೊಡ್ಡ ತೀರ್ಮಾನ ಮಾಡಿದ್ದೇವೆ. ಪಿಎಂ ಇಡ್ರೈವ್ ಯೋಜನೆಯಡಿ ಬಸ್‌ಗಳನ್ನು ನೀಡುತ್ತಿದ್ದೇವೆ. 2030ರ ವೇಳೆಗೆ ಭೂಸಾರಿಗೆ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸಬೇಕು ಎನ್ನುವ ಉದ್ದೇಶವನ್ನು ಪ್ರಧಾನಿ ಹೊಂದಿದ್ದಾರೆ. ಅವರ ಕನಸು ಸಾಕಾರಕ್ಕೆ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಜನೌಷಧ ಕೇಂದ್ರಗಳ ತೆರವು ಆರೋಪ; ಕುಮಾರಸ್ವಾಮಿ ಕಿಡಿ

ರಾಜ್ಯದ ಆಸ್ಪತ್ರೆಗಳ ಆವರಣದಲ್ಲಿ ಕಡಿಮೆ ಬೆಲೆಗೆ ಔಷಧ ಮಾರಾಟ ಮಾಡುತ್ತಿರುವ ಕೇಂದ್ರದ ಜನೌಷಧ ಕೇಂದ್ರಗಳನ್ನು ತೆರವು ಮಾಡಿಸಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಬಡವರು, ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಸಿಗುತ್ತಿರುವ ಔಷಧಗಳನ್ನು ತಪ್ಪಿಸಿ ಯಾವುದೋ ಲಾಬಿಗೆ ಅನುಕೂಲ ಮಾಡಿಕೊಡುವ ಕುತಂತ್ರ ಇದರ ಹಿಂದೆ ಅಡಗಿರುವಂತೆ ತೋರುತ್ತಿದೆ. ಜನೌಷಧ ಮಳಿಗೆಗಳನ್ನು ತೆರವು ಮಾಡಿ ಮದ್ಯವನ್ನು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತೀರಾ? ಆಕ್ರೋಶ ವ್ಯಕ್ತಪಡಿಸಿದರು.

ಇವರು ತಮ್ಮ ಗ್ಯಾರಂಟಿಗಳು ವಿಶ್ವಕ್ಕೆ ಮಾದರಿ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಜನರ ಹತ್ತಿರಕ್ಕೆ ಹೋಗಿ ಒಮ್ಮೆ ನೋಡಲಿ. ಅಸಲಿ ಸಮಸ್ಯೆ ಏನೆಂದು ಗೊತ್ತಾಗುತ್ತದೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು. ಜನರಿಗೆ ಉಚಿತ ಮಾತ್ರೆ ಕೊಡುವ ಯೋಗ್ಯತೆ ನಿಮ್ಮ ಸರ್ಕಾರಕ್ಕೆ ಇಲ್ಲ. ಮೂಡ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪರ ವಕೀಲ ಕಪಿಲ್ ಸಿಬಲ್ ಅವರು ವಾದ ಮಾಡಲು 1.49 ಕೋಟಿ ಹಣ ಕೊಡ್ತಾ ಇದ್ದೀರಿ. ಆ ಹಣ ಯಾರದ್ದು? ಸಿದ್ದರಾಮಯ್ಯ ಅವರ ಮನೆಯ ಹಣವಾ? ಅವರು, ಅವರ ಪತ್ನಿ ಪರವಾಗಿ ಕೋರ್ಟ್‌ನಲ್ಲಿ ವಾದಿಸುವುದಕ್ಕೆ ಸರ್ಕಾರ ಯಾಕೆ ಶುಲ್ಕ ನೀಡಬೇಕು? ಎಂದು ಅವರು ಪ್ರಶ್ನಿಸಿದರು.

ಸಂಪುಟ ಸಭೆಯಲ್ಲಿ ಕೆಪಿಎಸ್ಸಿ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ. 2011ರಲ್ಲಿ ನಡೆದಿದ್ದ ನೇಮಕಾತಿ ಅಕ್ರಮದ ವಿಚಾರಣೆಯನ್ನು ಕೈಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಇವರಿಂದ ಕೆಪಿಎಸ್ಸಿ ಸ್ವಚ್ಛ ಮಾಡಲು ಸಾಧ್ಯವೇ? ಅರ್ಕಾವತಿ ರೀಡೂ ಮಾಡಿಕೊಟ್ಟಿದ್ದಕ್ಕೆ ಪ್ರತಿಯಾಗಿ ಅಲ್ಲಿದ್ದ ವ್ಯಕ್ತಿಯನ್ನು ತಂದು ಕೆಪಿಎಸ್ಸಿಗೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಒಂದೊಂದು ಹುದ್ದೆಗೆ ಲಕ್ಷಾಂತರ, ಕೋಟ್ಯಂತರ ರೂಪಾಯಿ ಫಿಕ್ಸ್ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಈಗ ಮೀಸಲಾತಿ ಅಂತ ಹೊರಟಿದ್ದೀರಿ. ಮೀಸಲಾತಿ ಕೊಟ್ಟು ಏನ್ ಮಾಡ್ತಿರಿ? ನಿಮ್ಮಿಂದ ಉದ್ಯೋಗ ಕೊಡಲು ಆಗುತ್ತಿಲ್ಲ. ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿವೆ. ಎಷ್ಟು ವರ್ಷವಾಯಿತು ಖಾಲಿ ಹುದ್ದೆ ತುಂಬಿ? ಮೀಸಲಾತಿಯಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ| ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...