Homeಚಳವಳಿಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಪ್ರತ್ಯೇಕ ಜೈಲು ಆವರಣ ನಿರ್ಮಿಸಿ: ರಾಜ್ಯಗಳಿಗೆ ಒಕ್ಕೂಟ ಸರ್ಕಾರ

ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಪ್ರತ್ಯೇಕ ಜೈಲು ಆವರಣ ನಿರ್ಮಿಸಿ: ರಾಜ್ಯಗಳಿಗೆ ಒಕ್ಕೂಟ ಸರ್ಕಾರ

- Advertisement -
- Advertisement -

ದೇಶದಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯದ ಹಕ್ಕುಗಳನ್ನು ಗುರುತಿಸಿರುವ ಒಕ್ಕೂಟ ಸರ್ಕಾರದ ಗೃಹ ಸಚಿವಾಲಯವು, ಯಾವುದೇ ರೀತಿಯ ಶೋಷಣೆಯಿಂದ ಅವರನ್ನು ರಕ್ಷಿಸಲು ಟ್ರಾನ್ಸ್‌ಜೆಂಡರ್ ಕೈದಿಗಳಿಗೆ ಜೈಲುಗಳಲ್ಲಿ ಪ್ರತ್ಯೇಕ ಆವರಣಗಳನ್ನು ನಿರ್ಮಿಸಲು ರಾಜ್ಯಗಳಿಗೆ ತಿಳಿಸಿದೆ.

ಇದರ ಜೊತೆಗೆ ಕೈದಿಗಳನ್ನು ಪರೀಕ್ಷಿಸುವಾಗ ಅವರ ಆದ್ಯತೆಯ ಲಿಂಗದ ವ್ಯಕ್ತಿ ಅಥವಾ ತರಬೇತಿ ಪಡೆದ ವೈದ್ಯಕೀಯ ವೃತ್ತಿಪರರಿಂದ ಪರೀಕ್ಷೆ ಮಾಡಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳಿಗೆ ಹೇಳಿದೆ.

ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳು ಮತ್ತು ಡಿಜಿಪಿಗಳಿಗೆ ಬರೆದ ಪತ್ರದಲ್ಲಿ, ಜೈಲುಗಳಲ್ಲಿ ಟ್ರಾನ್ಸ್-ಮೆನ್ ಮತ್ತು ಟ್ರಾನ್ಸ್-ವುಮೆನ್ ಕೈದಿಗಳಿಗೆ ಪ್ರತ್ಯೇಕ ವಾರ್ಡ್‌ಗಳನ್ನು ನಿರ್ಮಿಸಲು ಸಚಿವಾಲಯ ತಿಳಿಸಿದೆ. ಆದರೆ ಇದರಿಂದ ಅವರನ್ನು ಸಂಪೂರ್ಣವಾಗಿ ಪ್ರತ್ಯೇಕಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕವೇ ಮೊದಲ ರಾಜ್ಯ: ಸರ್ಕಾರಿ ಉದ್ಯೋಗಗಳಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯಕ್ಕೆ 1% ಮೀಸಲಾತಿ ಘೋಷಣೆ

ಇವರ ಗೌಪ್ಯತೆ ಮತ್ತು ಘನತೆಯ ಹಕ್ಕುಗಳನ್ನು ಸಂರಕ್ಷಣೆಗಾಗಿ ಟ್ರಾನ್ಸ್-ಮೆನ್ ಮತ್ತು ಟ್ರಾನ್ಸ್- ವುಮೆನ್ ಕೈದಿಗಳಿಗೆ ಪ್ರತ್ಯೇಕ ಶೌಚಾಲಯಗಳು ಮತ್ತು ಸ್ನಾನಗೃಹಗಳ ಸೌಲಭ್ಯಗಳ ಬಗ್ಗೆಯೂ ಸಚಿವಾಲಯ ತಿಳಿಸಿದೆ.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯಿದೆ- 2019 ರ ಅಡಿಯಲ್ಲಿ ರೂಪಿಸಲಾದ ನಿಯಮಗಳಿಗೆ ಅನುಗುಣವಾಗಿ, ಜೈಲುಗಳಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಕೈದಿಗಳ ಚಿಕಿತ್ಸೆ ಮತ್ತು ಆರೈಕೆಯ ಕುರಿತು ಜೈಲುಗಳಲ್ಲಿನ ಮೂಲಸೌಕರ್ಯಗಳನ್ನು ತಿದ್ದುಪಡಿ ಮಾಡುವ ಗುರಿಯನ್ನು ಹೊಂದಿದೆ.

ಜೈಲು ಪ್ರವೇಶ ಪ್ರಕ್ರಿಯೆ, ವೈದ್ಯಕೀಯ ಪರೀಕ್ಷೆ, ವಸತಿ, ಬಟ್ಟೆ ಮತ್ತು ಚಿಕಿತ್ಸೆ ಅಥವಾ ಕಾರಾಗೃಹದ ಒಳಗಿನ ಆರೈಕೆಯ ಸಮಯ ಸೇರಿದತೆ ಜೈಲಿನಲ್ಲಿ ಎಲ್ಲಾ ಸಮಯದಲ್ಲೂ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಸ್ವಯಂ ಗುರುತನ್ನು ಗೌರವಿಸಲಾಗುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳಿಗೆ ಹೇಳಿದೆ.

ಜೆಂಡರ್‌ ಐಡೆಂಟಿಟಿ, ಮಾನವ ಹಕ್ಕುಗಳು, ಲೈಂಗಿಕ ದೃಷ್ಟಿಕೋನ ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಕಾನೂನು ಚೌಕಟ್ಟುಗಳ ತಿಳುವಳಿಕೆಯನ್ನು ವಿಸ್ತರಿಸಿಕೊಳ್ಳಲು ಜೈಲು ಸಿಬ್ಬಂದಿಗೆ ತರಬೇತಿ ನೀಡುವಂತೆ ಸಚಿವಾಲಯ ಸಲಹೆ ನೀಡಿದೆ.‍


ಇದನ್ನೂ ಓದಿ: ಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...