Homeಮುಖಪುಟಮನುಷ್ಯ ಜೀವಕ್ಕೆ ಅಪಾಯ: 23 "ಕ್ರೂರ" ನಾಯಿ ತಳಿಗಳ ಆಮದು, ಮಾರಾಟ, ಭಾರತದಲ್ಲಿ ನಿಷೇಧ

ಮನುಷ್ಯ ಜೀವಕ್ಕೆ ಅಪಾಯ: 23 “ಕ್ರೂರ” ನಾಯಿ ತಳಿಗಳ ಆಮದು, ಮಾರಾಟ, ಭಾರತದಲ್ಲಿ ನಿಷೇಧ

- Advertisement -
- Advertisement -

ದೇಶಾದ್ಯಂತ ಹೆಚ್ಚುತ್ತಿರುವ ನಾಯಿ ಕಡಿತದ ಪ್ರಕರಣಗಳ ಮಧ್ಯೆ, “ಮನುಷ್ಯನ ಜೀವಕ್ಕೆ ಅಪಾಯ” ಎಂದು ಪರಿಗಣಿಸಲಾದ 23 “ಕ್ರೂರ” ನಾಯಿ ತಳಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯ ಮೇಲೆ ಕೇಂದ್ರವು ನಿಷೇಧ ಹೇರಿದೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ.ಒ.ಪಿ.ಚೌಧರಿ ಅವರು ನಿಷೇಧ ಹೇರಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಕಳುಹಿಸಿದ್ದಾರೆ.

ನಿಷೇಧಿತ ನಾಯಿ ತಳಿಗಳ ಪಟ್ಟಿ: ಪಿಟ್‌ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ರಷ್ಯನ್ ಶೆಫರ್ಡ್, ಟೊರ್ನ್‌ಜಾಕ್, ಸರ್ಪ್ಲಾನಿನಾಕ್, ಜಪಾನೀಸ್ ಟೋಸಾ ಮತ್ತು ಅಕಿಟಾ, ಮಾಸ್ಟಿಫ್ಸ್, ರಾಟ್‌ವೀಲರ್, ಟೆರಿಯರ್‌ಗಳು ರಿಡ್ಜ್ಬ್ಯಾಕ್, ವುಲ್ಫ್ ಡಾಗ್ಸ್, ಕೆನರಿಯೊ, ಅಕ್ಬಾಶ್ ನಾಯಿ, ಮಾಸ್ಕೋ ಗಾರ್ಡ್ ಡಾಗ್, ಕೇನ್ ಕೊರ್ಸೊ, ಮತ್ತು ಸಾಮಾನ್ಯವಾಗಿ ಬ್ಯಾನ್ ಡಾಗ್‌ಗೆ ಭಾರತದಲ್ಲಿ ನಿಷೇಧವನ್ನು ವಿಧಿಸಲಾಗಿದೆ.

ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾದ ತಜ್ಞರ ಸಮಿತಿಯು ಈ ಮೇಲೆ ಉಲ್ಲೇಖಿಸಿದ ನಾಯಿ ತಳಿಗಳ ಆಮದನ್ನು ನಿಷೇಧಿಸಲು ಶಿಫಾರಸು ಮಾಡಿದೆ. ಶ್ವಾನ ಸಾಕಣೆ ಮತ್ತು ಮಾರುಕಟ್ಟೆ ನಿಯಮಗಳು 2017 ಮತ್ತು ಪೆಟ್ ಶಾಪ್ ನಿಯಮಗಳು 2018ರ ಜಾರಿಗಾಗಿ ಕೇಂದ್ರ ಸರ್ಕಾರವು ಇದೇ ವೇಳೆ ಸೂಚಿಸಿದೆ.

ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಇಂಡಿಯಾದಿಂದ ಮನವಿ ಮಾಡಿದ ನಂತರ ಕೇಂದ್ರದ ಈ ಕ್ರಮವು ಬಂದಿದೆ. ಈ ಬಗ್ಗೆ ಪೇಟಾ ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನೂ ಸಲ್ಲಿಸಿದೆ. ತನ್ನ ಅರ್ಜಿಯಲ್ಲಿ PETA, ಈ ಆದೇಶವು ಮಾನವರು ಮತ್ತು ನಾಯಿಗಳೆರಡಕ್ಕೂ ರಕ್ಷಣೆಯನ್ನು ಒದಗಿಸುವಲ್ಲಿ ಪ್ರಮುಖವಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಕೆಲವು ತಿಂಗಳು ದೇಶಾದ್ಯಂತ ನಾಯಿ ಕಡಿತದಿಂದ ಹಲವಾರು ಸಾವುಗಳು ಸಂಭವಿಸಿವೆ. ಮಂಗಳವಾರ, ಹಿಮಾಚಲದ ಬಿಲಾಸ್‌ಪುರ ಪ್ರದೇಶದಲ್ಲಿ ಬೀದಿ ನಾಯಿಯ ದಾಳಿಯಿಂದ 20 ಜನರು ಗಾಯಗೊಂಡಿದ್ದರು. ದೆಹಲಿಯಲ್ಲಿ ಪಿಟ್‌ಬುಲ್‌ ದಾಳಿಯಿಂದ ಪುಟ್ಟ ಮಗು 17 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರ ಗಾಝಿಯಾಬಾದ್‌ನಲ್ಲಿ ಪಿಟ್ ಬುಲ್ ದಾಳಿಗೆ 10 ವರ್ಷದ ಇನ್ನೊಂದು ಮಗು ತೀವ್ರವಾಗಿ ಗಾಯಗೊಂಡಿತ್ತು.

ಇದನ್ನು ಓದಿ: ಭಾರತದಲ್ಲಿ ಸಿಎಎ ಜಾರಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ, ಅಮೆರಿಕ

 

 

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೇರ ನಡೆ-ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿಎಂ ಸಿದ್ದರಾಮಯ್ಯ

0
ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ...