Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

ಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

- Advertisement -
- Advertisement -

ಸರ್ಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ ಹೆಸರು ಗಳಿಸಿರುವ ದೆಹಲಿಯ ಆಪ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಅಪಸ್ವರ ಎತ್ತಿದೆ. ಇದರ ಜೊತೆಗೆ ಮೆಟ್ರೊ ಮತ್ತು ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಏಳು ತಿಂಗಳ ನಂತರ ವಿಧಾನ ಸಭಾ ಚುನಾವಣೆಯು ಸಹ ಇರುವುದರಿಂದ ಹಲವಾರು ವಿಚಾರಕ್ಕೆ ಇವೆರಡು ಪಕ್ಷಗಳ ನಡುಗೆ ಜಿದ್ದಾಜಿದ್ದಿ, ಮಾತಿನ ಚಕಮಕಿ ನಡೆಯುತ್ತಿದೆ.

ಇದು ಆರಂಭವಾಗಿದ್ದು ಹೀಗೆ. ಕಳೆದ ವಾರ ಬಿಜೆಪಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಜೆ.ಪಿ ನಡ್ಡಾ “ದೆಹಲಿ ಸರ್ಕಾರ ಏನು ಕೆಲಸ ಮಾಡುತ್ತಿಲ್ಲ” ಎಂದು ಹೇಳಿಕೆ ನೀಡಿದರು. ಅವರ ಬೆನ್ನಲ್ಲೇ ಪೂರ್ವ ದೆಹಲಿಯ ಸಂಸದರಾದ ವಿಜಯ್ ಗೋಯಲ್ “ಕೇವಲ ಒಂದು ಶಾಲೆಯನ್ನು ಮಾತ್ರ ಚೆನ್ನಾಗಿ ಮಾಡಿ ನಿಮ್ಮನ್ನು, ನಿಮ್ಮ ದೆಹಲಿಯ ಶಿಕ್ಷಣ ನೀತಿಯನ್ನು ಹೊಗಳಿಕೊಳ್ಳಬೇಡಿ, ನಮ್ಮೊಡನೆ ಜೊತೆಯಾಗಿ ಬನ್ನಿ ಮುಸ್ತಾಫಬಾದ್‍ನಲ್ಲಿರುವ ಶಾಲೆಗಳ ಪರಿಸ್ಥಿತಿಯನ್ನು ನೋಡೋಣ” ಎಂದು ಸವಾಲು ಹಾಕಿದ್ದಾರೆ.

ಈ ಆರೋಪಗಳಿಕೆ ಕೂಡಲೇ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, ಬಿಜೆಪಿ ಆಳ್ವಿಕೆಯ ರಾಜ್ಯಗಳ ಅತ್ಯುತ್ತಮ ಶಾಲೆಗಳು ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿನ ಅತ್ಯುತ್ತಮ ಶಾಲೆಗಳಿಗೂ ಹೋಲಿಸಿ ನೋಡೋಣ ಬನ್ನಿ ಎಂದು ಮರುಸವಾಲು ಹಾಕಿದ್ದಾರೆ.

ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿ 2018-2019ರ ಸಾಲಿನಲ್ಲಿ ಆಪ್ ಸರ್ಕಾರವು 13,997 ಕೋಟಿ ರೂಗಳನ್ನು ಶಿಕ್ಷಣಕ್ಕೆ ಮೀಸಲಿಟ್ಟಿದೆ. ಅಂದರೆ ರಾಜ್ಯ ಬಜೆಟ್‍ನ ಶೇ.26% ರಷ್ಟು. ಸಂತಸದಾಯಕ ಕಲಿಕೆ ಮತ್ತು ಪಠ್ಯಕ್ರಮದ ಜೊತೆಗೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ದೆಹಲಿ ಸರ್ಕಾರ ನಿರ್ಮಿಸಿದೆ. ಶಾಲೆಯ ಹೊರೆಗೆ ಅತ್ಯಾಧುನಿಕ ಆಟದ ಮೈದಾನ, ಈಜುಕೊಳ, ಹಾಕಿ, ಪುಟ್ಬಾಲ್ ಗ್ರೌಂಡ್, ಶಾಲೆಯ ಒಳಗೆ ಫ್ಯಾನ್‍ಗಳು, ಕೂಲರ್‍ಗಳು, 11000 ಹೊಸ ಕೊಠಡಿಗಳು, ಹೈ ಕ್ಲಾಸ್ ಸಭಾಂಗಣ, ಶಾಲೆಯ ಮೇಲ್ಛಾವಣಿ, ಮಹಡಿಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಇತ್ಯಾದಿ ಮಾದರಿ ಕೆಲಸಗಳು ನಡೆದಿವೆ.

ಕೇವಲ ಮೂಲಭೂತ ಸೌಲಭ್ಯಗಳಲ್ಲದೇ ಶಿಕ್ಷಣದ ಗುಣಮಟ್ಟದಲ್ಲಿಯೂ ಮಹತ್ವದ ಬದಲಾವಣೆಗಳು ಬಂದಿದ್ದು ಈ ವರ್ಷದಲ್ಲಿ ಎಸ್‍ಎಸ್‍ಎಸ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ದೆಹಲಿಯ ವಿದ್ಯಾರ್ಥಿಗಳು ಒಂದು ದಶಕದಲ್ಲಿಯೇ ಅತ್ಯಂತ ಗಮನಾರ್ಹ ಸಾಧನೆ ಮಾಡಿದ್ದರೆ ಎಂಬುದು ದೆಹಲಿ ಸರ್ಕಾರದ ವಾದ.

ಬಿಜೆಪಿಯ ಸಂಸದ ಮನೋಜ್ ತಿವಾರಿಯವರು ದೆಹಲಿ ಸರ್ಕಾರಿ ಶಾಲೆಗಳ 11000 ಸಾವಿರ ಕೊಠಡಿಗಳ ನಿರ್ಮಾಣ ಕಾರ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ, ಸುಮಾರು 2000 ಕೋಟಿ ರೂಗಳಷ್ಟು ಅವ್ಯವಹಾರ ನಡೆದಿದೆ ಎಂದು ಮತ್ತೊಂದು ಆರೋಪ ಮಾಡಿದ್ದು ನನ್ನ ಬಳಿ ಆರ್.ಟಿ.ಐ ಮೂಲಕ ಪಡೆದ ಮಾಹಿತಿ ಇದೆ ಎಂದಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್ ರವರು ಸುಳ್ಳು ಹೇಳುವುದನ್ನು ನಿಲ್ಲಿಸಿ ಮತ್ತು ಧೈರ್ಯವಿದ್ದರೆ ಅಂತಹ ಅವ್ಯವಹಾರ ಮಾಡಿರುವವರನ್ನು ಬಂಧಿಸಿ ಎಂದು ತಿರುಗೇಟು ನೀಡಿದ್ದಾರೆ.

ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೂ ಕುತ್ತು
ಇನ್ನು ದೆಹಲಿ ಸರ್ಕಾರದ ಮಹತ್ವದ ಯೋಜನೆಯಾದ ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವೂ ವಿವಾದಕ್ಕೀಡಾಗಿದೆ. ಈ ಯೋಜನೆಯ ಮೂಲಕ ಮಹಿಳಾ ಸುರಕ್ಷತೆ, ಸಾರ್ವಜನಿಕ ವಾಹನಗಳ ಬಳಕೆಗೆ ಉತ್ತೇಜನ ಮತ್ತು ಮಾಲಿನ್ಯ ನಿಯಂತ್ರಣ ಇಷ್ಟನ್ನು ಸಾಧಿಸಬಹುದೆನ್ನುವುದು ದೆಹಲಿ ಸರ್ಕಾರದ ಆಶಯವಾಗಿದೆ. ಬಹಳ ಪ್ರಚಾರ ಪಡೆದ ಈ ಕಾರ್ಯಕ್ರಮಕ್ಕೆ ದೆಹಲಿ ಮೆಟ್ರೋದ ಮಾಜಿ ಅಧ್ಯಕ್ಷ ಈ ಶ್ರೀಧರನ್ ರವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿಗಳಿಗೆ ಪತ್ರ ಬರೆದು ಸುದ್ದಿ ಮಾಡಿದ್ದರು.

ಈಗ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಪುರಿಯವರು ಲೋಕಸಭೆಯಲ್ಲಿ ಮಾತನಾಡುತ್ತಾ ಉಚಿತ ಸೇವೆಯ ಕುರಿತು ನಮಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಲ್ಲದೆ, ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಹೀಗೆಲ್ಲಾ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಮೆಟ್ರೊ ನಿಗಮ ಇದಕ್ಕೆ ಅವಕಾಶ ಸಹ ಕೊಡುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಕಳೆದ ವರ್ಷವೂ ಸಹ ದೆಹಲಿಯ ಅನಧಿಕೃತ ಕಾಲೋನಿಗಳನ್ನು ಅಧಿಕೃತಗೊಳಿಸುವ ವಿಚಾರದಲ್ಲಿ ಹರ್ದೀಪ್ ಮತ್ತು ದೆಹಲಿ ಸರ್ಕಾರದ ನಡುವೆ ಸಾಕಷ್ಟು ತಿಕ್ಕಾಟ ನಡೆದಿತ್ತು.

ಒಟ್ಟಿನಲ್ಲಿ ಏಳು ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿರುವ ಬಿಜೆಪಿ ಮತ್ತು 70ರಲ್ಲಿ 67 ವಿಧಾನ ಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಆಪ್ ನಡುವೆ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಯ ಮೇಲಿದೆ ಕಣ್ಣಿದೆ. ಅದಕ್ಕಾಗಿ ಈ ಜಿದ್ದಾಜಿದ್ದಿಗೆ ಬಿಜೆಪಿ ಚಾಲನೆ ಕೊಟ್ಟರೆ ಆಪ್ ತಿರುಗೇಟು ನೀಡಿದೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...