Homeಮುಖಪುಟಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

- Advertisement -
- Advertisement -

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ.

ಸರ್ಕಾರ ನೀಡಿದ ಹೇಳಿಕೆಯ ಪ್ರಕಾರ, ಸೆಪ್ಟೆಂಬರ್ 24, 2025ರಂದು ಲೇಹ್‌ನಲ್ಲಿ ಉಂಟಾದ ಗಂಭೀರ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಆಧರಿಸಿ, ಸೆಪ್ಟೆಂಬರ್ 26, 2025ರಂದು ವಾಂಗ್ಚುಕ್ ಅವರನ್ನು ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿತ್ತು. ಆ ಪ್ರದೇಶದಲ್ಲಿ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಲೇಹ್ ಜಿಲ್ಲಾಧಿಕಾರಿಗಳು ಈ ಬಂಧನ ಆದೇಶವನ್ನು ಹೊರಡಿಸಿದ್ದರು.

ವಾಂಗ್ಚುಕ್ ಅವರು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ನಿಗದಿಪಡಿಸಲಾದ ಗರಿಷ್ಠ ಅವಧಿಯ ಸುಮಾರು ಅರ್ಧದಷ್ಟು ಮುನ್ನೆಚ್ಚರಿಕೆ ಬಂಧನ ಅವಧಿಯನ್ನು ಈಗಾಗಲೇ ಪೂರೈಸಿದ್ದಾರೆ ಎಂದು ಕೇಂದ್ರ ಸರ್ಕಾರವು ಹೇಳಿದೆ.

ವಾಂಗ್ಚುಕ್ ಅವರ ಪತ್ನಿ ಡಾ. ಗೀತಾಂಜಲಿ ಆಂಗ್ಮೋ ಅವರು ಕಳೆದ ಅಕ್ಟೋಬರ್‌ನಿಂದ ವಾಂಗ್ಚುಕ್ ಅವರ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆಯುತ್ತಿದೆ. ಬಂಧನದ ನಂತರ ವಾಂಗ್ಚುಕ್ ಅವರನ್ನು ಜೋಧ್‌ಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಪೀಠವು ಮಾರ್ಚ್ 17ರಂದು ಈ ಪ್ರಕರಣದ ವಿಚಾರಣೆ ನಡೆಸಲು ನಿರ್ಧರಿಸಿದೆ.

ಆಂಗ್ಮೋ ಪರ ವಕೀಲ ಕಪಿಲ್ ಸಿಬಲ್ ಅವರು, ವಾಂಗ್ಚುಕ್ ಬಂಧನವನ್ನು ಪ್ರಶ್ನಿಸಿ ಬಂಧನಕ್ಕೆ ಆಧಾರವಾದ ಎಲ್ಲಾ ಪ್ರಮುಖ ದಾಖಲೆಗಳನ್ನು ವಾಂಗ್ಚುಕ್ ಅವರಿಗೆ ಒದಗಿಸಿಲ್ಲ ಎಂಬ ವಾದ ಮಂಡಿಸಿದ್ದಾರೆ.

ಆಡಳಿತ ಅಥವಾ ಸರ್ಕಾರ, ಪ್ರಚೋದನಾಕಾರಿ ಎಂದು ಹೇಳಲಾದ ಭಾಷಣಗಳ ವಿಡಿಯೋಗಳನ್ನು ವಾಂಗ್ಚುಕ್ ಅವರಿಗೆ ನೀಡಿದೆಯೇ ಎಂಬ ಬಗ್ಗೆ ವಿವಾದ ಉಂಟಾಗಿದೆ. ವಿಡಿಯೋಗಳಿರುವ ಪೆನ್‌ಡ್ರೈವ್ ಅನ್ನು ವಾಂಗ್ಚುಕ್ ಅವರಿಗೆ ನೀಡಲಾಗಿದೆ ಎಂದು ಆಡಳಿತ ಪ್ರತಿಪಾದಿಸಿದರೆ, ಅವರಿಗೆ ಆ ವಿಡಿಯೋಗಳನ್ನು ನೋಡಲು ನಿಜಕ್ಕೂ ಅವಕಾಶ ಸಿಕ್ಕಿತ್ತೇ? ಎಂದು ನ್ಯಾಯಾಲಯ ಪ್ರಶ್ನಿಸಿದೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು, ಆಡಳಿತ ವಾಂಗ್ಚುಕ್ ಅವರ ಭಾಷಣಗಳಿಗೆ ಅತಿಯಾದ ಅರ್ಥ ಕಲ್ಪಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಆ ಭಾಷಣಗಳ ಅನುವಾದದಲ್ಲಿ ಕಂಡುಬಂದ ಕೆಲವು ವ್ಯತ್ಯಾಸಗಳ ಬಗ್ಗೆಯೂ ಪೀಠವು ಆಕ್ಷೇಪ ವ್ಯಕ್ತಪಡಿಸಿದೆ ಎಂದು livelaw.in ವರದಿ ಹೇಳಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...