Homeಮುಖಪುಟಮೊಬೈಲ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ತೀವ್ರ ವಿರೋಧದ ಬೆನ್ನಲ್ಲೇ ಆದೇಶ ವಾಪಸ್

- Advertisement -
- Advertisement -

ಸ್ಮಾರ್ಟ್‌ ಫೋನ್ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ (ಡಿ.3) ಹಿಂಪಡೆದಿದೆ.

ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ತನ್ನ ಆದೇಶವನ್ನು ವಾಪಸ್ ತೆಗೆದುಕೊಂಡಿದೆ.

ಆದರೆ, ಸಂಚಾರ್ ಸಾಥಿಗೆ ಹೆಚ್ಚುತ್ತಿರುವ ಸ್ವೀಕೃತಿ ಪರಿಗಣಿಸಿ, ಮೊಬೈಲ್ ತಯಾರಕರಿಗೆ ಪ್ರಿ ಇನ್‌ಸ್ಟಾಲ್ ಕಡ್ಡಾಯಗೊಳಿಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಎಲ್ಲಾ ನಾಗರಿಕರಿಗೆ ಸೈಬರ್ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಎಲ್ಲಾ ಸ್ಮಾರ್ಟ್‌ಫೋನ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಪ್ರಿ- ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಈ ಅಪ್ಲಿಕೇಶನ್ ಸುರಕ್ಷಿತವಾಗಿದೆ ಮತ್ತು ಸೈಬರ್ ಜಗತ್ತಿನ ದುಷ್ಟ ಶಕ್ತಿಗಳಿಂದ ನಾಗರಿಕರಿಗೆ ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಕೇಂದ್ರ ಸಂಪರ್ಕ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ.

ಈ ಅಪ್ಲಿಕೇಶನ್ ನಾಗರಿಕರ ಭಾಗವಹಿಸುವಿಕೆಯನ್ನು (ಜನ್‌ ಭಾಗಿದಾರಿ) ಹೆಚ್ಚಿಸಲು ಸಹಾಯ ಮಾಡುತ್ತದೆ.
ದುಷ್ಕೃತ್ಯಗಳಲ್ಲಿ ತೊಡಗಿರುವವರ ಬಗ್ಗೆ ಅಥವಾ ತಪ್ಪು ಕಾರ್ಯಗಳ ಬಗ್ಗೆ ಜನರು ಸರ್ಕಾರಕ್ಕೆ ಸುಲಭವಾಗಿ ಮಾಹಿತಿ ನೀಡಲು ಇದು ಉಪಯೋಗವಾಗುತ್ತದೆ. ಬಳಕೆದಾರರ ಸುರಕ್ಷತೆಯನ್ನು ಕಾಪಾಡುವುದು ಹೊರತು, ಬೇರೆ ಯಾವುದೇ ಉದ್ದೇಶ ಈ ಆ್ಯಪ್‌ ಹಿಂದೆ ಇಲ್ಲ ಎಂದಿದೆ.

ಇಲ್ಲಿಯವರೆಗೆ 1.4 ಕೋಟಿ ಬಳಕೆದಾರರು ಈ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡಿದ್ದಾರೆ ಮತ್ತು ದಿನಕ್ಕೆ 2000 ವಂಚನೆ ಘಟನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಬಳಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವ ಆದೇಶದ ಮೂಲಕ ಅದರ ಬಳಕೆಯ ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಕಡಿಮೆ ಅರಿವುಳ್ಳ ನಾಗರಿಕರಿಗೆ ಅಪ್ಲಿಕೇಶನ್ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶವಿತ್ತು. ಕಳೆದ ಒಂದು ದಿನದಲ್ಲಿ, 6 ಲಕ್ಷ ನಾಗರಿಕರು ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ಅಪ್ಲಿಕೇಶನ್ ಬಳಕೆ 10 ಪಟ್ಟು ಹೆಚ್ಚಾಗಿದೆ. ಇದು ಸರ್ಕಾರ ತಮಗೆ ಒದಗಿಸಿದ ಅಪ್ಲಿಕೇಶನ್‌ನಲ್ಲಿ ನಾಗರಿಕರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ನಂಬಿಕೆಯ ದೃಢೀಕರಣವಾಗಿದೆ ಎಂದು ಸಂಪರ್ಕ ಇಲಾಖೆ ಹೇಳಿದೆ.

ಸಂಚಾರ್ ಸಾಥಿ ಕಡ್ಡಾಯದ ವಿರುದ್ದ ತೀವ್ರ ವಿರೋಧಗಳು ವ್ಯಕ್ತವಾದ ಹಿನ್ನೆಲೆ, ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ ಸಿಂಧಿಯಾ ಬುಧವಾರ ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ್ದರು. “ಸಂಚಾರ್ ಸಾಥಿ’ ಆ್ಯಪ್ ಮೂಲಕ ಗೂಡಾಚರ್ಯೆ ನಡೆಯಲು ಸಾಧ್ಯವಿಲ್ಲ. ಜನರ ಪ್ರತಿಕ್ರಿಯೆಗಳನ್ನು ಅನುಸರಿಸಿ ಮೊಬೈಲ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್‌ಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ” ಎಂದು ಹೇಳಿದ್ದರು.

ಸಂಚಾರ್ ಸಾಥಿ ಆ್ಯಪ್‌ನಿಂದ ಬೇಹುಗಾರಿಕೆ ಕುರಿತು ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಚಿವ ಸಿಂಧಿಯಾ, “ಸಂಚಾರ್ ಸಾಥಿ ಆ್ಯಪ್‌ನಿಂದ ಯಾವುದೇ ಗೂಢಚಾರಿಕೆ ಸಾಧ್ಯವಿಲ್ಲ, ಯಾವುದೇ ಗೂಢಚಾರಿಕೆ ಸಂಭವಿಸುವುದಿಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...