Homeಮುಖಪುಟಪಕ್ಷಪಾತ, ಅಸ್ಪಷ್ಟತೆ ಆರೋಪ : ವಿಕಿಪೀಡಿಯಾದಿಂದ ವಿವರಣೆ ಕೇಳಿದ ಕೇಂದ್ರ

ಪಕ್ಷಪಾತ, ಅಸ್ಪಷ್ಟತೆ ಆರೋಪ : ವಿಕಿಪೀಡಿಯಾದಿಂದ ವಿವರಣೆ ಕೇಳಿದ ಕೇಂದ್ರ

- Advertisement -
- Advertisement -

ವಿಕಿಪೀಡಿಯಾದಲ್ಲಿ ಪ್ರಕಟವಾಗುವ ಲೇಖನಗಳ ಬಗ್ಗೆ ‘ಪಕ್ಷಪಾತ ಮತ್ತು ಅಸ್ಪಷ್ಟತೆ’ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ ಎಂದು ಎಎನ್‌ಐ ವರದಿ ಮಾಡಿದೆ.

ವಿಕಿಪೀಡಿಯಾವನ್ನು ಮಧ್ಯವರ್ತಿ ಬದಲಿಗೆ ಪ್ರಕಾಶಕ ಎಂದು ಏಕೆ ಪರಿಗಣಿಸಬಾರದು? ಎಂದು ವಿವರಣೆ ನೀಡಲು ಕೇಂದ್ರ ಸರ್ಕಾರ ಸೂಚಿಸಿದೆ.

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ನೋಟಿಸ್‌ನಲ್ಲಿ ವಿಕಿಪೀಡಿಯಾ ವಿರುದ್ದದ ಹಲವು ದೂರುಗಳನ್ನು ಉಲ್ಲೇಖಿಸಿದೆ. ವಿಕಿಪೀಡಿಯಾದ ಸಂಪಾದಕೀಯ ನಿಯಂತ್ರಣವು ಒಂದು ಸಣ್ಣ ಗುಂಪಿನ ಕೈಯಲ್ಲಿದೆ ಎಂದು ತೋರುತ್ತದೆ. ಇದು ತಟಸ್ಥ, ಸ್ವಯಂ ಸೇವಕ ಆಧಾರಿತ ಸಂಪನ್ಮೂಲ ಎಂಬ ವಿಕಿಪೀಡಿಯಾದ ಹಕ್ಕನ್ನು ಪ್ರಶ್ನಿಸುತ್ತದೆ ಎಂದು ಹೇಳಿದೆ.

ವಿಕಿಪೀಡಿಯಾ ಮತ್ತು ಎಎನ್‌ಐನ ಪ್ರಕರಣದ ವಿಚಾರಣೆ ವೇಳೆ ವಿಕಿಪೀಡಿಯಾವನ್ನು ತರಾಟೆಗೆ ತೆಗೆದುಕೊಂಡಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ನವೀನ್ ಚಾವ್ಲಾ ಅವರು “ವಿಕಿಪೀಡಿಯಾ ಮೂಲತಃ ಭಾರತದ್ದು ಆಗಿರದೇ ಇರಬಹುದು. ಆದರೆ, ಭಾರತದಲ್ಲಿ ಕಾರ್ಯನಿರ್ವಹಿಸುವಾಗ ಇಲ್ಲಿನ ಕಾನೂನು ಪಾಲಿಸಬೇಕು. ಇಲ್ಲದಿದ್ದರೆ, ನಿಮ್ಮ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕಾಗುತ್ತದೆ. ನಿಮ್ಮ ಕಾರ್ಯಾಚರಣೆಯನ್ನು ಭಾರತದಲ್ಲಿ ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕಾಗುತ್ತದೆ” ಎಂದು ಎಚ್ಚರಿಸಿದ್ದರು.

ವಿಕಿಪೀಡಿಯ ತನ್ನನ್ನು ತಾನು ಉಚಿತ ಆನ್‌ಲೈನ್ ವಿಶ್ವಕೋಶವಾಗಿ ಪ್ರಚಾರ ಮಾಡುತ್ತದೆ. ಇದು ಬಳಕೆದಾರರಿಗೆ ಯಾವುದೇ ವಿಷಯಗಳ ಮೇಲೆ ಪುಟಗಳನ್ನು ರಚಿಸಲು ಮತ್ತು ಸಂಪಾದಿಸಲು ಅನುಮತಿಸುತ್ತದೆ. ಪ್ರಸ್ತುತ ಸುದ್ದಿ ಸಂಸ್ಥೆ ಎಎನ್‌ಐ ಕುರಿತು ಆಪಾದಿತ ಮಾನನಷ್ಟ ಮತ್ತು ತಪ್ಪಾದ ಮಾಹಿತಿಯನ್ನು ಪ್ರಕಟಿಸಿದ ಆರೋಪದಲ್ಲಿ ಭಾರತದಲ್ಲಿ ವಿಕಿಪೀಡಿಯಾಗೆ ಕಾನೂನು ಸವಾಲು ಎದುರಾಗಿದೆ.

ವಿಕಿಪೀಡಿಯಾ ಪುಟದಲ್ಲಿ ಎಎನ್‌ಐ ಸುದ್ದಿ ಸಂಸ್ಥೆಯನ್ನು “ಕೇಂದ್ರ ಸರ್ಕಾರದ ಪ್ರಚಾರ ಸಾಧನ” ಎಂದು ಉಲ್ಲೇಖಿಸಿರುವ ಆರೋಪವಿದೆ. ಈ ಕಾರಣಕ್ಕೆ ವಿಕಿಪೀಡಿಯಾ ವಿರುದ್ದ ಎಎನ್‌ಐ ಮಾನನಷ್ಟ ಮೊಕದ್ದಮೆ ಹೂಡಿದೆ. ಈ ಪ್ರಕರಣದಲ್ಲಿ ಮಾಹಿತಿ ಸಂಪಾದಿಸಿ ಮೂವರು ವ್ಯಕ್ತಿಗಳ ಗುರುತನ್ನು ಬಹಿರಂಗಪಡಿಸುವಂತೆ ವಿಕಿಪೀಡಿಯಾಗೆ ನ್ಯಾಯಾಲಯ ಆದೇಶಿಸಿತ್ತು.

ಭಾರತದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರದ ಕಾರಣ ಆದೇಶ ಪಾಲಿಸಲು ಹೆಚ್ಚಿನ ಸಮಯವಕಾಶವನ್ನು ನೀಡುವಂತೆ ವಿಕಿಪೀಡಿಯಾ ನ್ಯಾಯಾಲವನ್ನು ಕೋರಿತ್ತು. ಆದರೆ, ನ್ಯಾಯಮೂರ್ತಿ ಚಾವ್ಲಾ ಅವರು ಮನವಿಯನ್ನು ತಳ್ಳಿ ಹಾಕಿ, ತಕ್ಷಣವೇ ಪ್ರತಿಕ್ರಿಯಿಸಬೇಕು ಎಂದು ಸೂಚಿಸಿದ್ದಾರೆ. ನ್ಯಾಯಾಲಯದ ಆದೇಶ ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಕೂಡ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ : ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...