Homeಮುಖಪುಟದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

- Advertisement -
- Advertisement -

ದಾಖಲೆರಹಿತ ವಲಸಿಗರನ್ನು ಗಡಿಪಾರು ಮಾಡುವವರೆಗೆ ಅವರ ಓಡಾಟವನ್ನು ನಿರ್ಬಂಧಿಸಲು ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಈ ಸಂಬಂಧ, ವಲಸೆ ಮತ್ತು ವಿದೇಶಿಯರ ಆದೇಶ, 2025ರ ಭಾಗವಾಗಿ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಸೆ.1) ಅಧಿಸೂಚನೆ ಹೊರಡಿಸಿದೆ.

ವಲಸೆ ಮತ್ತು ವಿದೇಶಿಯರ ಕಾಯ್ದೆ, 2025ರ ಅಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾಯ್ದೆಯನ್ನು 2025ರ ಏಪ್ರಿಲ್‌ನಲ್ಲಿ ಸಂಸತ್ತು ಅಂಗೀಕರಿಸಿದೆ. ಇದು 1920ರ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1939ರ ವಿದೇಶಿಯರ ನೋಂದಣಿ ಕಾಯ್ದೆ, 1946 ವಿದೇಶಿಯರ ಕಾಯ್ದೆ ಮತ್ತು ವಲಸೆ ವಾಹಕರ ಹೊಣೆಗಾರಿಕೆ ಕಾಯ್ದೆ, 2000 ಅನ್ನು ಬದಲಾಯಿಸಿದೆ.

ವಿದೇಶಿಗಳನ್ನು ವಿಚಾರಣೆ ನಡೆಸುವ ಮೂಲಕ, ಯಾವುದೇ ವಿಮಾನ ಅಥವಾ ಇತರ ಸಾರಿಗೆ ವಿಧಾನವನ್ನು ಪರಿಶೀಲಿಸುವ ಮೂಲಕ ಮತ್ತು ಯಾವುದೇ ಸ್ಥಳವನ್ನು ಪರಿಶೀಲಿಸುವ ಮೂಲಕ ‘ಕಾಲಕಾಲಕ್ಕೆ’ ಭಾರತದಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರದ ಆದೇಶದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಲಾಗಿದೆ.

ದಾಖಲೆರಹಿತ ವಲಸಿಗರು ಕಂಡುಬಂದರೆ ಅವರನ್ನು ಬಂಧನ ಕೇಂದ್ರಗಳಲ್ಲಿ ಇಟ್ಟು ಓಡಾಟಕ್ಕೆ ನಿರ್ಬಂಧ ವಿಧಿಸುವಂತೆ ಮತ್ತು ಅವರನ್ನು ಗಡಿಪಾರು ಮಾಡಲು ಅಧಿಕಾರಿಗಳು ‘ಸೂಕ್ತ ಕ್ರಮಗಳನ್ನು’ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಈ ಅಧಿಸೂಚನೆಯೊಂದಿಗೆ ಕೇಂದ್ರ ಸರ್ಕಾರವು ಯಾವುದೇ ವ್ಯಕ್ತಿಗೆ ಸಮನ್ಸ್‌ ನೀಡುವ ಮತ್ತು ಅವರು ತನ್ನ ಮುಂದೆ ಹಾಜರಾಗಲು ವಿಫಲವಾದರೆ ಬಂಧನ ವಾರಂಟ್ ಹೊರಡಿಸುವ ಅಧಿಕಾರವನ್ನು ವಿದೇಶಿ ನ್ಯಾಯಮಂಡಳಿಗಳಿಗೆ ನೀಡಿದೆ.

ಕೇಂದ್ರದ ಅಧಿಸೂಚನೆ ದೇಶದಾದ್ಯಂತ ಅನ್ವಯವಾಗುತ್ತಿದ್ದರೂ, ವಿದೇಶಿಯರ ನ್ಯಾಯಮಂಡಳಿಗಳು ಪ್ರಸ್ತುತ ಅಸ್ಸಾಂನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇತರ ರಾಜ್ಯಗಳಲ್ಲಿ, ದಾಖಲೆರಹಿತ ವಲಸಿಗರನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಲಾಗುತ್ತದೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಅರೆ-ನ್ಯಾಯಾಂಗ ಸಂಸ್ಥೆಗಳಾಗಿದ್ದು, ಅವು ವಂಶಾವಳಿ ಮತ್ತು 1971ರ ಅಂತಿಮ ದಿನಾಂಕದ ಆಧಾರದ ಮೇಲೆ ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುತ್ತವೆ. ಅವು ಪ್ರಾಥಮಿಕವಾಗಿ 1971ಕ್ಕಿಂತ ಮೊದಲು ಅಸ್ಸಾಂ ಅಥವಾ ಭಾರತದಲ್ಲಿ ತಮ್ಮ ಕುಟುಂಬದ ವಾಸವನ್ನು ಖಚಿತಪಡಿಸಲು ವ್ಯಕ್ತಿಗಳು ಸಲ್ಲಿಸಿದ ದಾಖಲೆಗಳನ್ನು ಅವಲಂಬಿಸಿವೆ.

ಆದರೆ, ಈ ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗ್ತಿದೆ.

ದೇಶದ ಯಾವುದೇ ನ್ಯಾಯಾಲಯಕ್ಕೆ ಒಬ್ಬರು ವ್ಯಕ್ತಿಯ ಉಪಸ್ಥಿತಿ ಅಗತ್ಯವಿದ್ದರೆ ಅಥವಾ ಅವರು ದೇಶದಿಂದ ಹೊರಹೋಗುವುದು ವಿದೇಶಿ ಸಂಬಂಧದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿದ್ದರೆ ಅಂತವರು ದೇಶ ತೊರೆಯಲು ಅನುಮತಿ ನಿರಾಕರಿಸಬಹುದು ಎಂದು ಸೋಮವಾರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಹೇಳಿದೆ.

ಭಾರತವನ್ನು ತೊರೆಯಲು ಅನುಮತಿ ತಡೆ ಹಿಡಿದ ವ್ಯಕ್ತಿಗಳ ಪಟ್ಟಿಯನ್ನು ವಲಸೆ ಬ್ಯೂರೋ ನಿರ್ವಹಿಸುತ್ತದೆ.

ಖಾಸಗಿ ವಲಯದಲ್ಲಿ ವಿದೇಶಿಯರನ್ನು ನೇಮಿಸಿಕೊಳ್ಳುವ ಮಾರ್ಗಸೂಚಿಗಳನ್ನೂ ಕೂಡ ಗೃಹ ಸಚಿವಾಲಯದ ಆದೇಶ ಪಟ್ಟಿ ಮಾಡಿದೆ. ನಾಗರಿಕ ಪ್ರಾಧಿಕಾರದ ಅನುಮತಿಯಿಲ್ಲದೆ, ಯಾವುದೇ ವಿದೇಶಿಯರೂ ಕೂಡ ‘ಖಾಸಗಿ ವಲಯದ ವಿದ್ಯುತ್, ನೀರು ಪೂರೈಕೆಯಲ್ಲಿ ಅಥವಾ ಪೆಟ್ರೋಲಿಯಂ ವಲಯದಲ್ಲಿ ತೊಡಗಿರುವ ಉದ್ಯಮಗಳಲ್ಲಿ ಉದ್ಯೋಗ ಪಡೆಯಲು ಅವಕಾಶವಿಲ್ಲ ಎಂದು ಹೇಳಿದೆ.

ರಕ್ಷಣೆ, ಬಾಹ್ಯಾಕಾಶ ತಂತ್ರಜ್ಞಾನ, ಪರಮಾಣು ಶಕ್ತಿ, ಮಾನವ ಹಕ್ಕುಗಳು ಅಥವಾ ಇವುಗಳ ಪರವಾಗಿ ನಿರ್ದಿಷ್ಟಪಡಿಸಿದ ಯಾವುದೇ ವಲಯದಲ್ಲಿ ತೊಡಗಿಸಿಕೊಂಡಿರುವ ಖಾಸಗಿ ವಲಯದ ಯಾವುದೇ ಉದ್ಯಮವು ಕೇಂದ್ರ ಸರ್ಕಾರದ ಪೂರ್ವಾನುಮತಿಯಿಲ್ಲದೆ ಯಾವುದೇ ವಿದೇಶಿಯರನ್ನು ನೇಮಿಸಿಕೊಳ್ಳಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂನಲ್ಲಿ CAA ಅಡಿಯಲ್ಲಿ ಕೇವಲ ಮೂವರು ವಿದೇಶಿಯರಿಗೆ ಪೌರತ್ವ: ಮುಖ್ಯಮಂತ್ರಿ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...