Homeಕರ್ನಾಟಕರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ವಿವಾದ ಸೌಹಾರ್ದಯುತವಾಗಿ ಬಗೆಹರಿಸಲು ಸುಪ್ರೀಂಕೋರ್ಟ್‌ ಸೂಚನೆ

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಳಂಬ: ವಿವಾದ ಸೌಹಾರ್ದಯುತವಾಗಿ ಬಗೆಹರಿಸಲು ಸುಪ್ರೀಂಕೋರ್ಟ್‌ ಸೂಚನೆ

- Advertisement -
- Advertisement -

ಕೇಂದ್ರದಿಂದ ರಾಜ್ಯಕ್ಕೆ ಬರ ಬೇಕಿದ್ದ ಬರ ಪರಿಹಾರದ 35,162 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನಕ್ಕೆ ಕೋರಿ ಕರ್ನಾಟಕ ಸರ್ಕಾರ ಮಾಡಿರುವ ಮನವಿಯ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಈ ಕುರಿತ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಚುನಾವಣಾ ಆಯೋಗವು ಸಮಸ್ಯೆಯನ್ನು ನಿಭಾಯಿಸಲು ಕೇಂದ್ರಕ್ಕೆ ಅನುಮತಿ ನೀಡಿದೆ ಎಂದು ಕೇಂದ್ರ ಸರಕಾರವು ಇದೇ ವೇಳೆ ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದೆ.

ಬರ ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರವು 35,162 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಕರ್ನಾಟಕ ಸರ್ಕಾರದ ಮನವಿಯನ್ನು ಪರಿಹರಿಸಲು ಕೇಂದ್ರ ಸರಕಾರವು, ಭಾರತದ ಚುನಾವಣಾ ಆಯೋಗದಿಂದ (ಇಸಿಐ) ಕ್ಲಿಯರೆನ್ಸ್ ಪಡೆದುಕೊಂಡಿದೆ ಎಂದು ನ್ಯಾಯಮೂರ್ತಿ ಭೂಷಣ್ ಆರ್ ಗವಾಯಿ ನೇತೃತ್ವದ ಪೀಠಕ್ಕೆ ಕೇಂದ್ರವು ತಿಳಿಸಿದೆ, ನಿಧಿ ಬಿಡುಗಡೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ನ್ಯಾಯಾಲಯವು ಇದೇ ವೇಳೆ ಒತ್ತಿ ಹೇಳಿದೆ.

ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠದ ಮುಂದೆ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಇಸಿಐ ಒಪ್ಪಿಗೆ ನೀಡಿದ ನಂತರ ಒಂದು ವಾರದೊಳಗೆ ವಿಷಯ ಮುಂದುವರಿಯುವ ನಿರೀಕ್ಷೆಯಿದೆ. ಚುನಾವಣಾ ಆಯೋಗವು ಸಮಸ್ಯೆಯನ್ನು ನಿಭಾಯಿಸಲು ಕೇಂದ್ರಕ್ಕೆ ಅವಕಾಶ ನೀಡಿದೆ. ಮುಂದಿನ ಸೋಮವಾರದ ಮೊದಲು ಪ್ರಕ್ರಿಯೆ ತ್ವರಿತವಾಗಿ ಮಾಡಲಾಗುವುದು. ಸದ್ಯಕ್ಕೆ ವಾದ ಮಾಡುವ ಅಗತ್ಯವಿಲ್ಲ ಎಂದು ಎಜಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂಕೋರ್ಟ್‌ ಪೀಠ, ಕೇಂದ್ರ ಮತ್ತು ರಾಜ್ಯಗಳ ನಡುವೆ ಸಹಕಾರದ ಅಗತ್ಯವನ್ನು ಹೇಳಿದೆ.

ಈ ಸಮಸ್ಯೆಯನ್ನು ನಾವು ಸೌಹಾರ್ದಯುತವಾಗಿ ಪರಿಹರಿಸಬೇಕು. ಈ ವಿಷಯಗಳಿಗೆ ನ್ಯಾಯಾಲಯದ ಹಸ್ತಕ್ಷೇಪದ ಅಗತ್ಯವಿಲ್ಲ. ನಾವು ಒಕ್ಕೂಟ ವ್ಯವಸ್ಥೆಯನ್ನು ಹೊಂದಿದ್ದೇವೆ. ಈ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

ಎ-ಜಿ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಬ್ಬರೂ ಕೇಂದ್ರ ಸರಕಾರವನ್ನು ಪ್ರತಿನಿಧಿಸಿದ್ದು, ಸಮಸ್ಯೆಯನ್ನು ಪರಿಹರಿಸಲು ನ್ಯಾಯಾಲಯದಿಂದ ಒಂದು ವಾರಗಳ ಕಾಲಾವಕಾಶ ಕೋರಿದ್ದಾರೆ. ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಕೂಡ ಮುಂದೂಡಿಕೆಗೆ ಒಪ್ಪಿಗೆ ಸೂಚಿಸಿದ್ದರಿಂದ ಪೀಠವು ಅವರ ಮನವಿಯನ್ನು ಸ್ವೀಕರಿಸಿ ವಿಚಾರಣೆಯನ್ನು ಮುಂದೂಡಿದೆ.

ಸುಪ್ರೀಂಕೋರ್ಟ್ ಏಪ್ರಿಲ್ 8ರಂದು ನಡೆದ ತನ್ನ ಕೊನೆಯ ವಿಚಾರಣೆಯಲ್ಲಿ, ನ್ಯಾಯಾಲಯದಲ್ಲಿ ಹೋರಾಟದ ಬದಲಿಗೆ ಅಂತಹ ವಿವಾದಗಳ ಸೌಹಾರ್ದಯುತ ಪರಿಹಾರಕ್ಕೆ ಒಲವು ತೋರಿತ್ತು. ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಎರಡು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರ ಈ ಮೊದಲು ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಈ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಐದು ತಿಂಗಳು ಕಾದರೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಟಿಲ್ಲ. ಹಾಗಾಗಿ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಸರ್ಕಾರದ ವಿರುದ್ದ ಸಂವಿಧಾನದ ವಿಧಿ 32ರಡಿ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇವೆ. ನಮಗೆ ಸಿಗಬೇಕಾದ ಪರಿಹಾರ ಸಿಗಬೇಕು ಎಂದು ಹೇಳಿದ್ದರು.

ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಬರ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ ಪರಿಹಾರವನ್ನು ಬಿಡುಗಡೆ ಮಾಡಿರಲಿಲ್ಲ. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು  ಸಿಎಂ ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. ಆದರೆ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದಲ್ಲದೆ ಸಿಎಂ ಸಿದ್ದರಾಮಯ್ಯ, ಸಚಿವರು, ಶಾಸಕರೊಂದಿಗೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ಧರಣಿಯನ್ನು ನಡೆಸಿ ದೇಶದ ಗಮನ ಸೆಳೆದಿದ್ದರು.

ಇದನ್ನು ಓದಿ: ದ್ವೇಷ ಭಾಷಣಕ್ಕಾಗಿ ನಿಷೇಧಕ್ಕೊಳಗಾಗಿದ್ದ ಬಾಳ್ ಠಾಕ್ರೆ: ಮೋದಿ ಬಗ್ಗೆ ಚುನಾವಣಾ ಆಯೋಗದ ನಿಲುವೇನು? ಕಾನೂನು ಏನು ಹೇಳುತ್ತೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪ್ರದೇಶ: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಢಿಕ್ಕಿ: ಇಬ್ಬರು ಮೃತ್ಯು

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಪುತ್ರ ಕೈಸರ್‌ಗಂಜ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕರಣ್‌ ಭೂಷಣ್‌ ಸಿಂಗ್‌ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ...