Homeಕರ್ನಾಟಕಕರ್ನಾಟಕಕ್ಕೆ ಬಾಕಿ ಉಳಿಸಿದ್ದ 2,300 ಕೋಟಿ ಜಿಎಸ್‌ಟಿ ಪರಿಹಾರ ಬಿಡುಗಡೆಗೆ ಕೇಂದ್ರ ಒಪ್ಪಿಗೆ

ಕರ್ನಾಟಕಕ್ಕೆ ಬಾಕಿ ಉಳಿಸಿದ್ದ 2,300 ಕೋಟಿ ಜಿಎಸ್‌ಟಿ ಪರಿಹಾರ ಬಿಡುಗಡೆಗೆ ಕೇಂದ್ರ ಒಪ್ಪಿಗೆ

- Advertisement -
- Advertisement -

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬಾಕಿ ಇರಿಸಿಕೊಂಡಿರುವ 2,300 ಕೋಟಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ಬಿಡುಗಡೆಗೆ ಒಪ್ಪಿಗೆ ನೀಡಿದೆ.

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಕರ್ನಾಟಕ ಬಾಕಿ ಇರಿಸಿಕೊಂಡಿರುವ 2,300 ಕೋಟಿ ಸರಕು ಮತ್ತು ಸೇವಾ ತೆರಿಗೆ ಬಾಕಿ ಬಿಡುಗಡೆಗೆ ಆಗ್ರಹಿಸಿತ್ತು. ಈ ವೇಳೆ ಜಿಎಸ್‌ಟಿ ಪಾಲನ್ನು ಬಿಡುಗಡೆಗೆ ಕೇಂದ್ರ ಸರ್ಕಾರ ಒಪ್ಪಿದೆ.

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದು, 2022ರ ಏಪ್ರಿಲ್‌, ಮೇ ಹಾಗೂ ಜೂನ್‌ ತಿಂಗಳ ಜಿಎಸ್‌ಟಿ ಪರಿಹಾರದಲ್ಲಿ 2,300 ಕೋಟಿಯಷ್ಟು ಬಾಕಿ ಉಳಿದಿದೆ. ಕರ್ನಾಟಕಕ್ಕೆ ಜಿಎಸ್‌ಟಿ ಪರಿಹಾರ ಬಾಕಿ ಉಳಿದಿರುವ ಬಗ್ಗೆ ಸಿಎಜಿ ವರದಿಯಲ್ಲೂ ದೃಢಪಡಿಸಲಾಗಿದೆ. ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅವರು ಸಭೆಯಲ್ಲಿ ಆಗ್ರಹಿಸಿದ್ದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಭೆಯಲ್ಲೇ ಅಧಿಕಾರಿಗಳಿಗೆ ಬಾಕಿ ಮೊತ್ತವನ್ನು ಪಾವತಿಸುವಂತೆ ಸೂಚಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ, ಕೇಂದ್ರ ಸರಕಾರ ತಮ್ಮ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದೆ. ಶೀಘ್ರವೇ ಪರಿಹಾರ ಬಿಡುಗಡೆಯ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಹಾರದಂತೆ ದೇಶದಾದ್ಯಂತ ಜಾತಿಗಣತಿ ನಡೆಸಬೇಕು; ತೇಜಸ್ವಿ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ...

0
ಕಾಂಗ್ರೆಸ್‌ ಪ್ರಣಾಳಿಕೆಯ ಬಗ್ಗೆ ಮೋದಿ, ಅಮಿತ್‌ ಶಾ ಚುನಾವಣಾ ಭಾಷಣದಲ್ಲಿ ಸುಳ್ಳು ಆಪಾದನೆ ಮಾಡುತ್ತಿರುವ ಮಧ್ಯೆ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಚರ್ಚೆಗೆ ನರೇಂದ್ರ ಮೋದಿ ಅಥವಾ ಅವರಿಂದ ನಿಯೋಜಿಸಲ್ಪಟ್ಟ ಯಾರಾದರು ಬನ್ನಿ ಎಂದು...