Homeಮುಖಪುಟಚುನಾವಣೆಗೂ ಮುನ್ನ ಟಿಎಂಸಿ ನಾಯಕ ಅಭಿಷೇಕ್ ಬಂಧನಕ್ಕೆ ಕೇಂದ್ರದ ಯತ್ನ: ಮಮತಾ ಬ್ಯಾನರ್ಜಿ

ಚುನಾವಣೆಗೂ ಮುನ್ನ ಟಿಎಂಸಿ ನಾಯಕ ಅಭಿಷೇಕ್ ಬಂಧನಕ್ಕೆ ಕೇಂದ್ರದ ಯತ್ನ: ಮಮತಾ ಬ್ಯಾನರ್ಜಿ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೂ ಮುನ್ನ ತೃಣಮೂಲ ಕಾಂಗ್ರೆಸ್‌ನ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಬಂಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಕೋಲ್ಕತ್ತದಲ್ಲಿ ಟಿಎಂಸಿ ಯುವ ಘಟಕದ ರಾಲಿಯಲ್ಲಿ ಮಾತನಾಡಿದ ಅವರು, ”ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದೆ. ನಾನು ಕೇಂದ್ರದಲ್ಲಿ ಇಂತಹ ಸೇಡಿನ ಸರ್ಕಾರವನ್ನು ಇದುವರೆಗೆ ನೋಡಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇ.ಡಿ ದಾಳಿಗೆ ಸಂಬಂಧಿಸಿ ಲೋಕಸಭೆ ಚುನಾವಣೆಗೂ ಮುನ್ನ ಅಭಿಷೇಕ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ವ್ಯಕ್ತಿಯೊಬ್ಬರು ನನಗೆ ಸಂದೇಶ ರವಾನಿಸಿದ್ದಾರೆ ಎಂದು ಮಮತಾ ಹೇಳಿದ್ದಾರೆ.

ಬಿಜೆಪಿಯು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು. ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲಾ ಚಾಪರ್‌ಗಳನ್ನು ಕಾಯ್ದಿರಿಸಿದೆ. ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸಬಾರದು ಎಂಬ ಉದ್ದೇಶ ಅವರಲ್ಲಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಭಾರತದಲ್ಲಿ ಬಿಜೆಪಿಗೆ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ದೇಶವು ಸರ್ವಾಧಿಕಾರಿ ಆಡಳಿತವನ್ನು ಎದುರಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.

”ಸತತ ಮೂರನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಅವರು (ಬಿಜೆಪಿ) ಡಿಸೆಂಬರ್ 2023 ರಲ್ಲಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂಬ ಆತಂಕ ನನ್ನಲ್ಲಿದೆ” ಎಂದು ಹೇಳಿದ್ದಾರೆ.

”ಕೇಸರಿ ಪಕ್ಷವು ಈಗಾಗಲೇ ನಮ್ಮ ದೇಶದಲ್ಲಿ ಸಮೂಹಗಳ ನಡುವೆ ಒಡುಕು ಉಂಟು ಮಾಡಿದೆ. ವೈರತ್ವದ ರಾಷ್ಟ್ರವನ್ನಾಗಿ ಪರಿವರ್ತಿಸಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ, ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ಬಂಗಾಳದಲ್ಲಿ ಮೂರು ದಶಕ ಆಡಳಿತ ನಡೆಸಿದ ಸಿಪಿಎಂ ಅನ್ನು ಟಿಎಂಸಿ ಮಣಿಸಿದೆ. ಈಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತದೆ ಎಂದು ಮಮತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಕೇಂದ್ರ ಸರಕಾರಕ್ಕೆ ಮಾತ್ರ ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...