Homeಮುಖಪುಟಕೇಂದ್ರದ ಬಜೆಟ್‌ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ: ಕೆಪಿಸಿಸಿ ಲೇವಡಿ

ಕೇಂದ್ರದ ಬಜೆಟ್‌ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ: ಕೆಪಿಸಿಸಿ ಲೇವಡಿ

- Advertisement -
- Advertisement -

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), “20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಬಿಳಿ ಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ! ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ. ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿ ಮಾಡಿದೆ ಕೇಂದ್ರ ಸರ್ಕಾರ” ಎಂದಿದೆ.

“ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ ಕರ್ನಾಟಕ ಬಿಜೆಪಿ ಉತ್ತರಿಸಬೇಕು. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಸಿಗದಿರುವುದೇಕೆ? 23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ? ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ?” ಎಂದು ಪ್ರಶ್ನಿಸಿದೆ.

“ಸಬ್ ಅರ್ಬನ್ ರೈಲು ಕಾಮಗಾರಿಗೆ ನಿಗದಿಪಡಿಸಿದ್ದ ಕಾಲಮಿತಿ ಮುಗಿಯುತ್ತಿದೆ, 18 ಸಾವಿರ ಕೋಟಿಯ ಯೋಜನೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಹಣ ನೀಡಿದ್ದು ಕರ್ನಾಟಕದೆಡೆಗೆ ಕೇಂದ್ರ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ನಿದರ್ಶನ. ನಿಗದಿತ ಕಾಲಮಿತಿಯಲ್ಲಿ ಖಂಡಿತವಾಗಿಯೂ ಪೂರ್ಣಗೊಳಿಸುವ ಇರಾದೆ ಬಿಜೆಪಿಗಿಲ್ಲ” ಎಂದು ಟೀಕಿಸಿದೆ.

“ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದ ರೈತರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು. ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ” ಎಂದು ಕುಟುಕಿದೆ.

“ಮಧ್ಯಮ ವರ್ಗ ಆದಾಯವನ್ನೇ ಕಳೆದುಕೊಂಡಿದೆ, ಜನರ ಆದಾಯಕ್ಕೆ ಹೊಡೆತ ಕೊಟ್ಟು ಆದಾಯ ತೆರಿಗೆ ಮಿತಿ ಏರಿಸಿದರೆ ಪ್ರಯೋಜನವೇನು?! ಜನರ ಆದಾಯವನ್ನು ವೃದ್ಧಿಸುವ ವಾತಾವರಣ ಸೃಷ್ಟಿಸುವಲ್ಲಿ ಬಜೆಟ್ ವಿಫಲವಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

ರಾಜ್ಯ ಬಿಜೆಪಿ ಶ್ಲಾಘನೆ

ಕೇಂದ್ರ ಬಜೆಟ್‌ ಅನ್ನು ರಾಜ್ಯ ಬಿಜೆಪಿ ಶ್ಲಾಘಿಸಿದೆ. ‘ಅಮೃತ ಕಾಲದ ಬಜೆಟ್‌’ ಎಂದು ಬಣ್ಣಿಸಿದೆ.

“ರಾಜ್ಯಗಳ ಬಂಡವಾಳ ವೆಚ್ಚದ ಮಿತಿಯನ್ನು 1.3 ಲಕ್ಷ ಕೋಟಿಗೆ ಹೆಚ್ಚಿಸಲಾಗಿದ್ದು, ಇದು ಕಳೆದ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ್ದ ಮೊತ್ತಕ್ಕಿಂತ ಶೇ. 30ರಷ್ಟು ಹೆಚ್ಚಳವಾಗಿದೆ. ರಾಜ್ಯಗಳಿಗೆ 50 ವರ್ಷ ಬಡ್ಡಿ ರಹಿತ ಸಾಲ ಸೌಲಭ್ಯವನ್ನು ಮುಂದುವರಿಸಲಾಗಿದೆ” ಎಂದಿದೆ.

“ಮಧ್ಯಮವರ್ಗದ ಮೇಲಿದ್ದ ತೆರಿಗೆಯ ಭಾರವನ್ನು ಗಣನೀಯವಾಗಿ ತಗ್ಗಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದೇಶದ ಜನಮೆಚ್ಚುಗೆ ಗಳಿಸಿದೆ. ರೂ. 3 ಲಕ್ಷದವರೆಗೆ ವೈಯುಕ್ತಿಕ ತೆರಿಗೆಯ ಹೊರೆಯನ್ನು ಇಳಿಸಿರುವುದು ಮಧ್ಯಮವರ್ಗದ ಮುಖದಲ್ಲಿ ಮಂದಹಾಸ ಮೂಡಿದೆ” ಎಂದು ಅಭಿಪ್ರಾಯಪಟ್ಟಿದೆ.

“ಪಿಎಂ ವಿಶ್ವಕರ್ಮ ಕೌಶಲ ಸನ್ಮಾನ್ ಯೋಜನೆಯಡಿ ಪಾರಂಪರಿಕ ಕರಕುಶಲಕರ್ಮಿಗಳಿಗೆ ನೆರವಾಗಲು ಕಾರ್ಯಕ್ರಮ ರೂಪಿಸಲಾಗುವುದು. ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳೊಂದಿಗೆ ಇವರನ್ನು ಜೋಡಿಸಿ, ಕುಶಲಕರ್ಮಿಗಳ ಅರ್ಥಿಕ ಸ್ಥಿತಿಗತಿ ಸುಧಾರಿಸಲು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...