Homeಕರ್ನಾಟಕ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಯೋಜನೆಗಳನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಿಬಿಜೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ರಾಜ್ಯದ ಮತದಾರರು ಸಿಡಿದೆದ್ದಿದ್ದಾರೆ. “ರಾಜ್ಯದ ಜನತೆ ತೆರೆಗೆ ಕೊಡುವುದನ್ನೇ ನಿಲ್ಲಿಸಬೇಕಾಗುತ್ತದೆ, ನಮ್ಮಿಂದ ನೀವೇ ಹೊರತು, ನಿಮ್ಮಿಂದ ನಾವಲ್ಲ” ಎಂದು ಅಭಿಪ್ರಾಯ ತಾಳುತ್ತಿದ್ದಾರೆ.

“ಬಿಜೆಪಿ ಸೋತರೆ ಕರ್ನಾಟಕದಿಂದ ಕೇಂದ್ರ ಸಂಗ್ರಹಿಸುವ ಜಿಎಸ್‌ಟಿಯೂ ಬಂದ್ ಎಂದು ಹೇಳಿಕೆ ನೀಡುವ ದಮ್ಮು ತಾಕತ್ತು ಇದೆಯೇ ನಡ್ಡಾ ಅವರೇ? ಡಬಲ್ ಇಂಜಿನ್ ಇದ್ದಾಗಲೂ ಕೇಂದ್ರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಖಾಲಿ ಚಿಪ್ಪು ಅಲ್ಲವೇ? ನೆರೆ ಪರಿಹಾರ, ಜಿಎಸ್‌ಟಿ ಬಾಕಿ, ಲಸಿಕೆ, ಆಕ್ಸಿಜನ್, ಹಣಕಾಸು ಆಯೋಗದ ಹಣ ಎಲ್ಲದರಲ್ಲೂ ಮಹಾದ್ರೋಹ ಎಸಗಿದ್ದೀರಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸೋಲಿನ ಭೀತಿ ಬಿಜೆಪಿಯನ್ನು ಹೇಗೆ ಕಾಡುತ್ತಿದೆ ಎಂಬುದಕ್ಕೆ ನಡ್ಡಾ ಅವರ ಈ ಹೇಳಿಕೆಯೇ ಸಾಕ್ಷಿ. ಸೋಲು ಸನಿಹಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಕನ್ನಡಿಗರಿಗೆ ನೇರಾನೇರ ಬೆದರಿಕೆ ಹಾಕುತ್ತಿದೆ. ನಡ್ಡಾ ಅವರ ಹೇಳಿಕೆ ಸಂವಿಧಾನ, ಪ್ರಜಾಪ್ರಭುತ್ವಗಳಿಗೆ ಸಂಪೂರ್ಣ ವಿರುದ್ಧವಾದುದು, ಬಿಜೆಪಿಯ ಮಾನ್ಯತೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ‌ಮೋದಿಯವರ ಆಶೀರ್ವಾದ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ. ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ. ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಹೋರಾಟಗಾರರಾದ ಡಾ.ಎಚ್.ವಿ.ವಾಸು ಪ್ರತಿಕ್ರಿಯಿಸಿ, “ಇದನ್ನು ನಡ್ಡಾ ಹೇಳಿರೋದು ನಿಜವಾದರೆ, ಕ್ಷಮೆ ಕೇಳಿದರೆ ಸಾಲದು.‌ ನಡ್ಡಾ ಮೇಲೆ ಕ್ರಮ ತೆಗೆದುಕೊಳ್ಳಬೇಕು.‌ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು. ಇಲ್ಲವಾದರೆ ಬಿಜೆಪಿಯನ್ನು ದೇಶದ ಎಲ್ಲಾ ರಾಜ್ಯಗಳ ಜನರು ಬಹಿಷ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಡ್ಡಾ ಅವರೇ ನಾವು ಬಿಜೆಪಿಯನ್ನು ಸೋಲಿಸುತ್ತೇವೆ.. ಸೋಲಿಸಿಯೇ ಸೋಲಿಸುತ್ತೇವೆ ಮತ್ತು ಒಕ್ಕೂಟ ಸರ್ಕಾರದಿಂದ ಅದೇನು ಬಂದ್ ಮಾಡುತ್ತಿರೋ ನಾವು ನೋಡುತ್ತೇವೆ. ನೀವು ಸೋಲಿಗೆ ಇಷ್ಟೊಂದು ಹೆದರಿಬಿಟ್ಟರೆ ಹೇಗೆ? ಮುಂದೆ ಬಹಳಷ್ಟು ಸೋಲುವುದು ಬಾಕಿ ಇದೆ. ನೆನೆಪಿರಲಿ ನಡ್ಡಾ ಅವರೇ, ಜಿಎಸ್‌ಟಿ ಸಂಗ್ರಹದ ದೊಡ್ಡ ಮೊತ್ತವು ಕೇಂದ್ರಕ್ಕೆ ಪಾವತಿಯಾಗುವುದು ಕರ್ನಾಟಕ ರಾಜ್ಯದಿಂದಲೇ. ನಾವು ಕೊಟ್ಟರೇನೇ ನೀವು ಬಾಳುವುದು” ಎಂದು ಕವಿ ರಾಜೇಂದ್ರ ಪ್ರಸಾದ್ ಎಚ್ಚರಿಸಿದ್ದಾರೆ.

“ಸಂಯುಕ್ತ ಗಣರಾಜ್ಯ ಆಡಳಿತದಲ್ಲಿ ರಾಜ್ಯ ಸರ್ಕಾರ ಕೇಂದ್ರದಿಂದ ಅಭಿವೃದ್ಧಿ ಕಾರ್ಯ ನೀಡುವುದಿಲ್ಲ ಎಂದು ಹೇಳಿದರೆ, ತೆರಿಗೆ ಹಣ ನೀಡಬೇಡಿ ಎಂದು ಹೇಳಲಿ. ನಮ್ಮ ಅಭಿವೃದ್ಧಿ ನಮಗೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಇಂತಹ‌ ಹೇಳಿಕೆ ನೀಡಿದದರೆ ಹೇಗೆ. ಇದು ತಪ್ಪು” ಎಂದು ಚಿಂತಕ ದಾಸನೂರು ಕೂಸಣ್ಣ ಖಂಡನೆ ವ್ಯಕ್ತಪಡಿಸಿದ್ದಾರೆ.

ಕವಿ ಗೋಪಾಲಕೃಷ್ಣ ಅಡಿಗರ ಸಾಲುಗಳನ್ನು ಉಲ್ಲೇಖಿಸಿ ಚಿಂತಕ ಶ್ರೀಪಾದ್ ಭಟ್‌ ಪ್ರತಿಕ್ರಿಯಿಸಿದ್ದಾರೆ. “ನಿನ್ನ ನಾಲ್ಕು ಕಾಲ ನರ್ತನಕ್ಕೆ ಪ್ರತಿ ನಿಮಿಷ ಏನಾದರೊಂದಕ್ಕೆ ಜಖಂ ಆಗದಿದ್ದರೆ ನಿನ್ನ ಅದ್ಭುತ ಪ್ರತಿಭೆಗೆ ಕುಂದು ಕಂಡೆಯಾ- ಅಡಿಗ. ಕರ್ನಾಟಕದ ಜನತೆ ಹಗಲು ಕಂಡ ಬಾವಿಯಲ್ಲಿ ಹಗಲೂ, ಇರುಳೂ ಯಾವ ಹೊತ್ತಿನಲ್ಲಿಯೂ ಬೀಳಲ್ಲ ನಡ್ಡಾ. ವಿನಾಶ ಕಾಲ ಬಂದಂತಿದೆ ಅಥವಾ ಬಂದಾಗಿದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಇಂತಹ ಬೆದರಿಕೆಗಳಿಗೆಲ್ಲ ಕನ್ನಡಿಗರು ಹೆದರಲ್ಲ ಮಿಸ್ಟರ್‌ ನಡ್ಡಾ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ತಾಕತ್ತಿದ್ದರೆ ಬಂದ್ ಮಾಡಿ ನೋಡೋಣ” ಎಂದು ಸತೀಶ್ ಚಿಕ್ಕಮಗಳೂರು ಎಂಬವರು ಸವಾಲು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಪ್ರತಿಕ್ರಿಯಿಸಿ, “ರಾಜಕಾರಣಿಯೊಬ್ಬರು ತನ್ನ ಭಾಷಣದಲ್ಲಿ ತಮ್ಮ ಪಕ್ಷ ಚುನಾವಣೆಯಲ್ಲಿ ಸೋತರೆ ಸೆಂಟ್ರಲ್ ಯೋಜನೆಗಳು ಬಂದ್ ಎಂದು ಹೇಳಿದ್ದಾರೆಂಬ ಪತ್ರಿಕಾ ವರದಿ ನೋಡಿದೆ. ಒಂದು ವೇಳೆ ಇದು ಸಂಭವಿಸಿದರೆ, ಕರ್ನಾಟಕಕ್ಕೆ ಎಷ್ಟು ಲಾಸ್ ಆಗಬಹುದು?” ಎಂದು ವಿವರಿಸಿದ್ದಾರೆ.

“2022-23 ಬಜೆಟ್ ಪ್ರಕಾರ ರಾಜ್ಯದ ಆದಾಯ ನಿರೀಕ್ಷೆ ಇರುವುದು 1,89,888 ಕೋಟಿ ರೂ. ಇದರಲ್ಲಿ 73% ಭಾಗ ರಾಜ್ಯದಲ್ಲೇ ಉತ್ಪತ್ತಿ ಆಗುವಂತಹದು. ಅಂದರೆ, 1,37,824 ಕೋಟಿ ರೂ.ಗಳು. ಕೇಂದ್ರ ಸರ್ಕಾರದ ಪಾಲು 27%. ಅಂದರೆ, 52,064 ಕೋಟಿ ರೂ.ಗಳು. ಇದರಲ್ಲಿ, ಅಂದರೆ ಕೇಂದ್ರ ಸರ್ಕಾರದ ಪಾಲಿನಲ್ಲಿ, 16% ಭಾಗ, ಅಂದರೆ 30,382 ಕೋಟಿ ರೂ.ಗಳು ನಮ್ಮ ರಾಜ್ಯ ಕೇಂದ್ರಕ್ಕೆ ಕಟ್ಟಿರುವ ಜಿಎಸ್‌ಟಿ ತೆರಿಗೆಯಲ್ಲಿ ಕೇಂದ್ರ ಸರ್ಕಾರ ವಾಪಸ್ ಕೊಡಲೇಬೇಕಾಗಿರುವ ರಾಜ್ಯದ ಪಾಲು. ಕೇವಲ 12% ಮಾತ್ರ ಕೇಂದ್ರದ ಅನುದಾನ (ಅರ್ಥಾತ್ ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಬರುವ ನೆರವು). ಕೇಂದ್ರ ಸರ್ಕಾರದ ರಾಜಕಾರಣಿ ಹೇಳಿರುವಂತೆ, ಅವರ ಪಕ್ಷ ಸೋತರೆ ರಾಜ್ಯಕ್ಕೆ ಕೇಂದ್ರದ ಅನುದಾನ ಬರದೆ ಆಗುವ ನಷ್ಟ ಕೇವಲ 23,000 ಕೋಟಿ ರೂ. (ಅಂಕಿಸಂಖ್ಯೆಗಳಿಗೆ ಆಧಾರ: ಕರ್ನಾಟಕ ಬಜೆಟ್ 2022-23ರ ದಾಖಲೆಗಳು)” ಎಂದು ತಿಳಿಸಿದ್ದಾರೆ.

“ಬಹುತೇಕ ಎರಡು ಲಕ್ಷ ಕೋಟಿ ಆದಾಯ ಇರುವ, ತಿಂಗಳಿಗೆ ಸಮಾರು 10,000 ಕೋಟಿ ಜಿಎಸ್‌ಟಿ ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ರಾಜ್ಯ ಕರ್ನಾಟಕ. ಬರೇ ಎರಡು ತಿಂಗಳ ಜಿಎಸ್‌ಟಿ ಆದಾಯದಲ್ಲಿ ಕೇಂದ್ರದ ಅನುದಾನದ ಕೊರತೆ ಭರ್ತಿಯಾಗಬಲ್ಲ ಸಂಪದ್ಭರಿತ ರಾಜ್ಯ ಕರ್ನಾಟಕ. ರಾಜಕಾರಣಿಗಳು ಮಾತಾಡುವಾಗ ಎಚ್ಚರ ತಪ್ಪಬಾರದು. ಅದು ಒಂದು ಒಕ್ಕೂಟ ಗಣರಾಜ್ಯಕ್ಕೆ ಹೇಳಿಸಿದ್ದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...