ಕೇಂದ್ರವು ವಿಧಿಸಿರುವ ಸೆಸ್ ಮತ್ತು ಸರ್‌ಚಾರ್ಜ್‌ಗಳು “ಏರುತ್ತಿರುವ” ಪರಿಣಾಮವಾಗಿ ತೆರಿಗೆಗಳ ಹಂಚುವಿಕೆಯಲ್ಲಿ ರಾಜ್ಯಗಳ ಪಾಲು “ಕುಗ್ಗುತ್ತಿದೆ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 16ನೇ ಹಣಕಾಸು ಆಯೋಗಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚಿಸಲು ಕೇರಳ ಆಯೋಜಿಸಿದ್ದ ಐದು ಬಿಜೆಪಿಯೇತರ ರಾಜ್ಯಗಳ ಸಮಾವೇಶದಲ್ಲಿ ವಿಜಯನ್ ಮಾತನಾಡಿದರು.ಸೆಸ್ ಹೆಚ್ಚಳ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಕೇರಳದ ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ್ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದಲ್ಲಿ ತೆಲಂಗಾಣ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಮಲ್ಲು ಭಟ್ಟಿ ವಿಕ್ರಮಾರ್ಕ, ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ, ತಮಿಳುನಾಡು ಹಣಕಾಸು ಸಚಿವ ತಂಗಂ ತೆನ್ನರಸು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್, ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರ ಸರ್ಕಾರದ ಮಾಜಿ ಆರ್ಥಿಕ ಸಲಹೆಗಾರ ಡಾ ಅರವಿಂದ್ ಸುಬ್ರಮಣಿಯನ್, ಕೇರಳದ ಮಾಜಿ ಹಣಕಾಸು ಸಚಿವ ಟಿ ಎಂ ಥಾಮಸ್ ಐಸಾಕ್ ಮತ್ತು ಕೇರಳ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷ ಪ್ರೊ ವಿ ಕೆ ರಾಮಚಂದ್ರನ್ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.
ಇದನ್ನೂಓದಿ:ಹರಿಯಾಣ ಚುನಾವಣೆ | 5 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
“ಕೇಂದ್ರವು ಸಂಗ್ರಹಿಸುವ ತೆರಿಗೆಯ ನಿವ್ವಳ ಆದಾಯದಿಂದ ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡುವಂತೆ ಹಣಕಾಸು ಆಯೋಗವು ಶಿಫಾರಸು ಮಾಡುತ್ತಿರುವ ಸಮಯದಲ್ಲೆ, ತೆರಿಗೆ ಹಂಚಿಕೆ ಇಲ್ಲದ ಹೆಚ್ಚುವರಿ ಶುಲ್ಕಗಳು ಮತ್ತು ಸೆಸ್‌ಗಳು ಏರಿಕೆಯಾಗಿದೆ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.
ಹಂಚಿಕೆ ಮಾಡುವ ಪಾಲಿನಲ್ಲಿ ರಾಜ್ಯಗಳ ಪಾಲನ್ನು ಕಳೆದ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇಕಡಾ 41 ಕ್ಕಿಂತ ಹೆಚ್ಚು ಹೆಚ್ಚಿಸಬೇಕಾಗಿದೆ ಎಂದು ಸಿಎಂ ಹೇಳಿದ್ದಾರೆ. ಈ ಪಾಲನ್ನು ಶೇ.50ಕ್ಕೆ ಹೆಚ್ಚಿಸುವಂತೆ ಕೇರಳ ಸೇರಿ ಹಲವು ರಾಜ್ಯಗಳು ಈ ಹಿಂದೆಯೂ ಈ ಬೇಡಿಕೆ ಇಟ್ಟಿವೆ ಎಂದು ಅವರು ಹೇಳಿದ್ದಾರೆ.
“ಕೇಂದ್ರವು ಸಂಗ್ರಹಿಸುವ ತೆರಿಗೆಯಲ್ಲಿ ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡಬೇಕೆಂಬ ಬೇಡಿಕೆಯು ನಿರಂತರ ಪ್ರಸ್ತುತತೆಯನ್ನು ಹೊಂದಿದೆ. ಇದನ್ನು ಗಟ್ಟಿಯಾಗಿ ರೂಪಿಸಲು ಇಲ್ಲಿರುವ ಖ್ಯಾತ ವಿದ್ವಾಂಸರು ಮತ್ತು ಸಹೋದ್ಯೋಗಿಗಳಿಗೆ ನಾನು ವಿನಂತಿಸುತ್ತೇನೆ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.ಸೆಸ್ ಹೆಚ್ಚಳ
ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು


