2023-24ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕಳೆದ ತಿಂಗಳು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಜೂನ್ 15ರಂದು ಪ್ರಕಟವಾಗಿದ್ದು, ಎಲ್ಲ ವಿಭಾಗಗಳಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಸಿಇಟಿ ಪರೀಕ್ಷೆ ಮೇ 20 ಹಾಗೂ 21ರಂದು ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. 2.60 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದ 244345 ವಿದ್ಯಾರ್ಥಿಗಳಲ್ಲಿ ಎಂಜಿನಿಯರ್ ಕೋರ್ಸ್ ಗೆ 203381, ಕೃಷಿ ವಿಜ್ಞಾನಕ್ಕೆ 164187, ಪಶುಸಂಗೋಪನೆಗೆ 166756, ಯೋಗ ಮತ್ತು ನ್ಯಾಚುರೋಪತಿಗೆ 166746, ಬಿ ಫಾರ್ಮಾಕ್ಕೆ 206191 ಹಾಗೂ 206340 ವಿದ್ಯಾರ್ಥಿಗಳು ಡಿ ಫಾರ್ಮಾ ಕೋರ್ಸ್ ಗಳಿಗೆ ಅರ್ಹತೆ ಪಡೆದಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜಾಲತಾಣ http://kea.kar.nic.inನಲ್ಲಿ ದೊರೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 12 ಅಥವಾ ಜೂನ್ 14ರಂದು ಫಲಿತಾಂಶವನ್ನು ಪ್ರಕಟಿಸಲು ನಿರ್ಧರಿಸಿತ್ತು. ಆದರೆ ಉನ್ನತ ಶಿಕ್ಷಣ ಸಚಿವರ ಲಭ್ಯತೆ ಮತ್ತು ಕೆಲವು ತಾಂತ್ರಿಕ ಕಾರಣಗಳಿಂದ ಜೂನ್ 15 ರಂದು ಫಲಿತಾಂಶವನ್ನು ಪ್ರಕಟಿಸಿದೆ.
ಕರ್ನಾಟಕದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಲಿಸ್ಟ್, ಲಭ್ಯವಿರುವ ಸೀಟುಗಳು, ಶುಲ್ಕದ ಮಾಹಿತಿ ಇಲ್ಲಿದೆ..
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಈ ಪರೀಕ್ಷೆಯನ್ನು ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿದಂತೆ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ, ಕಳೆದ ಮೇ 20 ರಿಂದ ಮೇ 22ರ ವರೆಗೆ ನಡೆಸಿದ್ದು, ಈ ಪರೀಕ್ಷೆಗೆ 2.39 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.
ಯುಜಿಸಿಇಟಿ-2023ರ ಫಲಿತಾಂಶವನ್ನು ಆನ್‌ಲೈನ್ ಮೂಲಕ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಕೋರ್ಸ್‌ಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಶ್ರೇಣಿಗಳನ್ನು ನಿಗದಿಪಡಿಸಲಾಗುತ್ತದೆ.


