Homeಮುಖಪುಟ'ಚಹರೆಗಳೆಂದರೆ ಗಾಯಗಳೂ ಹೌದು': ಪುಸ್ತಕ ಬಿಡುಗಡೆ ಕಾರ್ಯಕ್ರಮ ನಾಳೆ

‘ಚಹರೆಗಳೆಂದರೆ ಗಾಯಗಳೂ ಹೌದು’: ಪುಸ್ತಕ ಬಿಡುಗಡೆ ಕಾರ್ಯಕ್ರಮ ನಾಳೆ

- Advertisement -
- Advertisement -

ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಿಸಿರುವ, ಹಂಪಿ ವಿಶ್ವವಿದ್ಯಾಲಯದ ಪ್ರೊ. ಎ.ಎಸ್ ಪ್ರಭಾಕರ ಅವರ “ಚಹರೆಗಳೆಂದರೆ ಗಾಯಗಳೂ ಹೌದು” ಪುಸ್ತಕ ಬಿಡುಗಡೆ ಕಾರ್ಯಕ್ರಮ ನಾಳೆ ಭಾನುವಾರ ಬೆಳಗ್ಗೆ 10:30ಕ್ಕೆ, ಬೆಂಗಳೂರಿನ ಗಾಂಧಿ ಭವನ ಕಸ್ತೂರಭಾ ಸಭಾಂಗಣದಲ್ಲಿ ನಡೆಯಲಿದೆ.

ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಹಿ ಚಿ ಬೋರಲಿಂಗಯ್ಯ ಮತ್ತು ಜೇನುಕುರುಬರ ಸೋಮಣ್ಣ ಪುಸ್ತಕ ಬಿಡುಗಡೆ ಮಾಡಲಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ಜಿ. ರಮೇಶ್ ಮತ್ತು ಕುವೆಂಪು ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಪ್ರಶಾಂತ್ ನಾಯಕ್ ಪುಸ್ತಕದ ಬಗ್ಗೆ ಮಾತನಾಡಲಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ಅಧ್ಯಕ್ಷರಾದ ಡಿ ಎಂ ನರಸಿಂಹಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಲೇಖಕರಾದ ಡಾ. ಎ ಎಸ್ ಪ್ರಭಾಕರ್ ಉಪಸ್ಥಿತರಿರಲಿದ್ದಾರೆ.

ಡಾ. ಎ. ಎಸ್ ಪ್ರಭಾಕರ್ ಅವರು ಹಲವು ವರ್ಷಗಳ ಕಾಲ ಹಲವು ಬುಡಕಟ್ಟು ಸಮುದಾಯಗಳ ಬಗ್ಗೆ ಮಾಡಿರುವ ಸಂಶೋಧನೆಯ ಕಥನಗಳನ್ನು ಪುಸ್ತಕ ಒಳಗೊಂಡಿದೆ. ಈ ಪ್ರಬಂಧಗಳ ಸಂಕಲನ ಕನ್ನಡ ಸಾಹಿತ್ಯ ಲೋಕಕ್ಕೆ ಅನನ್ಯ ಕೊಡುಗೆಯಾಗಿದೆ.


ಇದನ್ನೂ ಓದಿ: ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...