Homeಮುಖಪುಟಮರ ಕತ್ತರಿಸುವ ಯಂತ್ರದಿಂದ ದಾಳಿ ಪ್ರಕರಣ : ಗಾಯಾಳು ಆಂಧ್ರ ವಿದ್ಯಾರ್ಥಿನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ, ಆರೋಪಿಗೆ...

ಮರ ಕತ್ತರಿಸುವ ಯಂತ್ರದಿಂದ ದಾಳಿ ಪ್ರಕರಣ : ಗಾಯಾಳು ಆಂಧ್ರ ವಿದ್ಯಾರ್ಥಿನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ, ಆರೋಪಿಗೆ ಪೊಲೀಸರಿಂದ ಗುಂಡೇಟು

- Advertisement -
- Advertisement -

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡುವಿನ ಸರ್ಕಾರಿ ಶಾಲೆಯ ತರಗತಿಯೊಳಗೆ ಹೇಮಂತ್ ಎಂಬಾತ ಮರ ಕತ್ತರಿಸುವ ಯಂತ್ರದಿಂದ ನಡೆಸಿದ ಭೀಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗೋಪಿಕಾಳನ್ನು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ, ಅಂದರೆ ಅಕ್ಟೋಬರ್ 31ರಂದು ಸುಧಾರಿತ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು.

ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಅವರು ನವೆಂಬರ್ 1ರಂದು ತಿಳಿಸಿರುವಂತೆ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಗೋಪಿಕಾಳಿಗೆ ಆರ್ಥೋಪೆಡಿಕ್ ಮತ್ತು ಪ್ಲಾಸ್ಟಿಕ್ ಸರ್ಜರಿಗಳನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಸದ್ಯ ಗೋಪಿಕಾಳನ್ನು ಸೂಕ್ಷ್ಮ ನಿಗಾಕ್ಕಾಗಿ ಮಕ್ಕಳ ತೀವ್ರ ನಿಗಾ ಘಟಕಕ್ಕೆ (ಪಿಐಸಿಯು) ಸ್ಥಳಾಂತರಿಸಲಾಗಿದೆ.

ಇದಕ್ಕೂ ಮುನ್ನ, ಗೋಪಿಕಾ ಅವರಿಗೆ ಆರಂಭಿಕ ಚಿಕಿತ್ಸೆ ನೀಡಲಾಗಿದ್ದ ಅನಂತಪುರದ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಮಾತನಾಡಿ, ದಾಳಿಗೆ ಬಳಸಲಾದ ಆಯುಧದ ಸ್ವರೂಪದಿಂದಾಗಿ ಗೋಪಿಕಾ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿಸಿದ್ದರು. “ಆಕೆಯ ಮುಖದ ಒಂದು ಬದಿಯ ಚರ್ಮ ಮತ್ತು ಮಾಂಸದ ಪದರವು (flap) ಸಂಪೂರ್ಣವಾಗಿ ಕಿತ್ತುಬಂದಿದೆ. ಕುತ್ತಿಗೆ ಮತ್ತು ಬೆನ್ನಿನ ಸ್ನಾಯುಗಳು ಹಾಗೂ ಬೆನ್ನುಮೂಳೆಯ ಪಕ್ಕದ ಸ್ನಾಯುಗಳು (paraspinal muscles) ಕತ್ತರಿಸಲ್ಪಟ್ಟಿವೆ” ಎಂದು ಹೇಳಿದ್ದರು. ವಿಪರೀತ ರಕ್ತಸ್ರಾವವಾಗಿದ್ದರಿಂದ ಆಕೆಯನ್ನು ಅತ್ಯಂತ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ತಿಳಿಸಿದ್ದರು.

ಆರೋಪಿ ಹೇಮಂತ್ ಗೋಪಿಕಾಳ ಸಹಪಾಠಿಯಾದ ಲಕ್ಷ್ಮಿ ಅವರ ಮೇಲೆಯೂ ದಾಳಿ ನಡೆಸಿದ್ದ. ಇದರಿಂದ ಆಕೆಯ ಕಾಲಿಗೆ ಗಾಯವಾಗಿತ್ತು. ಆಘಾತಕಾರಿ ಘಟನೆ ಬಳಿಕ ವಿದ್ಯಾರ್ಥಿಗಳು ಕಣ್ಣೀರು ಹಾಕುತ್ತಿದ್ದ ದೃಶ್ಯಗಳನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದವು.

ಘಟನೆ ನಡೆದ ಸಮಯದಲ್ಲಿ ಶಾಲೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಮಾನಸಿಕ ಧೈರ್ಯ ತುಂಬಲು ಮತ್ತು ಅವರು ಆಘಾತದಿಂದ ಹೊರಬರುವಂತೆ ಮಾಡಲು 20 ಮಾನಸಿಕ ಆರೋಗ್ಯ ಆಪ್ತಸಮಾಲೋಚಕರ (mental health counselors) ತಂಡವನ್ನು ಶಾಲೆಗೆ ಕಳುಹಿಸಲಾಗಿದೆ. ಈ ತಂಡವು ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ ನೀಡಿ ಅವರಿಗೆ ಭಾವನಾತ್ಮಕ ಬೆಂಬಲವನ್ನು ನೀಡಲಿದೆ ಎಂದು ನಾರಾ ಲೋಕೇಶ್ ತಿಳಿಸಿದ್ದಾರೆ.

ದಾಳಿ ನಡೆಸಿದ ಕೂಡಲೇ ಆರೋಪಿ ಹೇಮಂತ್ ಶಾಲೆಯಿಂದ ಪರಾರಿಯಾಗಿದ್ದ. ಆದರೆ ಕೆಲವೇ ಗಂಟೆಗಳಲ್ಲಿ ಧರ್ಮಾವರಂ ರೈಲು ನಿಲ್ದಾಣದ ಬಳಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಆಂಧ್ರಪ್ರದೇಶ ಮತ್ತು ಕರ್ನಾಟಕ ಸರ್ಕಾರಗಳ ನಡುವಿನ ಸಮನ್ವಯದ ಫಲವಾಗಿ, ‘ಗ್ರೀನ್ ಕಾರಿಡಾರ್’ ಮೂಲಕ ಗೋಪಿಕಾಳನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿದ ಸರಣಿ ಪೋಸ್ಟ್‌ಗಳಲ್ಲಿ, ಸಚಿವ ನಾರಾ ಲೋಕೇಶ್ ಅವರು ಗೋಪಿಕಾಳ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ರಕ್ತ ವರ್ಗಾವಣೆ ಮತ್ತು ಪೂರಕ ಚಿಕಿತ್ಸೆಗಳ ಮೂಲಕ ವೈದ್ಯಕೀಯ ತಂಡವು ಆಕೆಯ ಸ್ಥಿತಿಯನ್ನು ಸ್ಥಿರಗೊಳಿಸಿದೆ ಎಂದು ಅವರು ಈ ಮೊದಲು ತಿಳಿಸಿದ್ದರು. ವೈದ್ಯರು ತೀವ್ರ ರಕ್ತಸ್ರಾವವನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದಾರೆ, ರಕ್ತದೊತ್ತಡವನ್ನು ಸರಿಯಾದ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿದೆ ಮತ್ತು ಆಕೆಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಿದ್ದರು.

ಗಾಯಾಳುವಿನ ತ್ವರಿತ ವೈದ್ಯಕೀಯ ಚಿಕಿತ್ಸೆಗೆ ಸಹಕರಿಸಿದ ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಲೋಕೇಶ್ ಧನ್ಯವಾದ ತಿಳಿಸಿದ್ದರು.

ಅಕ್ಟೋಬರ್ 31ರ ಬೆಳಿಗ್ಗೆ ಸುಮಾರು 10.30ರ ಸುಮಾರಿಗೆ ರಾಪ್ತಾಡುವಿನ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿ ಗೋಪಿಕಾ ಮತ್ತು ಆಕೆಯ ಸಹಪಾಠಿ ಮೇಲೆ ದಾಳಿ ನಡೆದಿತ್ತು. ಗಣಿತ ಪಾಠ ನಡೆಯುತ್ತಿದ್ದಾಗ ಹೇಮಂತ್ ತರಗತಿಯೊಳಗೆ ನುಗ್ಗಿ, ಯಾಂತ್ರಿಕ ಗರಗಸದಿಂದ ಗೋಪಿಕಾಳ ಮೇಲೆ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಗೆ ಪೊಲೀಸರಿಂದ ಗುಂಡೇಟು

ಭಾನುವಾರ (ನ.1) ಸಂಜೆ ಅತ್ಮಕೂರು ಅರಣ್ಯ ಪ್ರದೇಶದಲ್ಲಿ ಆರೋಪಿ ಹೇಮಂತ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಪ್ರಸ್ತುತ ಅನಂತಪುರ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿರುವ ಆತನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಆರಂಭದಲ್ಲಿ ಆತ ಧರ್ಮಾವರಂ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದರೂ, ಮರುದಿನ (ಭಾನುವಾರ) ಪೊಲೀಸರು ಆತನನ್ನು ಕೃತ್ಯ ನಡೆದ ಸ್ಥಳ ಹಾಗೂ ಆತ ಸಂಚು ರೂಪಿಸಿದ್ದ ಆತ್ಮಕೂರು ಅರಣ್ಯ ಪ್ರದೇಶಕ್ಕೆ ‘ಸೀನ್ ರಿಕನ್ಸ್ಟ್ರಕ್ಷನ್’ (ಕೃತ್ಯದ ಮರುಸೃಷ್ಟಿ) ತನಿಖೆಗಾಗಿ ಕರೆದೊಯ್ದಿದ್ದರು. ಈ ವೇಳೆ ಆತ ಪೊಲೀಸರ ಮೇಲೆಯೇ ಕಲ್ಲು ತೂರಿ, ಕತ್ತಿಯಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪೊಲೀಸರು ಆತ್ಮರಕ್ಷಣೆಗಾಗಿ ಆರು ಸುತ್ತು ಗುಂಡು ಹಾರಿಸಿದ್ದು, ಆತನ ಕಾಲಿಗೆ ತೀವ್ರ ಗಾಯಗಳಾಗಿವೆ ಎಂದು ಹೇಳಲಾಗ್ತಿದೆ.
















ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...

ರಾಮಮಂದಿರ ದೇಣಿಗೆ ದುರುಪಯೋಗ: ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಬಿಟ್ಟ ಸುಪ್ರೀಂ: ಆರೋಪಗಳ ಅರ್ಹತೆ ಬಗ್ಗೆ ಪ್ರತಿಕ್ರಿಯೆ ಇಲ್ಲ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ...

ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ

ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಎಸ್‌ಐಆರ್‌ (ಎಸ್‌ಐಆರ್) ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಪ್ರಕರಣ: ಪವರ್ ಟಿವಿ ರಾಕೇಶ್ ಶೆಟ್ಟಿ ಮನೆ, ಕಚೇರಿ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಿದ್ಧಪಡಿಸಲಾಗಿದೆ ಎನ್ನಲಾದ ವಿವಾದಾತ್ಮಕ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಶಂಕಿತರಾಗಿರುವ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ...