Homeಕರ್ನಾಟಕಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ...

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ ನಿರ್ಧಾರಕ್ಕೆ ಹಲವರಿಂದ ವಿರೋಧ

- Advertisement -
- Advertisement -

ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಕ್ಷೇತ್ರವನ್ನು ಸುಧಾರಿಸಲು ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ’ (ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಅವರು ತಜ್ಞರ ಸಮಿತಿಯನ್ನು ರಚಿಸಿದ್ದಾರೆ.

ಸಂಘಪರಿವಾರ ಹಿನ್ನೆಲೆಯ ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದು ಇದೀಗ ವಿರೋಧಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಡಾ.ಗುರುರಾಜ ಕರಜಗಿ ಅಧ್ಯಕ್ಷತೆ ವಹಿಸಿರುವ ಸಮಿತಿಯಲ್ಲಿ ಶಾಹೀನ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಅಬ್ದುಲ್ ಖದೀರ್, ಭಾಲ್ಕಿಯ ಶ್ರೀ ಹಿರೇಮಠ ಸ್ವಾಮೀಜಿ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಡಾ.ರುದ್ರೇಶ್, ಫಾದರ್ ಫ್ರಾನ್ಸಿಸ್, ಎನ್.ಬಿ. ಪಾಟೀಲ್ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವಾರು ಪ್ರಮುಖರು ಇದ್ದಾರೆ.

ಶುಕ್ರವಾರ ಕಲಬುರಗಿಯ ಕೆಕೆಆರ್‌ಡಿಬಿ ಕಚೇರಿಯಲ್ಲಿ ಸಮಿತಿಯ ಸಭೆ ನಡೆಸಲಾಗಿದ್ದು,ಕಲ್ಯಾಣ ಕರ್ನಾಟಕ ಭಾಗದಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ಕಾರ್ಯತಂತ್ರಗಳ ಕುರಿತು ಸದಸ್ಯರು ಚರ್ಚಿಸಿದರು. ಈ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸುವ ಕುರಿತು ಚರ್ಚೆಗಳು ಕೇಂದ್ರೀಕೃತವಾಗಿತ್ತು

‘ಅಕ್ಷರ ಆವಿಷ್ಕಾರ’ ಯೋಜನೆಗೆ ಕೆಕೆಆರ್‌ಡಿಬಿಯು ಗಮನ ನೀಡಲಾಗಿದ್ದು, ಶಾಲೆ ಮತ್ತು ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ, ಅರ್ಹ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಪ್ರಮುಖ್ಯತೆ ನೀಡಲಾಗಿದೆ.

ಕರಜಗಿ ಅಧ್ಯಕ್ಷತೆಗೆ ವಿರೋಧ:

ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದನ್ನು ಶಿಕ್ಷಣ ತಜ್ಞರಾದ ಬಿ. ಶ್ರೀಪಾದ್ ಭಟ್ ವಿರೋಧ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಕಲ್ಯಾಣಕರ್ನಾಟಕದ (ಹೈದರಾಬಾದ್ ಕರ್ನಾಟಕ) ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆರೆಸ್ಸೆಸ್ ಸಿದ್ಧಾಂತದ ಪರವಿರುವ ಗುರುರಾಜ್ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದಾರೆ. ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇದೆಯೇ? ಕರ್ಜಗಿ ಯಾವ ಬಗೆಯಲ್ಲಿ ಶಿಕ್ಷಣ ತಜ್ಞರು? ಹೈದರಾಬಾದ್ ಕರ್ನಾಟಕದ ಸಮಾಜೋ-ಆರ್ಥಿಕ-ರಾಜಕೀಯ ಬಿಕ್ಕಟ್ಟಿನ ಕುರಿತು ಇವರಿಗೆ ಯಾವ ಮಾಹಿತಿ ಇದೆ? ಇವರ ಅರ್ಹತೆ ಏನು? ಯಾವ ಮಾನದಂಡಗಳನ್ನು ಆಧರಿಸಿ ಆಯ್ಕೆ ಮಾಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

“ಇದ್ಯಾವುದೂ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಲ್ಲ. ಆರೆಸ್ಸೆಸ್ ನ ಕರ್ಜಗಿ ಮಾತ್ರ ಮುಖ್ಯ. ಇನ್ನು ಈ ಸಮಿತಿಯ ಇತರೇ ಸದಸ್ಯರಲ್ಲಿ ಬಹುತೇಕರು ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಅಲ್ಲಿ ಉದ್ಯೋಗದಲ್ಲಿರುವವರು. ಕಾಂಗ್ರೆಸ್‌ಗೆ ಯಾವುದೇ ಸಿದ್ಧಾಂತವಿಲ್ಲ ಎಂದು ಗೊತ್ತಿತ್ತು. ಆದರೆ, ನೈತಿಕವಾಗಿ ದಿವಾಳಿಯಾಗಿರುವುದಾಗಿ ಸಾಬೀತುಪಡಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪತ್ರಕರ್ತರಾದ ಹರ್ಷ ಕುಗ್ವೆ ಅವರು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದು, “ಈ ಗುರುರಾಜ ಕರ್ಜಗಿ ಒಬ್ಬ ಶಿಕ್ಷಣ ತಜ್ಞ ಎನ್ನುವವರು ಮುಟ್ಟಾಳರು. ಅವನಂತ ಒಬ್ಬ ಮೌಡ್ಯ ಪ್ರತಿಪಾದಕ ಮತ್ತು ಸನಾತನಿಯನ್ನ ಜವಾಬ್ದಾರಿಯುತ ಹುದ್ದೆಗೆ ನೇಮಿಸಿರುವುದು ಸರ್ಕಾರದ ಆತ್ಮಹತ್ಯಾಕಾರಿ ಕೆಲಸ. ಕರ್ಜಗಿಯಂತ ಅವಕಾಶವಾದಿ ಕನ್ನಿಂಗ್ ಚೆಡ್ಡಿಜೀವಿಗಳಿಗೆ ಮಾನ್ಯತೆ ನೀಡುವಂತ ಅದಿಕಾರಿಗಳಿಗೆ ತಲೆಯಲ್ಲಿ ಬುದ್ದಿ ಅಂತೂ ಇರಲಿಕ್ಕಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

“ಶಿಕ್ಷಣವನ್ನು ಕುಲಗಡೆಸುವ ಕೆಲಸ ಬರೀ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದಲ್ಲ ಈಗಲೂ ಮುಂದುವರೆದಿದೆ.‌ ಶಿಕ್ಷಣ ಕ್ಚೇತ್ರದಲ್ಲಿ ಹಲವಾರು ದಶಕಗಳಿಂದ ಹಗಲಿರುಳು ಕೆಲಸ ಮಾಡುತ್ತಿರುವ ಪ್ರೊ.‌ ನಿರಂಜನಾರಾದ್ಯರಂತವರು ಇರುವಾಗ ಈ ಪಡಪೋಸಿ ಕರ್ಜಗಿ ಯಾಕೆ ಬೇಕಿತ್ತು? ಮಾನ್ಯ ಸಿ ಎಂ ಸಿದ್ದರಾಮಯ್ಯ ಅವರು ಈ ಕರ್ಜಗಿ ತಮಿತಿಯನ್ಜು ಕೂಡಲೇ ಉಚ್ಚಾಟಿಸಬೇಕು. ಹೊಸ ಸಮಿತಿ ರಚಿಸಬೇಕು” ಎಂದು ಹರ್ಷ ಆಗ್ರಹಿಸಿದ್ದಾರೆ.

ವಿದ್ಯಾರ್ಥಿ ಹೋರಾಟಗಾರ ಪಿ. ನಂದಕುಮಾರ್ ಅವರು ಪ್ರತಿಕ್ರಿಯಿಸಿ,  “ಗುರುರಾಜ ಕರ್ಜಿಗಿಯವರು ಸನಾತನಿ ಸಂತತಿಯ ಅವಕಾಶವಾದಿ ಹಾಗೂ ಸಂಘ ಪರಿವಾರದ ವ್ಯಕಿ ಎನ್ನುವುದು ಈಗಾಗಲೇ ನಾಡಿನ ಪ್ರಜ್ಞಾವಂತ ನಾಗರೀಕರಿಗೆ ತಿಳಿದಿರುವಂತದ್ದೆ. ಅವರು ಕರ್ನಾಟಕದ ವಿವಿಧೆಡೆ ಕಾರ್ಯಕ್ರಮಗಳು ಆಯೋಜನೆಗೊಳ್ಳುವುದು ಕೇಶವ ಕೃಪೆಯಿಂದ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಈ ಮೂಲಕವೇ ಅವರು ಇವತ್ತು ಶಿಕ್ಷಣ ತಜ್ಞರಾದವರು. ಕೇವಲ ಭಾವನಾತ್ಮಕ ಮಾತುಗಳ ಮೂಲಕವೇ ಸಾಮಾನ್ಯ ಜನರನ್ನು ಮೂಡರನ್ನಾಗಿಸುವಲ್ಲಿ ನಿಸ್ಸಿಮರು. ಇಂತಹ ವ್ಯಕ್ತಿಯನ್ನು ಅದರಲ್ಲೂ ಮುಖ್ಯವಾಗಿ ಜಾತಿ ವಿನಾಶದ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟದ ಸುಧಾರಣ ಸಮಿತಿಗೆ ಸರ್ಕಾರ ಈ ಮನುವಾದದ ಪ್ರತಿಪಾದಕರನ್ನು ನೇಮಿಸಿರುವುದು ಒಪ್ಪಲಾಗದು” ಎಂದು ಹೇಳಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕ ಸರ್ಕಾರವು ಗುರುರಾಜ ಕರಜಗಿಯವರ ನೇಮಕ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು. ಇತ್ತೀಚೆಗೆ ಕರ್ನಾಟಕ ಸರ್ಕಾರ ಕೈಗೊಳ್ಳುತ್ತೀರಿವ ಈ ರೀತಿಯ ನಿರ್ಧಾರ ಕಾರಣಕ್ಕೆ ನಮ್ಮಂತ ಬಹುತೇಕರು ಕರ್ನಾಟಕ ಸರ್ಕಾರವನ್ನು ಅನುಮಾನದಿಂದ ಮತ್ತು ಅಸಹನೆಯಿಂದ ನೋಡುವಂತ ಪರಿಸ್ಥಿತಿ ಬಂದೊದಗಿದೆ. ಇದು ಈ ಸರ್ಕಾರದ ನೈತಿಕತೆ ಕುಸಿತವನ್ನು ಎತ್ತಿ ತೋರಿಸುವಂತೆ ಕಾಣುತ್ತಿದೆ. ಬಹಳ ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ರಾಜಕೀಯ ಚಿಂತನೆಯಲ್ಲೇ ಆಗಿರುವ ಬಹು ದೊಡ್ಡ ಲೋಪವನ್ನು ತೋರಿಸುತ್ತದೆ. ಸಮಾಜದಲ್ಲಿ ಸೂಕ್ಷ್ಮ ಮತ್ತು ತೀಕ್ಷ್ಣವಾದ ರಾಜಕೀಯ ಪ್ರಜ್ಞೆಯನ್ನು ಬಿಟ್ಟು ಕೊಡುವುದು ಬಹು ಘೋರ ದುರಂತಕ್ಕೆಡೆ ಮಾಡಿಕೊಡುತ್ತದೆ ಎನ್ನುವುದು ಆಳುವ ಸರ್ಕಾರ ಅರಿತುಕೊಳ್ಳಬೇಕು” ಎಂದು ಅವರು ಕಾಂಗ್ರೆಸ್‌ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವೈಚಾರಿಕ ತಿಳುವಳಿಕೆ, ಅನಿಕೇತನ ಪ್ರಜ್ಞೆಯ ನೀತಿಯನ್ನು ಹಾಗೂ ಕವಿರಾಜ ಮಾರ್ಗಕಾರ ಹಾಕಿರುವ ವಿವೇಕ ತತ್ವಕ್ಕೆ ಬುನಾದಿ ಹಾಕುವಂತ ಶಿಕ್ಷಣ ತಜ್ಞರನ್ನು ನೇಮಿಸಿದರೆ ಶೈಕ್ಷಣಿಕವಾಗಿ ಹಿಂದುಳಿದ ಹೈದ್ರಾಬಾದ್ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕರ್ನಾಟಕವಾಗುವುದು. ಈಗಿರುವುದು ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕವಾಗಿದೆ ಅಷ್ಟೇ. ಹಾಗಾಗಿ, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಸಮಿತಿಗೆ ನೇಮಕಗೊಂಡ ಗುರುರಾಜ್ ಕರ್ಜಿಗಿಯವರನ್ನು ಕೈಬಿಟ್ಟು, ರಾಜ್ಯದ ಹಿರಿಯ ಬುದ್ಧಿಜೀವಿಗಳ,ಸಾಹಿತಿಗಳ ಸಲಹೆಗಳನ್ನು ಪಡೆದು ಸಮಿತಿ ಸದಸ್ಯರನ್ನು ನೇಮಕ ಮಾಡುವುದು ಒಳಿತು” ಎಂದು ನಂದಕುಮಾರ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ವಿರುದ್ದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...