Homeಕರ್ನಾಟಕವಂಚನೆ ಪ್ರಕರಣ: ಚೈತ್ರ ಹೆಸರಿನ ಮುಂದೆ 'ಕುಂದಾಪುರ' ಪದ ಬಳಸದಂತೆ ಕೋರ್ಟ್ ನಿರ್ಬಂಧ

ವಂಚನೆ ಪ್ರಕರಣ: ಚೈತ್ರ ಹೆಸರಿನ ಮುಂದೆ ‘ಕುಂದಾಪುರ’ ಪದ ಬಳಸದಂತೆ ಕೋರ್ಟ್ ನಿರ್ಬಂಧ

- Advertisement -
- Advertisement -

ವಂಚನೆ ಪ್ರಕರಣದ ಆರೋಪಿ ಚೈತ್ರ ಬಗ್ಗೆ ಸುದ್ದಿ ಮಾಡುವಾಗ ಕುಂದಾಪುರ ಊರಿನ ಹೆಸರು ಬಳಕೆಗೆ ತಾತ್ಕಾಲಿಕ ತಡೆ ನೀಡಿ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ.

ಚೈತ್ರಾ ಕುರಿತು ಸುದ್ದಿ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸುವುದಕ್ಕೆ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ  ಕೋರಿ ಕುಂದಾಪುರ ಮೂಲದ ಗಣೇಶ್‌ ಶೆಟ್ಟಿ ಎಂಬವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಅರ್ಜಿ ವಿಚಾರಣೆಯನ್ನು ನಡೆಸಿದ ಬೆಂಗಳೂರಿನ 7ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಾಲಗೋಪಾಲ ಕೃಷ್ಣ ಅವರು ಸುದ್ದಿ ವಾಹಿನಿ, ಸಾಮಾಜಿಕ ಮಾದ್ಯಮಗಳಲ್ಲಿ ಕುಂದಾಪುರ ಹೆಸರು ಉಲ್ಲೇಖ ಮಾಡುವುದಕ್ಕೆ ಮುಂದಿನ ಆದೇಶದವರೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಆದೇಶ ನೀಡಿದೆ.

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಚೈತ್ರಾ ತನ್ನ ಟೀಂ ಜೊತೆ ಸೇರಿ 5 ಕೋಟಿ ರೂ. ವಂಚನೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಸೇರಿ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಭಾರೀ ಸದ್ದು ಮಾಡಿದ ಈ ಸುದ್ದಿಯ ವರದಿಯ ವೇಳೆ ಮತ್ತು ಸಾಮಾಜಿಕ ಮಾದ್ಯಮಗಳಲ್ಲಿ ಚೈತ್ರ ಹೆಸರಿನ ಜೊತೆ ಕುಂದಾಪುರ ಎಂದು ಊರಿನ ಹೆಸರು ಬಳಕೆ ಮಾಡಲಾಗುತ್ತಿತ್ತು. ಇದರಿಂದ ಸ್ಥಳೀಯ ನಾಗರಿಕರಿಗೆ ಮುಜುಗರ ಉಂಟಾಗಿತ್ತು.

ಅರ್ಜಿದಾರರು ತಮ್ಮ ಮನವಿಯಲ್ಲಿ ಚೈತ್ರಾ ಹೆಸರಿನ ಮುಂದೆ  ಕುಂದಾಪುರ ಹೆಸರು ಬಳಕೆಯಿಂದ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದರು.

ಇದನ್ನು ಓದಿ: ಉಡುಪಿ: ಚೈತ್ರಾ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...