Homeಕರ್ನಾಟಕಚೈತ್ರಾ ಗ್ಯಾಂಗ್ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮೀಜಿಗೆ ಜಾಮೀನು ನಿರಾಕರಣೆ

ಚೈತ್ರಾ ಗ್ಯಾಂಗ್ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮೀಜಿಗೆ ಜಾಮೀನು ನಿರಾಕರಣೆ

- Advertisement -
- Advertisement -

ಹಿಂದೂ ಕಾರ್ಯಕರ್ತೆ ಚೈತ್ರಾ ಅವರು ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹಾಲಶ್ರೀ ಸ್ವಾಮೀಜಿ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ 57ನೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶವನ್ನು ಅ.16ಕ್ಕೆ ಪ್ರಕಟಿಸುವುದಾಗಿ ಹೇಳಿತ್ತು. ಅದರಂತೆ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಸೋಮವಾರ (ಅ.16) 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಟಿ. ಗೋವಿಂದಯ್ಯ ಪ್ರಕಟಿಸಿದ್ದಾರೆ.

ಹಿಂದೂ ಕಾರ್ಯಕರ್ತೆ ಚೈತ್ರಾ ಹಾಗೂ ಅವರ ತಂಡವು ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ತಿಳಿಸಿ ತಮ್ಮಿಂದ ಐದು ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ಆರೋಪಿಗಳಾದ ಚೈತ್ರಾ, ಶ್ರೀಕಾಂತ್‌, ರಮೇಶ್‌, ಗಗನ್‌, ಪ್ರಜ್ವಲ್‌ ಹಾಗೂ ಧನರಾಜ್‌ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ 1.50 ಕೋಟಿ ರೂ. ಪಡೆದ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು 2023ರ ಸೆಪ್ಟೆಂಬರ್‌ 19 ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು.

ಸಿಸಿಬಿ ಪೊಲೀಸರು ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ಅವರ ತಂಡದಿಂದ ಶೇ. 80 ರಷ್ಟು ಹಣ ಜಪ್ತಿ ಮಾಡಿ ಹಿಂಪಡೆದಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ವಂಚನೆ ಪ್ರಕರಣವೊಂದರಲ್ಲಿ ಸಿಸಿಬಿ ಪೊಲೀಸರು ಶೇ 80 ರಷ್ಟು ಹಣವನ್ನು ರಿಕವರಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೈತ್ರಾ ಬಳಿಯಿಂದ 81 ಲಕ್ಷ ರೂಪಾಯಿ ನಗದು, 23 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಸಹಕಾರಿ ಬ್ಯಾಂಕ್‌ನಲ್ಲಿ 1.08 ಕೋಟಿ ಮೌಲ್ಯದ ಎಫ್ ಡಿ ಜೊತೆಗೆ 12 ಲಕ್ಷ ರೂ. ಮೌಲ್ಯದ ಕಿಯಾ ಕಾರನ್ನು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಗಗನ್ ಕಡೂರ್, ಧನರಾಜ್ ರಮೇಶ್ ರಿಂದ 26 ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅಭಿನವ ಹಾಲಾಶ್ರೀ ಬಳಿ 56 ಲಕ್ಷ ರೂ. ನಗದು, 25 ಲಕ್ಷ ರೂ. ಮೌಲ್ಯದ ಕಾರು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಚೈತ್ರಾ ವಂಚನೆ ಪ್ರಕರಣದಲ್ಲಿ ಕುಂದಾಪುರಕ್ಕೆ ಅವಮಾನ: ಊರಿನ ಹೆಸರು ಬಳಸದಂತೆ ನಿರ್ಬಂಧಿಸಲು ಕೋರ್ಟ್‌ಗೆ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...