Homeಕರ್ನಾಟಕಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಗ್ಯಾಂಗ್​ನ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯು ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್​ ಮುಂದೂಡಿದೆ.

ಅಭಿನವ ಹಾಲಶ್ರೀ ಸ್ವಾಮೀಜಿ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ​ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಹಾಗಾಗಿ ಸೆ.19ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಇನ್ನು ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಸ್ವಾಮೀಜಿಯ ಮೇಲಿನ ಆರೋಪವೇನು?

ಬೆಂಗಳೂರಿನ ಗೋವಿಂದರಾಜನಗರದ ಶ್ರೀಮದ್ ವಿಭೂತಿಪುರ ಒಡೆತನದ ನಿವಾಸದಲ್ಲಿ ವಾಸವಿದ್ದ ಅಭಿನವ ಹಾಲಶ್ರೀ ಇದೇ ಮನೆಯಲ್ಲಿ ಒಂದೂವರೆ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ಸದ್ಯ 3-4 ತಿಂಗಳ ಹಿಂದೆ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ. ಇಲ್ಲಿ ಕೂಡ ಸ್ಥಳ ಮಹಜರು ನಡೆಸಲಾಗಿದೆ.

ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಆಂಧ್ರಪ್ರದೇಶದಲ್ಲಿ ಕಾರು ಚಾಲಕ ಪತ್ತೆಯಾಗಿದ್ದು, ಆತನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗುವ ಸಾಧ್ಯತೆಯಿದೆ.

MLA ಟಿಕೆಟ್ ಕೊಡಿಸುವುದಾಗಿ ವಂಚಿಸಿ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು ನೀಡಿದ್ದಾರೆ.

ಉದ್ಯಮಿ ಗೋವಿಂದಬಾಬು ಪೂಜಾರಿ, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿ ಜಿಲ್ಲೆ ಬೈಂದೂರಿನ ಹರ್ಷಾನಾಯ್ಕ್ ಹಳ್ಳಿಹೊಳೆ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ. 11ರಂದು ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು.

ಉದ್ಯಮಿಗೆ 5 ಕೋಟಿ ವಂಚಿಸಿರುವ ಚೈತ್ರಾ ಕುಂದಾಪುರ ತನ್ನ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದಾರೆ. ಉಡುಪಿ ತಾಲೂಕಿನ ಉಪ್ಪೂರಿನಲ್ಲಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಾಕರ್​ನಲ್ಲಿ ನಗನಾಣ್ಯ ಸೇರಿದಂತೆ 1.08 ಕೋಟಿ ಮೌಲ್ಯದ ಆಸ್ತಿ ಪತ್ರ, 65 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 40 ಲಕ್ಷ ರೂ. ಬ್ಯಾಂಕ್​ ಲಾಕರ್​ನಲ್ಲಿ ಪತ್ತೆ ಆಗಿದೆ.

ಇದನ್ನೂ ಓದಿ: 5 ಕೋಟಿ ರೂ. ವಂಚನೆ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ವಶಕ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read