Homeಮುಖಪುಟಚಕ್ರತೀರ್ಥ ಪೂರ್ವಗ್ರಹ ಪೀಡಿತರಾಗಿದ್ದಾರೆ: ಪಠ್ಯ ಪರಿಶೀಲನೆಯಲ್ಲಿನ ಎಡವಟ್ಟುಗಳಿಗೆ ಇತಿಹಾಸ ತಜ್ಞರ ಆಕ್ಷೇಪ

ಚಕ್ರತೀರ್ಥ ಪೂರ್ವಗ್ರಹ ಪೀಡಿತರಾಗಿದ್ದಾರೆ: ಪಠ್ಯ ಪರಿಶೀಲನೆಯಲ್ಲಿನ ಎಡವಟ್ಟುಗಳಿಗೆ ಇತಿಹಾಸ ತಜ್ಞರ ಆಕ್ಷೇಪ

- Advertisement -
- Advertisement -

ಸಂಘ ಪರಿವಾರದ ಹಿನ್ನೆಲೆಯ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚನೆಯಾದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಇತಿಹಾಸ ಪಠ್ಯದಲ್ಲಿ ಮಾಡಲಾಗುತ್ತಿರುವ ಬದಲಾವಣೆಗಳ ಕುರಿತು ಈಗಾಗಲೇ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಇತಿಹಾಸತಜ್ಞರು, ಸಮಿತಿಯ ಧೋರಣೆ ಹಾಗೂ ರೋಹಿತ್‌ ಚಕ್ರತೀರ್ಥರ ವರ್ತನೆಗಳನ್ನು ಕಟುವಾಗಿ ಖಂಡಿಸಿದ್ದಾರೆ.

ತುಮಕೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಓ.ಅನಂತರಾಮಯ್ಯ, ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ವಿಶ್ರಾಂತ ಸಮ-ಕುಲಪತಿ ಪ್ರೊ. ಎಸ್.ಚಂದ್ರಶೇಖರ್, ಬೆಂಗಳೂರು ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಅಶ್ವತ್ಥನಾರಾಯಣ, ಡಾ.ಎಂ.ಜಮುನ, ಇತಿಹಾಸ ದರ್ಪಣ ಸಂಪಾದಕ ಡಾ. ಹಂ.ಗು. ರಾಜೇಶ್, ಹಿರಿಯ ಇತಿಹಾಸಕಾರ ಡಾ.ಎಚ್.ಎಸ್.ಗೋಪಾಲರಾವ್, ಇತಿಹಾಸ ಸಂಶೋಧಕ ಡಾ. ಕೆ.ಪ್ರಕಾಶ್ ಜಂಟಿಯಾಗಿ ಅವರು ಜಂಟಿಯಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಕಾಡೆಮಿಕ್ ನೆಲೆಯಲ್ಲಿ ಅಧ್ಯಯನ ನಡೆಸಿರದ ಮತ್ತು ಇತಿಹಾಸದ ವೈಧಾನಿಕತೆಯ ಅರಿವೇ ಇರದ ರೋಹಿತ್ ಚಕ್ರತೀರ್ಥ ಅವರು ಪೂರ್ವಾಗ್ರಹ ಪೀಡಿತರಾಗಿ ತಮ್ಮ ಅಪ್ರಬುದ್ಧ ಹೇಳಿಕೆಗಳ ಮೂಲಕ ಸಾರ್ವಜನಿಕರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದು ಖಂಡನೀಯ” ಎಂದಿದ್ದಾರೆ.

ಪತ್ರಿಕೆ ಹೇಳಿಕೆಯಲ್ಲಿ ಹೇಳಿರುವುದೇನು?

2017ರಲ್ಲಿ ಜಾರಿಗೊಂಡ ಪರಿಷ್ಕೃತ ಪಠ್ಯಪುಸ್ತಕಗಳು ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ವಿವಿಧ ವಿಷಯಗಳ 27 ತಜ್ಞರ ಸಮಿತಿಗಳಿಂದ ರೂಪುಗೊಂಡವು. ಐದು ವರ್ಷಗಳ ನಂತರ ಪರಿಷ್ಕರಣೆಯನ್ನು ಆಕ್ಷೇಪಿಸಿ, ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಒಂದು ಸಮಿತಿ ಮರುಪರಿಷ್ಕರಣೆ ನಡೆಸಿರುವುದೇ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಜೊತೆಗೆ ಪಠ್ಯ ಪುಸ್ತಕಗಳ ಮರುಪರಿಷ್ಕರಣ ಸಮಿತಿಯ ಅಧ್ಯಕ್ಷರು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನೀಡಿರುವ ಹೇಳಿಕೆಗಳನ್ನು ಮತ್ತು ವಿವಿಧ ಮಾಧ್ಯಮಗಳ ವರದಿಗಳನ್ನು ಗಮನಿಸಿದಾಗ ರಾಜ್ಯದ ಇತಿಹಾಸ ಪಠ್ಯ ಪುಸ್ತಕಗಳಲ್ಲಿ ವಸ್ತುವಿಷಯವನ್ನು ತಿರುಚುವ ಹುನ್ನಾರ ನಡೆದಿರುವಂತೆ ತೋರುತ್ತದೆ.

ಇದನ್ನೂ ಓದಿರಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ಚಕ್ರತೀರ್ಥ ಅವರು ವಿಡಿಯೋ ಒಂದರಲ್ಲಿ “ತುಪ್ಪ ಇಲ್ಲದೆ ಜನ ಒದ್ದಾಡಬೇಕಾಯಿತು; ಹಸಿವಿನಿಂದ ಮಕ್ಕಳು ಸಾಯಬೇಕಾಯಿತು” ಎಂದು ಪಠ್ಯ ಪುಸ್ತಕದಲ್ಲಿ ಇರುವುದಾಗಿ ಹಸಿಸುಳ್ಳು ಹೇಳಿದ್ದಾರೆ. ಯಾವ ತರಗತಿಯ ಇತಿಹಾಸ ಪಠ್ಯದಲ್ಲಿ ಹೀಗೆ ಬರೆದಿದೆ ಎಂಬುದನ್ನು ಅವರೇ ತೋರಿಸಬೇಕು.

ಮುಂದುವರೆದು, “ವೇದಗಳ ಕಾಲದಲ್ಲಿ ಮಹಿಳೆಯರಿಗೆ ಸ್ಥಾನಮಾನಗಳಿರಲಿಲ್ಲ. ಅವರನ್ನ ಗೌರವದಿಂದ ನೋಡಿಕೊಳ್ಳುತ್ತಿರಲಿಲ್ಲ” ಎಂಬುದಾಗಿ ಪಠ್ಯ ಪುಸ್ತಕಗಳಲ್ಲಿ ಬರೆದಿದ್ದಾರೆಂದು ಆರೋಪಿಸುತ್ತಾರೆ. ಬಹುಶಃ ಚಕ್ರತೀರ್ಥ ಅವರು ಪಠ್ಯ ಪುಸ್ತಕವನ್ನು ಸರಿಯಾಗಿ ಓದಿಕೊಂಡಿರುವಂತೆ ಕಾಣುವುದಿಲ್ಲ. ಏಕೆಂದರೆ, 6ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಭಾಗ-1 ರ ‘ವೇದಕಾಲದ ಸಂಸ್ಕೃತಿ’ ಪಾಠದಲ್ಲಿ (ಪುಟ: 74ರಲ್ಲಿ) ‘ಸ್ತ್ರೀಯರ ಸ್ಥಾನಮಾನ’ ಎಂಬ ಉಪಶೀರ್ಷಿಕೆ ಅಡಿಯಲ್ಲಿ ಋಗ್ವೇದ ಕಾಲದಲ್ಲಿ ಸ್ತ್ರೀಯರಿಗಿದ್ದ ಉನ್ನತ ಸ್ಥಾನಮಾನಗಳಿದ್ದವೆಂದು ಬರೆಯಲಾಗಿದೆ. ಆ ಕಾಲದ ಪ್ರಮುಖ ಮಹಿಳಾ ವಿದ್ವನ್ಮಣಿಗಳನ್ನೂ ಹೆಸರಿಸಲಾಗಿದೆ. ಋಗ್ವೇದ ಕಾಲದಲ್ಲಿದ್ದ ಮಹಿಳೆಯರ ಸ್ಥಾನಮಾನಗಳು ನಂತರದ ವೇದಗಳ ಕಾಲದ ಸಮಾಜದಲ್ಲಿ ಕುಸಿಯುತ್ತವೆ. ಇದು ಕೂಡ ಸ್ಪಷ್ಟವಾಗಿದೆ. ಹೀಗೆ ಕಣ್ಮುಂದೆ ಇರುವ ಪಠ್ಯಪುಸ್ತಕಗಳನ್ನೇ ಇಟ್ಟುಕೊಂಡು, ಸರ್ಕಾರ ನೀಡಿರುವ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಈ ಪರಿಯಲ್ಲಿ ಸುಳ್ಳುಗಳನ್ನು ಹೇಳುತ್ತಿರುವುದು ದುರದೃಷ್ಟಕರ.
ಹರಪ್ಪ ನಾಗರಿಕತೆಯನ್ನು ಸಿಂಧೂ-ಸರಸ್ವತಿ ನಾಗರಿಕತೆ ಎಂದು ಕರೆಯುವುದು; ಸಿಂಧೂ-ಸರಸ್ವತಿ ನಾಗರಿಕತೆಯು ವೇದಗಳ ನಂತರ ಕಾಲದ್ದೆಂದು ಪ್ರತಿಪಾದಿಸಲು ಹೊರಟಿರುವುದು, ಇದೆಲ್ಲ ಅವರ ತಿಳಿವಳಿಕೆಯ ಕೊರತೆಯನ್ನು ತೋರ್ಪಡಿಸುತ್ತವೆ.

1921ರಲ್ಲಿ ಸಿಂಧೂ ಕಣಿವೆಯ ಹರಪ್ಪಾ ಎಂಬಲ್ಲಿ ನಾಗರಿಕತೆಯ ಮೊದಲ ನೆಲೆಯು ಬೆಳಕಿಗೆ ಬಂದಿತು. ತದನಂತರದ ವರ್ಷಗಳಲ್ಲಿ ಈ ನಾಗರಿಕತೆಯ ನೆಲೆಗಳು ಸಿಂಧೂ ಕಣಿವೆಯ ಆಚೆಗೂ ಅಂದರೆ, ಯಮುನಾ, ತಪತಿ, ನರ್ಮದಾ ಕಣಿವೆಗಳಲ್ಲಿಯೂ ಬೆಳಕಿಗೆ ಬಂದಿದ್ದರಿಂದ ನದಿ ಕಣಿವೆಯ ಹೆಸರಿನಿಂದ ಈ ನಾಗರಿಕತೆಯನ್ನು ಗುರುತಿಸಲು ಅಸಾಧ್ಯವಾಯಿತು. ಆದ್ದರಿಂದ ಅದರ ಮೊದಲ ನೆಲೆಯಾದ ‘ಹರಪ್ಪಾ’ ಹೆಸರಿನಿಂದ ಈ ನಾಗರಿಕತೆಯನ್ನು ಇತಿಹಾಸಕಾರರು ಗುರುತಿಸುತ್ತಾ ಬರುತ್ತಿದ್ದಾರೆ. ಪುರಾತತ್ವ ಸಂಶೋಧನಾ ಶಾಸ್ತ್ರದ ವೈಧಾನಿಕತೆಯಲ್ಲಿ ನೆಲೆಗಳ ಹೆಸರಿನಿಂದಲೇ ಸಂಸ್ಕೃತಿಗಳನ್ನು ಗುರುತಿಸುವುದು ಇಲ್ಲಿವರೆಗೂ ನಡೆದು ಬಂದಿರುವ ಮಾದರಿ.

ಸಿಂಧೂ ನಾಗರಿಕತೆಯು ವೇದಗಳ ನಂತರ ಕಾಲದ್ದು ಎಂದು ಚಕ್ರತೀರ್ಥ ಸುಳ್ಳು ಪ್ರತಿಪಾದನೆಗೆ ಮುಂದಾಗಿದ್ದಾರೆ. ಪ್ರಸಿದ್ಧ ಇತಿಹಾಸಕಾರ ಆರ್.ಸಿ. ಮಜುಂದಾರ್ ಅವರೇ ಸಿಂಧೂ ನಾಗರಿಕತೆಯು ವೇದ ಕಾಲಕ್ಕೂ ಮೊದಲಿನದೆಂದು ಸ್ಪಷ್ಟವಾಗಿ ತೋರಿಸಿ ಕೊಟ್ಟಿದ್ದಾರೆ. ಅವರು ತಮ್ಮ ‘An Advanced History of India’ ಎಂಬ ಕೃತಿಯಲ್ಲಿ (ಪುಟ: 22-23) ಸಿಂಧೂ ನಾಗರಿಕತೆ ಮತ್ತು ವೇದಗಳ ಸಂಸ್ಕೃತಿ ಹೇಗೆ ಬೇರೆ ಬೇರೆ, ಹಾಗೂ ಸಿಂಧೂ ನಾಗರಿಕತೆ ವೇದಗಳ ನಾಗರಿಕತೆಗಿಂತ ಹೇಗೆ ಪ್ರಾಚೀನ ಎಂಬುದನ್ನು ತರ್ಕಬದ್ಧವಾಗಿ ನಿರೂಪಿಸಿದ್ದಾರೆ. ಚಕ್ರತೀರ್ಥ ಅವರು ಇಷ್ಟಾದರೂ ಕೂಡ ಬರಗೂರರೇ ಎಡಪಂಥಿಯರ ಸಿದ್ಧಾಂತವನ್ನು ಪಠ್ಯದಲ್ಲಿ ತಂದಿದ್ದಾರೆ ಎಂದು ಆರೋಪಿಸುವ ಮೂಲಕ ತಮ್ಮ ಅಜ್ಞಾನವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ. ತಮ್ಮ ವಿಚಾರಧಾರೆಗೆ ಒಪ್ಪದ ಭಿನ್ನ ನೋಟಗಳನ್ನು ಎಡಪಂಥಿಯ ವಿಚಾರಧಾರೆ ಎಂದೇ ಆರೋಪಿಸುವ ಮೂಲಕ ಚರಿತ್ರೆಯನ್ನು ಅರ್ಥೈಸುವ ಬಹುಮಾದರಿಗಳನ್ನು ನಿರಾಕರಿಸುತ್ತಾರೆ.

ಇದನ್ನೂ ಓದಿರಿ: ಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

ಮುಂದುವರೆದು, ಚಕ್ರತೀರ್ಥ ಅವರು ಟಿಪ್ಪುವನ್ನು ‘ಮೈಸೂರು ಹುಲಿ’ ಎಂದು ಕರೆದವರು ಯಾರು? ಅವನಿಗೆ ‘ಸುಲ್ತಾನ’ ಎಂಬ ಬಿರುದು ಕೊಟ್ಟವರು ಯಾರು? ಎಂದು ಪ್ರಶ್ನಿಸಿರುವುದಲ್ಲದೆ, ಪಠ್ಯ ಪುಸ್ತಕದಲ್ಲಿ ಪ್ರಸ್ತಾಪಿಸಿರುವ ಟಿಪ್ಪುವಿನ ಪ್ರಗತಿಪರ ಕಾರ್ಯಗಳಾದ ರಾಕೇಟ್ ತಂತ್ರಜ್ಞಾನ ಅಭಿವೃದ್ಧಿ, ಮರಾಠರಿಂದ ಲೂಟಿಗೊಳಗಾದ ಶೃಂಗೇರಿ ಮಠಕ್ಕೆ ದೇಣಿಗೆ ನೀಡಿದ್ದು, ರೇಷ್ಮೆ ಅಭಿವೃದ್ಧಿ ಕೈಗೊಂಡ ವಿಚಾರಗಳನ್ನು ವೈಭವೀಕರಣಗೊಂಡಿವೆ ಎಂಬ ನೆಪದಲ್ಲಿ ಪಠ್ಯದಿಂದ ಕೈಬಿಟ್ಟಿರುವ ಅಂಶಗಳು ಮಾಧ್ಯಮಗಳಿಂದ ಬೆಳಕಿಗೆ ಬಂದಿವೆ.

ಬ್ರಿಟಿಷ್ ಅಧಿಕಾರಿ ಮೆಡೋಸ್ ಟೇಲರ್ ಅವರು ಜನರು ಟಿಪ್ಪುವನ್ನು ‘ಮೈಸೂರು ಹುಲಿ’ಎಂದು ಕರೆಯುತ್ತಿದ್ದರೆಂದು ದಾಖಲಿಸಿದ್ದಾರೆ. ಅವರ ಮಾತುಗಳನ್ನು ಜನಪದ ಲಾವಣಿಗಳು ಕೂಡ ಪುಷ್ಟಿಕರಿಸಿದ್ದು, ಲಾವಣಿಗಳು ಟಿಪ್ಪುವನ್ನು ‘ಮೈಸೂರು ಹುಲಿ’ಎಂದು ಹಾಡಿ ಹೊಗಳಿವೆ. ಟಿಪ್ಪು ರಾಕೆಟ್ ತಂತ್ರಜ್ಞಾನವನ್ನು ಅಭಿವೃದ್ಧಿ ಮಾಡಿದ ಬಗ್ಗೆ ಖ್ಯಾತ ವಿಜ್ಞಾನಿಗಳಾದ ರೊದ್ದಂ ನರಸಿಂಹ ಮತ್ತು ಎ.ಪಿ.ಜೆ. ಅಬ್ದುಲ್ ಕಲಾಂ ಅವರೇ ಉಲ್ಲೇಖಿಸಿದ್ದಾರೆ. ರೇಷ್ಮೆ ಅಭಿವೃದ್ಧಿಪಡಿಸಿದ ಕುರಿತು ಖ್ಯಾತ ಇತಿಹಾಸಕಾರರಾದ ಡಾ.ಸೂರ್ಯನಾಥ ಕಾಮತ್, ಪ್ರೊ. ಷೇಕ್ ಅಲಿ ಮೊದಲಾದವರು ದಾಖಲಿಸಿದ್ದಾರೆ. ಅಲ್ಲದೆ, ಶೃಂಗೇರಿ ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿಗಳೊಂದಿಗೆ ಟಿಪ್ಪುವು 23 ಪತ್ರ ವ್ಯವಹಾರಗಳನ್ನು ನಡೆಸಿರುವ ದಾಖಲೆಗಳು ಎ.ಕೆ. ಶಾಸ್ತ್ರಿ ಅವರು ಸಂಪಾದಿಸಿರುವ ‘ಶೃಂಗೇರಿಮಠದ ಕಡತಗಳಲ್ಲಿಯ ಆಯ್ದ ಚಾರಿತ್ರಿಕ ದಾಖಲೆಗಳು’ಕೃತಿಯಲ್ಲಿ (ಪುಟ: 242-272) ಪ್ರಕಟವಾಗಿವೆ. ಇವುಗಳಲ್ಲಿ ಮಠಕ್ಕೆ ಟಿಪ್ಪು ನೀಡಿರುವ ಅಪಾರ ಪ್ರಮಾಣದ ದಾನ ದತ್ತಿಯನ್ನು ಯಾರೂ ಕೂಡ ಅಲ್ಲಗಳೆಯಲಾರರು. ಈ ಎಲ್ಲಾ ಕಾರಣಗಳಿಂದಾಗಿಯೇ ಇತಿಹಾಸಕಾರ ತಿ.ತಾ. ಶರ್ಮ ಅವರು “ಅನಾಮಧೇಯ ಮೈಸೂರಿಗೆ ಅಭಿಮಾನಧನ ಟಿಪ್ಪು ಸುಲ್ತಾನ ಅಂತಾರಾಷ್ಟ್ರೀಯ ಸ್ಥಾನಗಳಿಸಿಕೊಟ್ಟ”ಎಂದು ಪ್ರಶಂಸಿಸಿದ್ದಾರೆ. ಟಿಪ್ಪುವನ್ನು ಕೇವಲ ಮುಸ್ಲಿಮನಾಗಿ ನೋಡದೆ 18ನೇ ಶತಮಾನದ ರಾಜಕೀಯ ಸಂಘರ್ಷಗಳ ಹಿನ್ನೆಲೆಯಲ್ಲಿ ಗ್ರಹಿಸುವುದು ಇತಿಹಾಸವು ಅಪೇಕ್ಷಿಸುವ ವಿಧಾನ.

ಅಕಾಡೆಮಿಕ್ ನೆಲೆಯಲ್ಲಿ ಅಧ್ಯಯನ ನಡೆಸಿರದ ಮತ್ತು ಇತಿಹಾಸದ ವೈಧಾನಿಕತೆಯ ಅರಿವೇ ಇರದ ರೋಹಿತ್ ಚಕ್ರತೀರ್ಥ ಅವರು ಪೂರ್ವಾಗ್ರಹ ಪೀಡಿತರಾಗಿ ತಮ್ಮ ಅಪ್ರಬುದ್ಧ ಹೇಳಿಕೆಗಳ ಮೂಲಕ ಸಾರ್ವಜನಿಕರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದು ಖಂಡನೀಯವಾಗಿದೆ. ಇತಿಹಾಸ ವಿಷಯದಲ್ಲಿ ಇತಿಹಾಸಕಾರರ ಅಭಿಪ್ರಾಯಗಳು ಅಂತಿಮವಾಗಬೇಕೇ ವಿನಃ ಇತರರ ಅಭಿಪ್ರಾಯಗಳಲ್ಲ. ಸಂಬಂಧಪಟ್ಟ ಸಂಘ ಸಂಸ್ಥೆಗಳು, ತಜ್ಞರ ಜೊತೆಗೆ ವರದಿ ಸಿದ್ಧತೆಯ ಪೂರ್ವದಲ್ಲಿ ಇವರು ಚರ್ಚಿಸಬೇಕಿತ್ತೆ ವಿನಃ ವರದಿ ಸಲ್ಲಿಸಿದ ನಂತರದಲ್ಲಲ್ಲ. ಒಮ್ಮೆ ಪಠ್ಯ ಮರುಪರಿಷ್ಕರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಮೇಲೆ ಅಧ್ಯಕ್ಷರ ಜವಾಬ್ದಾರಿ ಮುಗಿಯುತ್ತದೆ. ಒಪ್ಪುವುದು ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಆದರೆ ಶಿಷ್ಟಾಚಾರ ಮರೆತು ಹಿಂದಿನ ಅಧ್ಯಕ್ಷರನ್ನು ದೂಷಿಸುವುದಾಗಲಿ, ಅಕಾಡೆಮಿಕ್ ವಲಯದಲ್ಲಿ ನಡೆಯಬೇಕಾದ ಚರ್ಚೆಯನ್ನು ಸಂತೆಯಲ್ಲಿ ನಿಂತು ಮಾತನಾಡುವುದಾಗಲಿ ಸರ್ಕಾರದ ನಿಯಮಗಳಿಗೂ ಕೂಡ ವಿರುದ್ಧವಾದುದು. ಆದ್ದರಿಂದ ರೋಹಿತ್ ಚಕ್ರತೀರ್ಥ ಅವರ ಈ ವರ್ತನೆಯನ್ನು ಸರ್ಕಾರವು ಕೂಡಲೇ ನಿಯಂತ್ರಿಸಬೇಕು.

ಇದನ್ನೂ ಓದಿರಿ: ವಿಶೇಷ ವರದಿ; ಬಲಪಂಥೀಯ ರಾಜಕಾರಣದಲ್ಲಿ ಪಠ್ಯ ಪರಿಷ್ಕರಣೆ

27 ಸಮಿತಿಯಲ್ಲಿ ವಿಷಯ ತಜ್ಞರಿದ್ದರು: ಡಾ.ಹಂ.ಗು.ರಾಜೇಶ್

ಸಾಹಿತಿ ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷರಲ್ಲಿ ರಚನೆಯಾದ ಪಠ್ಯಪುಸ್ತಕ ಸಮಿತಿಯಲ್ಲಿ ಇತಿಹಾಸ ಪಠ್ಯಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿರುವ ಡಾ.ಹಂ.ಗು.ರಾಜೇಶ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಶಿಕ್ಷಣ ತಜ್ಞರು ಹಾಗೂ ಇತಿಹಾಸಕಾರರು ಪಠ್ಯ ಹೇಗಿರಬೇಕೆಂದು ನಿರ್ಧರಿಸುತ್ತಾರೆ. ನಾವು ಪಠ್ಯಪುಸ್ತಕ ರಚನೆ ಮಾಡುವಾಗ ಸರ್ವಾಧ್ಯಕ್ಷರಾಗಿದ್ದ ಬರಗೂರು ರಾಮಚಂದ್ರಪ್ಪ ಅವರು ಯಾವುದೇ ನಿಲುವನ್ನು ನಮ್ಮ ಮೇಲೆ ಹೇರಿರಲಿಲ್ಲ. ಸ್ವತಂತ್ರವನ್ನು ಕೊಟ್ಟಿದ್ದರು. ವಿದ್ಯಾರ್ಥಿಗಳ ವಯೋಮಾನಕ್ಕೆ ಅನುಗುಣವಾಗಿ, ಪಠ್ಯ ರೂಪಿಸಲಾಗಿತ್ತು. 27 ಸಮಿತಿಯಲ್ಲಿ ಸುಮಾರು 175ಕ್ಕೂ ಹೆಚ್ಚು ತಜ್ಞರು ಇದ್ದರು. ವಿಷಯ ತಜ್ಞರು ಪಠ್ಯವನ್ನು ನಿರ್ಧರಿಸಿದ್ದಾರೆ. ವಿನಾಕಾರಣ ಬರಗೂರು ಅವರ ಹೆಸರನ್ನು ತರಲಾಗುತ್ತಿದೆ. 27 ಸಮಿತಿಗಳು ಸುಮಾರು ಒಂದೂವರೆ ವರ್ಷಗಳ ಕಾಲ ಮಾಡಿರುವ ಕೆಲಸವನ್ನು ಒಂದು ಸಮಿತಿಯವರು ಪರಿಶೀಲನೆ ಮಾಡುವುದು ಅನುಮಾನ ತರುತ್ತದೆ” ಎಂದರು.

“ಬೀದಿಯಲ್ಲಿ ನಿಂತು ಚರ್ಚೆ ಮಾಡುವ ವಿಷಯ ಇದಲ್ಲ. ಶೈಕ್ಷಣಿಕ ವಲದೊಳಗೆ ಚರ್ಚೆಯಾಗಬೇಕು. ದೋಷಗಳೇನಾದರೂ ಇದ್ದರೆ ಅದನ್ನು ಸರಿಪಡಿಸಬೇಕು. ವರದಿಯನ್ನು ಒಪ್ಪಿಕೊಳ್ಳವುದು ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಆದರೆ ಮನಬಂದಂತೆ ಪರಿಶೀಲನಾ ಸಮಿತಿಯ ಅಧ್ಯಕ್ಷರು ಮಾತನಾಡುವುದು ಸರಿಯಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...