Homeಕರ್ನಾಟಕಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ...

ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

- Advertisement -
- Advertisement -

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿದ್ದ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆಯವರಿಗೆ ಸಂಬಂಧಿಸಿದ ವಿವರಣೆಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕಿತ್ತು ಬಿಸಾಕಿದೆ.

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ಪಠ್ಯವನ್ನು ಚಕ್ರತೀರ್ಥ ಸಮಿತಿ ಕಿತ್ತು ಬಿಸಾಡಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ತಾಯಂದಿರ ಮಾಹಿತಿಯನ್ನು ತೆರವು ಮಾಡಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.

ನಾರಾಯಣಗುರುಗಳ ವಿವರಣೆ ಆದ ಮೇಲೆ “ಮಹಿಳಾ ಸಮಾಜ ಸುಧಾರಕಿಯರು” ಉಪಶೀರ್ಷಿಕೆಯಲ್ಲಿ ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್‌ ರಮಾಬಾಯಿ ಅವರ ಪರಿಚಯಗಳನ್ನು ಮಾಡಿಕೊಡಲಾಗಿತ್ತು.

ಹಳೆಯ ಪಠ್ಯದಲ್ಲಿ ಏನಿದೆ?

ಸಾವಿತ್ರಿಬಾಯಿ ಫುಲೆ

ಸಾವಿತ್ರಿಬಾಯಿ ಫುಲೆ ಭಾರತದ ಪ್ರಸಿದ್ಧ ಸಮಾಜ ಸುಧಾರಕರು, ಶೈಕ್ಷಣಿಕ ಸುಧಾರಕರು ಹಾಗೂ ಕವಯಿತ್ರಿ. ತಮ್ಮ ಪತಿ ಜ್ಯೋತಿ ಬಾ ಫುಲೆಯವರೊಡಗೂಡಿ ಪುಣೆಯಲ್ಲಿ ಬಾಲಕಿಯರ ಶಾಲೆಯನ್ನು ಆರಂಭಿಸಿದರಲ್ಲದೆ ತಾವೇ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದರು. ಬಾಲ ವಿಧವೆಯರಿಗಾಗಿ ಪುನರ್‌ ವಸತಿ ಕೇಂದ್ರಗಳನ್ನು ತೆರೆಯುವ ಮೂಲಕ ಶಿಶುಹತ್ಯೆ ಪ್ರಕರಣಗಳನ್ನು ಕೊನೆಗಾಣಿಸಲು ಪ್ರಯತ್ನ ಮಾಡಿದರು. ಜಾತಿ ಪದ್ಧತಿ ಮತ್ತು ಲಿಂಗ ಅಸಮಾನತೆಯ ವಿರುದ್ಧ ಹೋರಾಡಿದರು. ಅದಕ್ಕಾಗಿ ಅವರು ಸಮಾಜದ ವಿರೋಧವನ್ನು ಎದುರಿಸಬೇಕಾಯಿತು.

ಪತಿ ಜ್ಯೋತಿ ಬಾ ಫುಲೆಯ ಸಾಮಾಜಿಕ ಹೋರಾಟಗಳಲ್ಲಿ  ಹೆಗಲಿಗೆ ಹೆಗಲುಕೊಟ್ಟು ದುಡಿದರು. ಅವರ ಸಾವಿನ ನಂತರ ‘ಸತ್ಯ ಶೋಧಕ ಸಮಾಜ’ವನ್ನು ಮುನ್ನಡೆಸಿದರು. ಪ್ಲೇಗ್‌ ಮಹಾಮಾರಿಯ ರೋಗಕ್ಕೆ ತುತ್ತಾದವರ ಸೇವೆಯನ್ನು ತಮ್ಮ ಮಗನೊಡನೆ ಸೇರಿ ಮಾಡುತ್ತಿರುವಾಗಲೇ ಪ್ಲೇಗ್ ರೋಗಕ್ಕೆ ತುತ್ತಾದರು.

ತಾರಾಬಾಯಿ ಶಿಂದೆ

ತಾರಾಬಾಯಿ ಶಿಂದೆ ಮಹಾರಾಷ್ಟ್ರದ ಮೊದಲ ಮಹಿಳಾ ಹೋರಾಟಗಾರ್ತಿ. ಜ್ಯೋತಿ ಬಾ ಫುಲೆಯವರ ಸತ್ಯಶೋಧಕ ಸಮಾಜದ ಸಕ್ರಿಯ ಸದಸ್ಯರಾಗಿ ಸಾಮಾಜಿಕ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಬಾಲ ವಿಧವೆಯರ ರಕ್ಷಣೆ ಮತ್ತು ವಿಧವಾ ಪುನರ್ವಿವಾಹಕ್ಕೆ ಬೆಂಬಲ ನೀಡಿದರು. ತಮ್ಮ ಕೃತಿ ‘ಸ್ತ್ರೀ- ಪುರುಷ ತುಲನಾ’ದಲ್ಲಿ ಮಹಿಳೆಯ ಶೋಷಣೆಯನ್ನು ಉಗ್ರವಾಗಿ ಪ್ರತಿಭಟಿಸಿದ್ದಾರೆ.

ಪಂಡಿತ್‌ ರಮಾಬಾಯಿ 

ಪಂಡಿತ್ ರಮಾಬಾಯಿ ಅವರು ಭಾರತದ ಪ್ರಸಿದ್ಧ ಕ್ರೈಸ್ತ ಸಮಾಜ ಸುಧಾರಕಿ. ಅನಂತಶಾಸ್ತ್ರಿ ಡೊಂಗ್ಸೆ ಹಾಗೂ ಲಕ್ಷ್ಮೀಬಾಯಿ ದಂಪತಿಗಳ ಪುತ್ರಿಯಾಗಿ ಪಶ್ಚಿಮಘಟ್ಟದ ಗಂಗಾಮೂಲ ಎಂಬಲ್ಲಿ ಜನಿಸಿದರು. ಅಂದಿನ ಸಾಮಾಜಿಕ ಪರಿಸ್ಥಿತಿಗೆ ವಿರುದ್ಧವಾಗಿ ಶಿಕ್ಷಣ ಪಡೆದರು. ಇಂಗ್ಲೇಡಿನಲ್ಲಿ ಓದುವಾಗ ಕ್ರೈಸ್ತಧರ್ಮೀಯರಾದರು. ಭಾರತೀಯ ಮಹಿಳೆಯ ಉದ್ಧಾರಕ್ಕಾಗಿ ಜೀವನವನ್ನೇ ಮುಡುಪಿಟ್ಟು 1889ರಲ್ಲಿ ‘ಮುಕ್ತಿ ಮಿಷನ್‌’ ಸಂಸ್ಥೆಯನ್ನು ಹುಟ್ಟು ಹಾಕಿದರು. ಈ ಸಂಸ್ಥೆಯು ವಿಧವೆಯರು, ಅನಾಥರು ಹಾಗೂ ಕುಡಕರಿಗೆ ಜೀವನೋಪಾಯ ಕಲ್ಪಿಸುತ್ತಾ ಇಂದಿಗೂ ಕಾರ್ಯಶೀಲವಾಗಿದೆ.

ಹೀಗೆ ಮಹಿಳಾ ಸಮಾಜ ಸುಧಾರಕಿಯರ ವಿವರಗಳನ್ನು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ನೀಡಿತ್ತು. ಆದರೆ ಈಗಿನ ಸಮಿತಿಗೆ ಈ ಭಾಗ ಬೇಡವೆನಿಸಿದೆ. ಸಮಾಜ ಸುಧಾರಕರ ವಿಸ್ತೃತ ಪಠ್ಯವನ್ನು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದೆ. ಆದರೆ ನಾರಾಯಣಗುರುಗಳ ಪಾಠವನ್ನು ಕಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...