Homeಕರ್ನಾಟಕಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

- Advertisement -
- Advertisement -

ಅವೈಜ್ಞಾನಿಕ ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪಕ್ಕೆ ಗುರಿಯಾಗಿ ವಿವಾದದ ಕೇಂದ್ರವಾಗಿರುವ ರೋಹಿತ್ ಚಕ್ರತೀರ್ಥ ಬರೆದ ಲೇಖನವೊಂದನ್ನು ಪಠ್ಯಪುಸ್ತಕ ಸಮಿತಿಯಲ್ಲಿ ಚರ್ಚೆಯನ್ನೇ ನಡೆಸದೇ ಕುವೆಂಪು ವಿಶ್ವವಿದ್ಯಾಲಯದ ಬಿಸಿಎ ಪದವಿಯ ಪಠ್ಯಕ್ಕೆ ಸೇರಿಸಿರುವುದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ‘ಪ್ರಜಾವಾಣಿ’ ದಿನಪತ್ರಿಕೆ ವಿಶೇಷ ವರದಿ ಮಾಡಿದ್ದು, “ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ಪಠ್ಯಗಳನ್ನು ಎನ್‌ಇಪಿ ಪಠ್ಯಕ್ರಮದಂತೆ ಪರಿಷ್ಕರಿಸಲಾಗುತ್ತಿದೆ. ಕನ್ನಡ ಭಾಷಾ ವಿಷಯದ ಪಠ್ಯದ ತಂತ್ರಜ್ಞಾನ ವಿಭಾಗದಲ್ಲಿನ ‘ಕೃತಕ ಬುದ್ದಿವಂತಿಕೆ; ಭವಿಷ್ಯ ತಂತ್ರಜ್ಞಾನದ ಹೆಬ್ಬಾಗಿಲು’ ಲೇಖನದ ಲೇಖಕರ ಹೆಸರು ರೋಹಿತ್‌ ಬೆಂಗಳೂರು ಎಂದು ಸೇರಿಸಲಾಗಿದೆ. ಇದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಾಗ, “ಇದು ರೋಹಿತ್ ಚಕ್ರತೀರ್ಥ ಅವರ ಲೇಖನ. ಅವರ ಪೂರ್ಣ ಹೆಸರನ್ನು ಮರೆಮಾಚಿ ಮೋಸ ಮಾಡಲಾಗಿದೆ” ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಭೆಯಲ್ಲಿ ಮಾತಿಗೆ ಮಾತು ಬೆಳೆದು, ಸದಸ್ಯರು ಪರಸ್ಪರ ಎಳೆದಾಡಿಕೊಂಡರು ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ರೋಹಿತ್‌ ಚಕ್ರತೀರ್ಥ ಸಂಪಾದಕತ್ವದ ‘ಸೂತ್ರ’ ಪತ್ರಿಕೆಯ 2021ರ ಆಗಸ್ಟ್‌ ಸಂಚಿಕೆಯಲ್ಲಿ ಈ ಲೇಖನ ಪ್ರಕಟವಾಗಿದೆ. ಮುದ್ರಿತ ಪ್ರತಿಯಲ್ಲಿ ಲೇಖಕರ ಹೆಸರು ‘ತತ್ವಬೋಧ’ ಎಂದಿದೆ. ಆದರೆ, ಕುವೆಂಪು ವಿಶ್ವವಿದ್ಯಾಲಯದ ಪಠ್ಯಪುಸ್ತಕದಲ್ಲಿ ರೋಹಿತ್ ಬೆಂಗಳೂರು ಹೆಸರು ನಮೂದಿಸಲಾಗಿದೆ. ಲೇಖನ ಬಳಸಿಕೊಳ್ಳಲು ಅನುಮತಿ ನೀಡಿದ ಪತ್ರಿಕೆಯ ಸಂಪಾದಕೀಯ ಬಳಗ, ಲೇಖಕರ ಹೆಸರನ್ನು ‘ರೋಹಿತ್‌ ಬೆಂಗಳೂರು’ ಎಂದು ಹಾಕುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

ವಿದ್ಯಾರ್ಥಿಗಳಿಗೆ ಲೇಖಕರ ಪರಿಚಯ ಮಾಡಿಕೊಡಬೇಕಲ್ಲವೇ?

ಒಂದು ಲೇಖನವನ್ನು ಪಠ್ಯದಲ್ಲಿ ಅಳವಡಿಸಿದರೆ ಅದನ್ನು ಬರೆದವರ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡಬೇಕಾಗುತ್ತದೆ. ಆದರೆ ಈ ರೀತಿಯಲ್ಲಿ ಪಠ್ಯವನ್ನು ಅಳವಡಿಸಿದರೆ ಲೇಖಕರ ಪರಿಚಯವನ್ನು ಮಾಡಿಕೊಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಇದನ್ನೂ ಓದಿರಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಈ ಕುರಿತು ಪ್ರಶ್ನಿಸಿರುವ ಕನ್ನಡ ಪ್ರಾಧ್ಯಾಪಕರು ಹಾಗೂ ಭಾಷಾ ತಜ್ಞರೂ ಆದ ಡಾ.ರಂಗನಾಥ ಕಂಟನಕುಂಟೆ, “ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಆಗುವ ಬರೆಹಗಳ ಕುರಿತು ಪಾಠ ಮಾಡುವಾಗ ಲೇಖಕರ ಪರಿಚಯ ಮಾಡುವುದು ಒಂದು ಕ್ರಮ. ವಿದ್ಯಾರ್ಥಿಗಳಿಗೆ ಆ ಮೂಲಕ ಬರೆಹಗಾರರ ಕುರಿತು ತಿಳಿವು ನೀಡಲಾಗುವುದು. ಅದಕ್ಕೆ ಲೇಖಕರ ಬಗೆಗೆ ಸರಿಯಾದ ಮಾಹಿತಿಯನ್ನು ಟಿಪ್ಪಣಿಯಾಗಿ ಕೊಡಲಾಗುವುದು. ಆದರೆ ಇಲ್ಲಿ ಲೇಖಕನ ಹೆಸರನ್ನೇ ಸರಿಯಾಗಿ ನೀಡದೆ ಇರುವುದು ಎದ್ದು ಕಾಣುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಲೇಖಕನ ಹೆಸರನ್ನು ಏಕೆ ಬಚ್ಚಿಡಲಾಗುತ್ತಿದೆ? ಹೀಗೆ ಮಾಡುವುದರಿಂದ ಪಠ್ಯದ ಅಧಿಕೃತತೆಯ ಪ್ರಶ್ನೆ ಮೂಡುವುದಿಲ್ಲವೇ? ಪಠ್ಯ ಪುಸ್ತಕ ಗುಪ್ತ ಸಾಹಿತ್ಯವೇ? ಯಾಕೆ ಇಂತಹ ಕಳ್ಳಾಟ? ಇದು ಕೊನೆಗೆ ವಿವಿಗಳ ಘನತೆಯನ್ನು ಪ್ರಶ್ನೆ ಮಾಡುವ ಸನ್ನಿವೇಶ ಸೃಷ್ಟಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಜಿ.ಎನ್‌.ಧನಂಜಯಮೂರ್ತಿ ಎಂಬವರು ಪ್ರತಿಕ್ರಿಯೆ ನೀಡಿದ್ದು, “ಕುವೆಂಪು ವಿಶ್ವವಿದ್ಯಾಲಯದ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿದೆ. ತಮ್ಮ ಆತ್ಮರತಿಯ ಬಗ್ಗೆ ಪರಸ್ಪರ ಭಜನೆ ಮಾಡಿಕೊಳ್ಳುವವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆ. ಕೆಲವರಿಗೆ ತಿಳಿ ಹೇಳಿದರೆ ಅಸಂಬದ್ಧವಾಗಿ ವರ್ತಿಸುತ್ತಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆಯೊ ನೋಡಬೇಕು. ಕುವೆಂಪು ಬಗ್ಗೆ ಟ್ರೋಲ್ ಮಾಡುವ ವ್ಯಕ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಓದಬೇಕಾದದ್ದು ದುರಂತ” ಎಂದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್‌ ಕುಗ್ವೆಯವರು ಈ ಕುರಿತು ಪೋಸ್ಟ್ ಮಾಡಿದ್ದು, “ಇದರ ನೇರ ಹೊಣೆಗಾರಿಕೆಯನ್ನು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಶಾಂತ್‌ ನಾಯಕ್‌ ಅವರು ಹೊರುವರೆ? ಯಾಕೆಂದರೆ ಪಠ್ಯ ಪುಸ್ತಕ ಸಮಿತಿಯ ಪ್ರಧಾನ ಸಂಪಾದಕರೂ ಅವರೇ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...