Homeಕರ್ನಾಟಕರಂಗಾಯಣ ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣ ಸಮಾರೋಪಕ್ಕೆ ಚಕ್ರವರ್ತಿ ಸೂಲಿಬೆಲೆ!

ರಂಗಾಯಣ ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣ ಸಮಾರೋಪಕ್ಕೆ ಚಕ್ರವರ್ತಿ ಸೂಲಿಬೆಲೆ!

ಚಕ್ರವರ್ತಿ ಸೂಲಿಬೆಲೆಯವರನ್ನು ‘ಸಮಾಜ ಸೇವಕ’ ಎಂದು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿರುವುದನ್ನು ಪ್ರಶ್ನಿಸಿದ ಪತ್ರಕರ್ತರಿಗೆ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಉಡಾಫೆಯಾಗಿ ಉತ್ತರಿಸಿದ್ದಾರೆ.

- Advertisement -
- Advertisement -

ಬಹುರೂಪಿ ಮೈಸೂರು ರಂಗಾಯಣದ ಪ್ರತಿಷ್ಟಿತ ರಾಷ್ಟ್ರೀಯ ನಾಟಕೋತ್ಸವ. ಪ್ರತಿವರ್ಷ ಯಾವುದಾದರೂ ಒಂದು ವಿಷಯವಸ್ತು ಇಟ್ಟುಕೊಂಡು ರಾಷ್ಟ್ರೀಯ ನಾಟಕೋತ್ಸವ ಹಾಗೂ ರಾಷ್ಟ್ರೀಯ ವಿಚಾರಸಂಕಿರಣವನ್ನು ರಂಗಾಯಣ ಇಲ್ಲಿಯವರೆಗೆ ನಡೆಸಿಕೊಂಡು ಬಂದಿದೆ. ಸಾಕಷ್ಟು ಏಳುಬೀಳುಗಳನ್ನು ಬಹುರೂಪಿ ನಾಟಕೋತ್ಸವ ಕಂಡಿದೆ. ಬಹುತ್ವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಬಹುರೂಪಿಯ ಮೂಲಕ ರಂಗಾಯಣ ಸವೆಸಿರುವ ಹಾದಿ ದೊಡ್ಡದು. ಅಂತಹ ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದಗಳ ಕೇಂದ್ರವಾಗುತ್ತಿದೆ.

ಅಡ್ಡಂಡ ಸಿ.ಕಾರ್ಯಪ್ಪ ಅವರು ಮೈಸೂರು ರಂಗಾಯಣದ ನಿರ್ದೇಶಕರಾದ ಬಳಿಕ ಒಂದಿಲ್ಲೊಂದು ವಿವಾದಗಳಲ್ಲಿ ರಂಗಾಯಣ ಸಿಲುಕುತ್ತಲೇ ಇದ್ದು, ಪ್ರಸಕ್ತ ಬಹುರೂಪಿ ಕಾರ್ಯಕ್ರಮವೂ ಮತ್ತೊಂದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಬಲಪಂಥೀಯ ವಿಚಾರಧಾರೆಯ ಅಡ್ಡಂಡ ಸಿ.ಕಾರ್ಯಪ್ಪ ಅವರು ಅದೇ ವಿಚಾರಧಾರೆಯುಳ್ಳವರನ್ನು ಹೆಚ್ಚಿನ ಸಂಖ್ಯೆಯಲ್ಲಿ ರಂಗಾಯಣಕ್ಕೆ ಕರೆಸಿಕೊಳ್ಳುವುದು ಮತ್ತು ಹೆಚ್ಚಿನ ಅವಕಾಶ ನೀಡುವುದು ಈಗ ಗುಟ್ಟಿನ ವಿಷಯವೇನಲ್ಲ. ಆದರೆ ಸಾರ್ವಜನಿಕ ಜೀವನದಲ್ಲಿ ಸಾಕಷ್ಟು ಸುಳ್ಳುಗಳನ್ನು ಹೇಳುತ್ತಾ, ಸುಳ್ಳು ಸುದ್ದಿಗಳನ್ನು ಹರಡುತ್ತಾ, ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಒಳಗಾಗಿರುವ ಚಕ್ರವರ್ತಿ ಸೂಲಿಬೆಲೆ ಅಂಥವರನ್ನು ಬಹುರೂಪಿ ನಾಟಕೋತ್ಸವ ವಿಚಾರಸಂಕಿರಣದ ಸಮಾರೋಪ ಭಾಷಣಕ್ಕೆ ಕರೆಸುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

‘ತಾಯಿ’ ಎಂಬುದು ಈ ಬಾರಿಯ ಬಹುರೂಪಿಯ ವಿಷಯವಸ್ತುವಾಗಿದೆ. ಪದ್ಮಶ್ರೀ ಪುರಸ್ಕೃತ ತುಳಸೀಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರೆ, ಬಿಜೆಪಿ ನಾಯಕಿ, ನಟಿ ಮಾಳವಿಕಾ ಅವಿನಾಶ್ ಅವರಿಂದ ಉದ್ಘಾಟನಾ ಭಾಷಣ ಮಾಡಿಸಲು ರಂಗಾಯಣ ಹೊರಟಿದೆ. ಉದ್ಘಾಟನೆಗೆ ಒಬ್ಬರು, ಉದ್ಘಾಟನಾ ಭಾಷಣಕ್ಕೆ ಒಬ್ಬರು ಭಾಷಣ ಮಾಡುವುದು ಹೊಸ ಸಂಪ್ರದಾಯ ಎನ್ನಲಾಗುತ್ತಿದೆ. ಆದರೆ ಈ ಕುರಿತು ರಂಗಾಯಣ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಮಾಳವಿಕ ಅವರನ್ನು ವಿಶೇಷ ಅತಿಥಿಯಾಗಿ ಕರೆಸುವ ಚಿಂತನೆ ನಡೆಸಲಾಗುತ್ತಿದೆ. ಆದರೆ ಈಗಾಗಲೇ ವಿಚಾರಸಂಕಿರಣಕ್ಕೆ ಸಂಬಂಧಿಸಿದ ಅತಿಥಿಗಳ ಪಟ್ಟಿ ಸಿದ್ಧವಾಗಿದೆ. ಡಿಸೆಂಬರ್‌ 10ರಿಂದ ಡಿ.19ರವರೆಗೆ ಬಹುರೂಪಿ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಡಿಸೆಂಬರ್‌‌ 11ರಂದು ಜರುಗಲಿದೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಡಿಸೆಂಬರ್‌ 12 ಮತ್ತು 13ರಂದು ಬಹುರೂಪಿ ವಿಚಾರಸಂಕಿರಣ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ. ಹಿರಿಯ ಸಾಹಿತಿ ನಾ.ಡಿಸೋಜ, ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ, ಚೂಡಾರತ್ನಮ್ಮ, ದಕ್ಷಿಣ ಮೂರ್ತಿ, ಕೃಷ್ಣಕುಮಾರ್‌, ಅಭಿರುಚಿ ಚಂದ್ರು, ಭುವನೇಶ್ವರಿ ಹೆಗಡೆ, ಎಚ್.ಎಸ್.ವೆಂಕಟೇಶ್‌ ಮೂರ್ತಿಯವರು ವಿಚಾರಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿ.13ರಂದು ನಡೆಯುವ ಭಾಷಣ ಸ್ಪರ್ಧೆಯ ಬಳಿಕ, ಅಂದು ಸಂಜೆ 4 ಗಂಟೆಗೆ ಬಿಜೆಪಿ ಪ್ರಚಾರಕ ಚಕ್ರವರ್ತಿ ಸೂಲಿಬೆಲೆಯವರು ವಿಚಾರಸಂಕಿರಣದ ಸಮಾರೋಪ ಭಾಷಣ ಮಾಡಲಿದ್ದಾರೆ. ಅಲ್ಲದೆ ಆಮಂತ್ರಣ ಪತ್ರಿಕೆಯಲ್ಲಿ ಚಕ್ರವರ್ತಿ ಸೂಲಿಬೆಲೆಯವರಿಗೆ ‘ಸಮಾಜಸೇವಕ’ ಎಂಬ ವಿಶೇಷಣ ನೀಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಪ್ಪ ಉಡಾಫೆ ಪ್ರತಿಕ್ರಿಯೆ

ಮೈಸೂರಿನಲ್ಲಿ ಬುಧವಾರ ಅಡ್ಡಂಡ ಕಾರ್ಯಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿದ್ದು, ಪತ್ರಕರ್ತರ ಪ್ರಶ್ನೆಗಳಿಗೆ ಸ್ಪಷ್ಟವಾದ ಉತ್ತರಗಳನ್ನು ನೀಡಿಲ್ಲ. ‘ಸಮಾಜ ಸೇವಕ’ ಎಂದು ಆಹ್ವಾನ ಪತ್ರಿಕೆಯಲ್ಲಿ ನಮೂದಿಸಿರುವುದನ್ನು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಅಡ್ಡಂಡ ಕಾರ್ಯಪ್ಪ ಅವರು ಉಡಾಫೆಯಿಂದ ಉತ್ತರಿಸಿದ್ದಾರೆ.

“ಚಕ್ರವರ್ತಿ ಸೂಲಿಬೆಲೆಯವರು ಸಮಾರೋಪ ಭಾಷಣಕ್ಕೆ ಸೂಕ್ತವ್ಯಕ್ತಿ ಎನಿಸಿದ್ದರಿಂದ ನಾವು ಕರೆದಿದ್ದೇವೆ. ಚಕ್ರವರ್ತಿ ಸೂಲಿಬೆಲೆಯವರ ವಿಚಾರವನ್ನು ಬಿಟ್ಟುಬಿಡಿ. ಅವರನ್ನು ಕರೆದಿದ್ದೇವೆ. ಬರ್ತಾರೆ, ಸಮಾರೋಪ ಭಾಷಣ ಮಾಡ್ತಾರೆ. ಆ ಭಾಷಣದಲ್ಲಿ ದೋಷಗಳನ್ನು ಕಂಡು ಹಿಡಿದು ಅದನ್ನು ಪ್ರಕಟಿಸಿ, ಅದು ನಿಮ್ಮ ಸ್ವಾತಂತ್ರ್ಯ” ಎಂದು ಪತ್ರತರ್ಕರಿಗೆ ಬೋಧನೆ ಮಾಡಿದ್ದಾರೆ.

“ಜನರಿಗೆ ಇವರಿಂದ ಏನು ಸಂದೇಶ ಕೊಡುತ್ತೀರಿ?” ಎಂದು ಕೇಳಿದರೆ, “ಯುವಕರಿಗೆ ಸಂದೇಶವನ್ನು ಕೊಡುತ್ತೀವಿ” ಎಂದಿದ್ದಾರೆ. “ನಾವು ಚರ್ಚೆ ಮಾಡಿ ಒಂದಿಷ್ಟು ಜನರನ್ನು ಕರೆದಿದ್ದೇವೆ” ಎಂದು ಕಾರ್ಯಪ್ಪ ಪ್ರತಿಕ್ರಿಯೆ ನೀಡುತ್ತಾರೆ. “ಚಕ್ರವರ್ತಿ ಸೂಲಿಬೆಲೆಯವರು ರೈತರ ಬಗ್ಗೆ, ರಂಗಭೂಮಿ ಬಗ್ಗೆ ಯಾವತ್ತೂ ಮಾತನಾಡಲ್ಲ. ಯಾರೋ ಒಬ್ಬರನ್ನು ಒಲೈಸುತ್ತಾರೆ” ಎಂದು ಪತ್ರಕರ್ತರು ಕೇಳಿದರೆ, “ಮಾಧ್ಯಮದ ಕೆಲವರಿಗೆ ಹಾಗೆ ಅನ್ನಿಸಿರಬಹುದು, ಎಲ್ಲರಿಗೂ ಅಲ್ಲ” ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.


ಇದನ್ನೂ ಓದಿರಿ: ಮಾಂಸಾಹಾರದ ಮೇಲಿನ ಕೀಳರಿಮೆ ತೊಲಗಬೇಕಿದೆ: ಚಿತ್ರಸಾಹಿತಿ ಕವಿರಾಜ್‌ ಬರಹಕ್ಕೆ ಮಿಡಿದ ಕನ್ನಡಿಗರು


ಅಡ್ಡಂಡ ಕಾರ್ಯಪ್ಪ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿದಾಗಲೂ ಹೀಗೆಯೇ ಉಡಾಫೆ ಉತ್ತರಗಳನ್ನೇ ನೀಡಿದರು. “ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಹೇಳುತ್ತಾ ಬಂದಿದ್ದಾರೆ. ಅವರನ್ನು ಕರೆಸುವುದು ಎಷ್ಟು ಸರಿ? ಸಂಘಪರಿವಾರದ ವಿಚಾರಧಾರೆಗಳ ವ್ಯಕ್ತಿಗಳಾದರೂ ಎಲ್ಲ ಜನವರ್ಗವನ್ನು ಗೌರವಿಸುವ ಬಲಪಂಥೀಯರನ್ನು ಕರೆಸಬಹುದಲ್ಲ?” ಎಂದು ಕೇಳಿದೆವು. ನಮ್ಮ ಮಾಧ್ಯಮದ ಕುರಿತು ಲಘುವಾಗಿ ಮಾತನಾಡುತ್ತಲೇ ಉತ್ತರಿಸಿದ ಅವರು, “ನಿಮಗೆ ಅವರು ಸುಳ್ಳು ಹೇಳಿದ್ದಾರೆಂದು ಅನಿಸಬಹುದು. ಆದರೆ ನಮಗೆ ಅವರು ಸತ್ಯಗಳನ್ನು ಹೇಳುತ್ತಿದ್ದಾರೆ ಅನಿಸುತ್ತದೆ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದರು.

“ಬಹುರೂಪಿಯು ಬಹುತ್ವವನ್ನು ಪ್ರತಿನಿಧಿಸುವ ಒಂದು ಕಾರ್ಯಕ್ರಮ. ಬಹುತ್ವದ ಬಗ್ಗೆ ನಂಬಿಕೆ ಇರದವರನ್ನು ವೇದಿಕೆಗೆ ಕರೆಸುವುದು ಎಷ್ಟು ಸರಿ?” ಎಂದು ಕೇಳಿದರೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ” ಎಂದ ಅವರು ಬಹುತ್ವದ ವಿಷಯವನ್ನೇ ನಿರಾಕರಿಸಿದರು.

“ಸ್ವತಃ ಚಕ್ರವರ್ತಿ ಸೂಲಿಬೆಲೆಯವರೇ ತಾವು ಹೇಳಿರುವ ಮಾತುಗಳನ್ನು ಸತ್ಯವೆಂದು ಸಾಬೀತು ಮಾಡಲು ಸಾಧ್ಯವಾಗದಿರುವಾಗ, ನೀವು ಹೇಗೆ ಅವರು ಹೇಳುತ್ತಿರುವುದು ಸತ್ಯ ಎಂದು ಸಾಬೀತು ಮಾಡುತ್ತೀರಿ?” ಎಂದು ಕೇಳಿದೆವು. “ನಾನು ಅಷ್ಟು ಆಳಕ್ಕೆ ಇಳಿದಿಲ್ಲರ್‍ರೀ, ನೀವು ಆಳಕ್ಕೆ ಇಳಿದು ಏಕಮುಖ ವಿಚಾರಗಳನ್ನು ಬಿತ್ತುವ ಜನ್ಮದಲ್ಲಿ ಹುಟ್ಟಿದ್ದೀರಿ, ವಿವಾದ ಮಾಡಿಕೊಳ್ಳಿ” ಎಂದು ಹೇಳುತ್ತಾ ಮಾತುಮುಗಿಸಿದರು.


ಇದನ್ನೂ ಓದಿರಿ: ಹೋರಾಟಗಾರ್ತಿ ‘ಸುಧಾ ಭಾರದ್ವಾಜ್‌’ ಅವರಿಗೆ ಜಾಮೀನು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...