Homeಮುಖಪುಟಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

- Advertisement -
- Advertisement -

ಬಲಪಂಥೀಯ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಘೋಷಣೆ ಕೂಗುತ್ತಾ ಯುವಕರಿಗೆ ದೊಣ್ಣೆಯಂತಹ ಆಯುಧವನ್ನು ಪರಸ್ಪರ ಹಂಚಿಕೊಳ್ಳುವ ತರಬೇತಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಚಕ್ರವರ್ತಿ ಸೂಲಿಬೆಲೆ ಕೈಯಿಂದ ಕೈಗೆ ಆಯುಧವನ್ನು ಹಸ್ತಾಂತರಿಸುವ ಯುವಕರಿಗೆ ಜೈ ಶಿವಾಜಿ, ಜೈ ಭವಾನಿ, ಭಾರತ್ ಮಾತಾಕೀ ಜೈ, ವಂದೇ ಮಾತರಂ, ಇಂಕ್ವಿಲಾಬ್ ಜಿಂದಾಬಾದ್ ಎಂದು ಘೋಷಣೆ ಕೂಗುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸಾಮಾಜಿಕ ಜಾಲತಾಣಗಳಲ್ಲಿ ದ್ವೇ‍ಷ ಹರಡುವುದನ್ನು ತಡೆಯುವುದಕ್ಕಾಗಿ ಕೆಲಸ ಮಾಡುತ್ತಿರುವ ಹೇಟ್ ಡಿಡೆಕ್ಟರ್ ಎಂಬ ಖಾತೆಯು ಆ ವಿಡಿಯೋವನ್ನು ಪೋಸ್ಟ್ ಮಾಡಿ “ಗೃಹ ಮಂತ್ರಿ ಆರಗ ಜ್ಞಾನೇಂದ್ರರವರೆ ಮತ್ತು ಕರ್ನಾಟಕದ ಡಿಜಿಪಿಗಳೇ, ಖಾಸಗಿ ಸೇನೆ ಕಟ್ಟು ತರಬೇತಿ ನೀಡುತ್ತಿರುವ ಚಕ್ರವರ್ತಿ ಸೂಲಿಬೆಲೆಯನ್ನು ಬಂಧಿಸಿ ಸೂಕ್ರ ಕ್ರಮ ಕೈಗೊಳ್ಳಿ” ಎಂದು ಒತ್ತಾಯಿಸಿದೆ.

ಈ ರೀತಿ ಖಾಸಗಿ ಸೇನೆ ಕಟ್ಟಿ ಆಯುಧ ತರಬೇತಿ ನೀಡುವವರನ್ನು ಎನ್‌ಎಸ್‌ಎ ಮತ್ತು ಯುಎಪಿಎ ಕಾಯ್ದೆಯಡಿ ಬಂಧಿಸಿ ಎಂದು ಟ್ವಿಟರ್‌ನಲ್ಲಿ ಆಗ್ರಹಿಸಿಲಾಗಿದೆ.

“ನೆನ್ನೆ ಕನ್ನಡತಿ ಮಲ್ಲಮ್ಮಳ ಹುಟ್ಟುಹಬ್ಬಕ್ಕೆ ಒಂದು ಶುಭಾಶಯ ಹೇಳೋಕೆ ಆಗ್ಲಿಲ್ಲ. ನೆರೆಪರಿಹಾರ,ರೈತರ ಸಮಸ್ಯೆಗಳು,ಯುವಕರಿಗೆ ಉದ್ಯೋಗ,ಆರೋಗ್ಯ ಶಿಕ್ಷಣ,ಜಿಎಸ್ಟಿ ವಾಪಸ್ ಇವುಗಳ ಬಗ್ಗೆ ಮಾತಡದ ಸೂಲಿಬೆಲೆಯವರು ಕನ್ನಡದ ಯುವಕರ ಕೈಗೆ ದೊಣ್ಣೆ ಕೊಟ್ಟು ಕರ್ನಾಟಕನಾ ಏನು ಮಾಡೋಕೆ ಹೊರಟಿದ್ದೀರ ರೀ. ದೊಣ್ಣೆ ಕೊಟ್ಟು ಕರ್ನಾಟಕ ಕಟ್ಟುವೀರಾ?” ಎಂದು ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಪ್ರಶ್ನಿಸಿದ್ದಾರೆ.

ಒಂದು ಸಮುದಾಯವನ್ನು ಭಯೋತ್ಪಾದಕರೆಂದು ಚಿತ್ರೀಕರಿಸುತ್ತಾ ನಕಲಿ ದೇಶಪ್ರೇಮದ ನಾಟಕವಾಡಿ ಅಮಾಯಕ ಯುವಕರ ಕೈಗೆ ಬಂದೂಕು ಕೊಟ್ಟು ಚೆಲ್ಲಾಟವಾಡುತ್ತಿರುವ ಚಕ್ರವರ್ತಿ ಸೂಲಿಬೆಲೆ ಅನ್ನುವ ಗೂಂಡಾ ಮೇಲೆ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿ ಯಾಕೆ ಜೈಲಿಗೆ ಅಟ್ಟಬಾರದು? ಎಂದು ಅಶ್ರಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಮರಾಠಿ ರಾಜನ ಗುಣಗಾನ ಮಾಡುತ್ತ ಆಯುಧ ಪ್ರದರ್ಶನೇ ಮಾಡ್ತಾ ಇದಾನೆ ಈ ದ್ರೋಹಿ. ಕಿತ್ತೂರು ಚೆನ್ನಮ್ಮ, ಬೆಳವಾಡಿ ಮಲ್ಲಮ್ಮ, ರಾಯಣ್ಣ , ಮದಕರಿನಾಯಕ, ಪುಲಿಕೇಶೀ, ಶ್ರೀಕೃಷ್ಣದೇವರಾಯ, ಮೈಸೂರು ಅರಸರು ಇನ್ನು ಹಲವರಿಗೆ ಮಾಡುತ್ತಿರುವ ದ್ರೋಹ ಇದು ಈ ನಾಡ ದ್ರೋಹಿಯ ಬಂಧನ ಆಗಲೇಬೇಕು ಎಂದು ಚೇತನ್ ಕೃಷ್ಣರವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಕಳ್ಳತನದ ಆರೋಪ: ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಲ್ಲೆ, ತಲೆ ಬೋಳಿಸಿ ಅವಮಾನಿಸಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾನೂ ಕನ್ನಡಿಗನೆ ಆದರೆ ಇವರಂತೆ ನಕಲಿ ಕನ್ನಡಿಗನಲ್ಲ, ಕರ್ನಾಟಕ ದ ಇತಿಹಾಸ ಸರಿಯಾಗಿ ಓದಲಿ, ಇವರಿಗೆ ಕನ್ನಡ ದ ಹೆಸರಿನಲ್ಲಿ ಸೂಲಿಬೆಲೆಯವರ ಮೇಲೆ ಆರೋಪ ಹೊರಿಸಲು ಯಾವುದೇ ಅಧಿಕಾರವಿಲ್ಲ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...