ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಮಹಾಭಾರತ, ಭಗವದ್ಗೀತೆ ಎನ್ನುವ ಅವರು, ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎನ್ನುವುದು ಇಡೀ ಕರ್ನಾಟಕದ ಜನತೆಗೆ ಗೊತ್ತು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಕುಂದಾಪುರದಲ್ಲಿ ಹಮ್ಮಿಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮದ ಆಯೋಜಕರಿಗೆ ಪೊಲೀಸರು ನೋಟಿಸ್‌ ನೀಡಿರುವ ಕುರಿತು ಉಡುಪಿಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, “ಚಕ್ರವರ್ತಿ ಸೂಲಿಬೆಲೆ ಕಪ್ಪಿಗಿರೋದನ್ನು ಬೆಳ್ಳಗೆ ಮಾಡೋದರಲ್ಲಿ, ಬೆಳ್ಳಗಿರುವುದನ್ನು ಕಪ್ಪಗೆ ಮಾಡೋದರಲ್ಲಿ ಬಹಳಷ್ಟು ನಿಸ್ಸೀಮರು” ಎಂದು ವಾಗ್ದಾಳಿ ನಡೆಸಿದ್ದಾರೆ. ವಾಕ್‌ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ … Continue reading ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್