Homeಕರ್ನಾಟಕಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

ಚಳ್ಳಕೆರೆ: ಪೊಲೀಸ್ ವ್ಯವಸ್ಥೆಯಿಂದ ನೊಂದು ನವ ವಿವಾಹಿತೆ ಸಾವಿಗೆ ಶರಣು

- Advertisement -
- Advertisement -

ಪೊಲೀಸ್‌ ವ್ಯವಸ್ಥೆಯಿಂದ ನೊಂದು ನವವಿವಾಹಿತೆ ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ಯುವತಿ ಮನನೊಂದಿದ್ದರು ಎಂದು ವರದಿಯಾಗಿದೆ.

ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯ ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ನೇಣು ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ.

ಜಮೀನಿನ ಅಕ್ಕಪಕ್ಕದಲ್ಲಿನ ಹುಣಸೆ ಮರದ ಜಗಳ ಠಾಣೆ ಮೆಟ್ಟಿಲೇರಿ ರಾಜೀಸಂಧಾನ ವಿಫಲವಾಗಿತ್ತು. ಈ ಪ್ರಕರಣದಲ್ಲಿ ಉಷಾ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ತನಗೆ ದೊರಲಿದ್ದ ಸರ್ಕಾರಿ ಕೆಲಸ ಈ ಪ್ರಕರಣದ ಕಾರಣಕ್ಕಾಗಿ ಸಿಗುತ್ತಿಲ್ಲ ಎಂದು ಉಷಾ ಬೇಸತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿ.ಎಸ್ಸಿ ಮುಗಿಸಿ ಬಿ.ಇಡಿ ವ್ಯಾಸಂಗ ಮಾಡುತ್ತಿದ್ದ ಉಷಾ, ಕೊಂಡ್ಲಹಳ್ಳಿ ಗ್ರಾಮದ ಸೋದರ ಮಾವ ಗಣೇಶ ಅವರ ಜೊತೆಗೆ ಕಳೆದ ಏಪ್ರಿಲ್‌ 25ರಂದು ವಿವಾಹವಾಗಿದ್ದರು. ವಿವಾಹನ ನಂತರ ವ್ಯಾಸಂಗ ಮೊಟಕುಗೊಳಿಸಿದ್ದರು. ಹತ್ತನೇ ತರಗತಿ ವ್ಯಾಸಂಗದ ಮೇಲೆ ಕೋರ್ಟ್‌ನಲ್ಲಿ ಪ್ರೋಸೆಸ್‌ ಸರ್ವರ್‌ ಹುದ್ದೆಗೆ ಅರ್ಜಿ ಹಾಕಿದ್ದರು. ಅದು ಪೊಲೀಸ್ ಠಾಣೆಯಲ್ಲಿ ವೆರಿಫಿಕೇಷನ್‌ ಆಗಿತ್ತು.

ಜಮೀನಿನ ಬೇಲಿ ಪಕ್ಕದಲ್ಲಿರುವ ಹುಣಸೇಹಣ್ಣು ಮರದಲ್ಲಿ ಹುಣಸೇಹಣ್ಣು ಬಡಿಯುವ ವಿಚಾರಕ್ಕೆ ಫೆ.13ರಂದು ಗಲಾಟೆಯಾಗಿತ್ತು. ಕಾಮಸಂದ್ರ ನಾಗರಾಜ, ಜಯಮ್ಮ ಹಾಗೂ ಅವರ ಮಕ್ಕಳಾದ ಪುನೀತ್ ನಡುವೆ ಗಲಾಟೆಯಾಗಿತ್ತು. ಎರಡು ಕುಟುಂಬಗಳು ಸಹ ಪರಶುರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದವು. ಅದರಲ್ಲಿ ಮೃತ ಉಷಾಳ ಹೆಸರು ಕೂಡ ಇತ್ತು.

“ತನ್ನ ಮಗಳಿಗೆ ಸರಕಾರಿ ಉದ್ಯೋಗ ದೊರೆಯುತ್ತದೆ. ಏನಾದರೂ ಮಾಡಿ ಅವಳ ಹೆಸರನ್ನು ಪೊಲೀಸ್ ಪ್ರಕರಣದಿಂದ ತೆಗೆಸಿ” ಎಂದು ತಾಯಿ ಅಂಗಲಾಚಿದ್ದರು. “ಸರಕಾರಿ ಕೆಲಸವಲ್ಲ, ಅವಳು ಸತ್ತರೂ ನಾವು ರಾಜೀ ಆಗುವುದಿಲ್ಲ” ಎಂದು ಉಡಾಫೆ ಉತ್ತರ ನೀಡಲಾಗಿತ್ತು. ಇದರಿಂದ ಬೇಸತ್ತ ಉಷಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ನೇಣು ಬಿಗಿದುಕೊಂಡಿದ್ದಾರೆ.

“ಜಾಬ್‌ಗೋಸ್ಕರವಾಗಿ ಸಾಯುತ್ತಿದ್ದೇನೆ. ನನ್ನ ಸಾವಿಗೆ ನನ್ನ ಕುಟುಂಬ ಕಾರಣವಲ್ಲ. ಸಮಾಜದ ಅವ್ಯವಸ್ಥೆಯೇ ಕಾರಣ” ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

“ಪೊಲೀಸರ ವರ್ತನೆಯಿಂದ ನೊಂದು ಉಷಾ ಜೀವ ಕಳೆದುಕೊಂಡಿದ್ದಾಳೆ” ಎಂದು ಉಷಾ ಅವರ ಭಾವ ಹೇಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

“ಅಮಾಯಕ ವಿದ್ಯಾವಂತ ಹೆಣ್ಣುಮಗಳನ್ನು ಪ್ರಕರಣದಲ್ಲಿ ಸೇರಿಸುವ ಮುನ್ನ ಗ್ರಾಮದಲ್ಲಿ ವಿಚಾರಣೆ ಮಾಡಬೇಕಿತ್ತು. ಪೊಲೀಸರ ಬೇಜವಾಬ್ದಾರಿಯಿಂದ ಈ ಘಟನೆ ಜರುಗಿದೆ. ಪೊಲೀಸ್ ಇಲಾಖೆ ಹಾಗೂ ದೂರು ಕೊಟ್ಟವರು ಸಾವಿಗೆ ಕಾರಣ” ಎಂದು ದೂರಿದ್ದಾರೆ.

May be an image of text
ಉಷಾ ಬರೆದಿಟ್ಟಿರುವ ಡೆತ್‌ನೋಟ್‌

ಪಾಠ ಮಾಡಿದ ಶಿಕ್ಷಕರ ಸಂತಾಪ

ನೆಚ್ಚಿನ ಶಿಷ್ಯೆ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಫೇಸ್‌ಬುಕ್‌ ಫೋಸ್ಟ್‌ ಹಾಕಿರುವ ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ, “ಮೊನ್ನೆ ಸಂಜೆ ಈ ಘಟನೆ ಕೇಳಿದಾಗಿನಿಂದ ಮನಸ್ಸು ಬಹಳ ಘಾಸಿಗೊಂಡಿತ್ತು. ಉಷಾ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿ. ಪ್ರತಿಭಾವಂತೆ, ಗುಣವಂತೆ. ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಎರಡನೇ ಟಾಪರ್. ಕನಸುಗಾರ್ತಿ” ಎಂದು ಸ್ಮರಿಸಿದ್ದಾರೆ.

“ಬಡತನದಲ್ಲಿ ಬೆಳೆದಿದ್ದ, ಮೂರು ತಂಗಿಯರು ಒಬ್ಬ ತಮ್ಮನನ್ನು ಹೊಂದಿದ್ದ ಮನೆಯ ಹಿರಿಮಗಳು ಉಷಾ. ಮನೆ ತೊರೆದು ನಡುದಾರಿಯಲ್ಲಿ ಕೈಬಿಟ್ಟ ಹೋದ ಗಂಡನ ಅನುಪಸ್ಥಿತಿಯಲ್ಲಿ ಉಷಾ ಅವರ ತಾಯಿ ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿದ್ದರು. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ ಹೊತ್ತಿದ್ದ ಉಷಾಳನ್ನು ನಮ್ಮ ಭ್ರಷ್ಟ ವ್ಯವಸ್ಥೆ ಬಲಿ ಪಡೆದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯವಸ್ಥೆ ಇರೋದೆ ಹಾಗೆ. ಅದನ್ನು ಪ್ರತಿರೋಧಿಸಿ ಗೆಲ್ಲಬೇಕು ಎಂದು ಸಾವಿರ ಸಲ ಪಾಠ ಮಾಡುವಾಗ ಮಕ್ಕಳಿಗೆ ಹೇಳಿದ್ದೇನೆ. ಆದರೆ ಈ ಹುಡುಗಿ ವ್ಯವಸ್ಥೆಯ ಎದುರು ಸೋಲು ಒಪ್ಪಿಕೊಂಡು ತನ್ನ ಜೀವನಕ್ಕೆ ಅಂತ್ಯ ಹಾಡಿದ್ದಾಳೆ. ಈ ಘಟನೆಯಿಂದ ಮಕ್ಕಳಿಗೆ ಆದರ್ಶಗಳ ಕುರಿತು ಅತಿಯಾಗಿ ಹೇಳಬಾರದೇನೋ ಅನಿಸಿಬಿಟ್ಟಿದೆ” ಎಂದು ವಿಷಾದಿಸಿದ್ದಾರೆ.

“ಇವತ್ತಲ್ಲ ನಾಳೆ ನೌಕರಿ ಸಿಕ್ಕೇ ಸಿಗುತ್ತಿತ್ತು. ಆ ಅರ್ಹತೆ ಅವಳಿಗೆ ಖಂಡಿತ ಇತ್ತು. ಆದರೆ ಜನರ ಸ್ವಾರ್ಥ, ದುರಾಸೆ, ದ್ವೇಷ, ಭ್ರಷ್ಟ ಮನಸ್ಸನ್ನು ನೋಡಲಾಗದೇ ಉಷಾ ಡೆತ್ ನೋಟ್ ಬರೆದಿಟ್ಟು ಉಸಿರು ಚೆಲ್ಲಿದ್ದಾಳೆ. ಇವಳಿಗೆ ಪಾಠ ಮಾಡಿದ ನಾವೆಲ್ಲ ಶಿಕ್ಷಕರು ಸುದ್ದಿ ಕೇಳಿ ಇಡೀ ದಿನ ಕಂಗಾಲಾದೆವು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...