ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಮಗೆ ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಮನವಿಯ ಬಗ್ಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಕೇಳಿದೆ. ಅದಾಗ್ಯೂ, ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ಅವರು ಕೇಜ್ರಿವಾಲ್ ಅವರ ವಿರುದ್ಧ ದಾಖಲಾಗಿದರುವ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪ್ರಕರಣದಲ್ಲಿ ಇಡಿ ಸಲ್ಲಿಸಿದ ದೂರಿನ ಮೇರೆಗೆ ಕೇಜ್ರಿವಾಲ್ ಅವರಿಗೆ ನೀಡಲಾದ ಸಮನ್ಸ್ ಅನ್ನು ಪ್ರಶ್ನಿಸಿದ ಅರ್ಜಿಯ ಆಧಾರದಲ್ಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನೋಟಿಸ್ ಜಾರಿ ಮಾಡಿದೆ. ಒಬ್ಬ ಅಧಿಕಾರಿಯಿಂದ ಸಮನ್ಸ್ ಜಾರಿಗೊಳಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಯಿಂದ ದೂರು ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಕೇಜ್ರಿವಾಲ್ ಪರ ವಕೀಲರು ಈ ದೂರಿನ ನಿರ್ವಹಣೆಯ ಬಗ್ಗೆ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.
ಸಮನ್ಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ಸೆಪ್ಟೆಂಬರ್ 17ರ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆಯ ಸಂದರ್ಭ, ಇಡಿ ಪರವಾಗಿ ಹಾಜರಾದ ವಕೀಲರು ಅರ್ಜಿಯ ನಿರ್ವಹಣೆಯ ಬಗ್ಗೆ ಪ್ರಾಥಮಿಕ ಆಕ್ಷೇಪಣೆಯನ್ನು ಎತ್ತಿದ್ದಾರೆ.
ಕೇಜ್ರಿವಾಲ್ ಅವರ ಮನವಿಯು ಎರಡನೇ ಪರಿಷ್ಕರಣೆ ಅರ್ಜಿಯಾಗಿದ್ದು, ಇದನ್ನು ಸಿಆರ್‌ಪಿಸಿಯ ಸೆಕ್ಷನ್ 482 ರ ಅಡಿಯಲ್ಲಿ ಸಲ್ಲಿಸಲಾಗಿದೆ. ಅದನ್ನು ಕಾನೂನಿನಲ್ಲಿ ನಿರ್ಬಂಧಿಸಲಾಗಿದೆ ಎಂದು ಅವರು ವಾದಿಸಿದ್ದಾರೆ. ಈ ಅರ್ಜಿಯಲ್ಲಿ ಮಾಡಲಾಗಿರುವ ಆಧಾರಗಳು ವಿಚಾರಣಾ ನ್ಯಾಯಾಲಯದ ಮುಂದೆ ಸಲ್ಲಿಸಲಾದ ಆಧಾರಗಳಿಗೆ ಸಮಾನವಾಗಿವೆ ಎಂದು ಅವರು ವಾದಿಸಿದ್ದಾರೆ.
ಆದರೆ, ಸಹಾಯಕ ನಿರ್ದೇಶಕ ಶ್ರೇಣಿಯ ಇಡಿ ಅಧಿಕಾರಿಯೊಬ್ಬರು ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದ್ದಾರೆ. ಆದರೆ ಅದೇ ಶ್ರೇಣಿಯ ಇನ್ನೊಬ್ಬ ಇಡಿ ಅಧಿಕಾರಿಯಿಂದ ದೂರನ್ನು ದಾಖಲಿಸಿದ್ದಾರೆ. ನಿಯಮಗಳ ಪ್ರಕಾರ ಹೀಗೆ ಮಾಡುವಂತಿಲ್ಲ ಎಂದು ಕೇಜ್ರಿವಾಲ್ ಅವರ ವಕೀಲರು ವಾದಿಸಿದ್ದಾರೆ. ಸಮನ್ಸ್‌ಗೆ ಸಹಿ ಮಾಡಿದ ಅಧಿಕಾರಿ ಲಭ್ಯವಿದ್ದರೂ ಇನ್ನೊಬ್ಬ ಅಧಿಕಾರಿಯಿಂದ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ವಕೀಲರು ಹೇಳಿದ್ದಾರೆ. ಹೈಕೋರ್ಟ್ ಡಿಸೆಂಬರ್ 19 ರಂದು ಮುಂದಿನ ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಿದೆ.
ಇದನ್ನೂ ಓದಿ: ರಾಜ್ಯದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! – ವರದಿ


