Homeಮುಖಪುಟಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು 'ಜಾತ್ಯತೀತತೆ' ಸಂವಿಧಾನದ ಮೂಲ ರಚನೆ ಎಂದಿದೆ:...

ಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು ‘ಜಾತ್ಯತೀತತೆ’ ಸಂವಿಧಾನದ ಮೂಲ ರಚನೆ ಎಂದಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದ ಸಂವಿಧಾನದ ಪೀಠಿಕೆಯಿಂದ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ತೆಗೆದು ಹಾಕುವಂತೆ ಕೋರಿ ರಾಜ್ಯಸಭೆಯ ಮಾಜಿ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಜುಲೈ 10 ) ಆಗಸ್ಟ್‌ಗೆ ಮುಂದೂಡಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, “ಈ ನ್ಯಾಯಾಲಯದ ಹಲವಾರು ತೀರ್ಪುಗಳು ‘ಜಾತ್ಯತೀತ’ ಎಂಬ ಪದ ನಮ್ಮ ಸಂವಿಧಾನದ ಮೂಲ ರಚನೆ ಎಂಬುವುದಾಗಿ ಹೇಳಿದೆ” ಎಂದಿದ್ದಾರೆ.

ಒಂದೇ ವಿಷಯದ ಕುರಿತು ಮೂರು ಅರ್ಜಿಗಳು ಸಲ್ಲಿಕೆಯಾಗಿವೆ. ಹಾಗಾಗಿ, ಅರ್ಜಿದಾರರ ವಕೀಲರೊಬ್ಬರು  ಮಾಡಿದ ಮನವಿಯನ್ನು ಪರಿಗಣಿಸಿ, ಆಗಸ್ಟ್ 12 ರಿಂದ ವಿಷಯವನ್ನು ವಿಚಾರಣೆಗೆ ಮರು ಪಟ್ಟಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ಸಂವಿಧಾನದ ಪೀಠಿಕೆ ಅಂಗೀಕರಿಸಿದ ನವೆಂಬರ್ 26, 1949ರ ದಿನಾಂಕವನ್ನು ಬದಲಾಯಿಸದೆ ತಿದ್ದುಪಡಿ ಮಾಡಬಹುದೇ? ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಕೇಳಿತ್ತು.

ಸುಬ್ರಮಣಿಯನ್ ಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿದ್ದ ದ್ವಿಸದಸ್ಯ ಪೀಠ ಈ ಪ್ರಶ್ನೆ ಎತ್ತಿತ್ತು.

ಪ್ರಸ್ತುತ ಅರ್ಜಿಯು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಅಧಿಕಾರವದಿಯಲ್ಲಿ ಸಂವಿಧಾನದ ಪೀಠಿಕೆಗೆ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಲು ಅನುವು ಮಾಡಿಕೊಟ್ಟ 1976ರ 42ನೇ ಸಂವಿಧಾನದ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿದೆ. ಹೊಸ ಪದಗಳ ಅಳವಡಿಕೆ 368ನೇ ವಿಧಿಯ ಅಡಿಯಲ್ಲಿ ಸಂಸತ್ತಿನ ತಿದ್ದುಪಡಿ ಅಧಿಕಾರವನ್ನು ಮೀರಿದೆ ಎಂದು ವಾದಿಸಿದೆ.

ಸಂವಿಧಾನದ ರಚನಾಕಾರರು ಪ್ರಜಾಪ್ರಭುತ್ವದ ಆಡಳಿತದಲ್ಲಿ ಸಮಾಜವಾದಿ ಅಥವಾ ಜಾತ್ಯತೀತ ಪರಿಕಲ್ಪನೆಗಳನ್ನು ಪರಿಚಯಿಸಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಸಂವಿಧಾನವು ನಾಗರಿಕರ ಆಯ್ಕೆಯ ಹಕ್ಕನ್ನು ಕಸಿದುಕೊಳ್ಳುವ ಮೂಲಕ ರಾಜಕೀಯ ಸಿದ್ಧಾಂತಗಳನ್ನು ಅವರ ಮೇಲೆ ಹೇರಲು ಸಾಧ್ಯವಿಲ್ಲದ ಕಾರಣ ಡಾ.ಬಿಆರ್‌ ಅಂಬೇಡ್ಕರ್ ಈ ಪದಗಳು ಅಳವಡಿಸುವುದನ್ನು ವಿರೋಧಿಸಿದ್ದರು ಎಂದಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸಂಸದ ಬಿನೋಯ್ ವಿಶ್ವಂ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ದಾರೆ. ಅರ್ಜಿಯನ್ನು ವಿರೋಧಿಸಿ, “ಜಾತ್ಯತೀತತೆ ಮತ್ತು ಸಮಾಜವಾದವು” ಭಾರತೀಯ ಸಂವಿಧಾನದ ಅಂತರ್ಗತ ವಿಷಯಗಳಾಗಿವೆ. ಆದ್ದರಿಂದ, ಪೀಠಿಕೆಯಲ್ಲಿ ಈ ಪದಗಳ ಸೇರ್ಪಡೆಯಿಂದ ಸಂವಿಧಾನದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವುದಿಲ್ಲ ಎಂದಿದ್ದಾರೆ.

ಸಂವಿಧಾನದ ಪೀಠಿಕೆಯನ್ನು ಡಿಸೆಂಬರ್ 1976ರಲ್ಲಿ ಇಂದಿರಾ ಗಾಂಧಿ ಸರ್ಕಾರವು ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ಸೇರಿಸಲು ತಿದ್ದುಪಡಿ ಮಾಡಿತ್ತು. ‘ರಾಷ್ಟ್ರದ ಏಕತೆ’ ಎಂಬ ಪದಗುಚ್ಛವನ್ನು ‘ರಾಷ್ಟ್ರದ ಏಕತೆ ಮತ್ತು ಸಮಗ್ರತೆ’ ಎಂದು ಬದಲಾಯಿಸಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 42ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂಬುವುದು ಅರ್ಜಿದಾರರ ವಾದವಾಗಿದೆ.

ಮೂಲ ಪೀಠಿಕೆಯಲ್ಲಿ ಭಾರತವನ್ನು ‘ಸಾರ್ವಭೌಮ, ಪ್ರಜಾಪ್ರಭುತ್ವ ಗಣರಾಜ್ಯ’ ಎಂದು ಉಲ್ಲೇಖಿಸಲಾಗಿತ್ತು. ‘ಸಾರ್ವಭೌಮ’ ಮತ್ತು ‘ಪ್ರಜಾಪ್ರಭುತ್ವ’ದ ನಡುವೆ ‘ಸಮಾಜವಾದಿ’, ‘ಜಾತ್ಯತೀತ’ ಎಂಬ ಪದಗಳನ್ನು ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಸುಪ್ರೀಂ ಕೋರ್ಟ್ ‘1976ರಲ್ಲಿ ಸಂವಿಧಾನಕ್ಕೆ ತಂದ 42ನೇ ತಿದ್ದುಪಡಿ ಮೂಲಕ ಪೀಠಿಕೆಯನ್ನು ತಿದ್ದುಪಡಿ ಮಾಡಿ, ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಈ ತಿದ್ದುಪಡಿಯನ್ನು ಅಳವಡಿಸಿಕೊಂಡ ದಿನಾಂಕವನ್ನು 1949ರ ನವೆಂಬರ್‌ 29 ಎಂಬುದಾಗಿಯೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ, ಈ ವಿಷಯವನ್ನು ತಾರ್ಕಿಕ ದೃಷ್ಟಿಕೋನದಿಂದ ಅವಲೋಕಿಸುವುದು ಅಗತ್ಯ’ ಎಂದು ಹೇಳಿತ್ತು.

ಇದನ್ನೂ ಓದಿ : ಮುಸ್ಲಿಂ ಮಹಿಳೆ ವಿಚ್ಛೇದಿತ ಗಂಡನಿಂದ ಜೀವನಾಂಶ ಪಡೆಯಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...