Homeಕರ್ನಾಟಕಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾದ ನಟ ದರ್ಶನ್

- Advertisement -
- Advertisement -

ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಯಾವುದೇ ಸಂಭಾವನೆ ತೆಗೆದುಕೊಳ್ಳದೆ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ನಡೆದ “ಕೃಷಿ ಕಾಯಕದ ರಾಯಭಾರಿ”  ಕಾರ್ಯಕ್ರಮದಲ್ಲಿ ರಾಯಭಾರಿಯಾಗಿ ಆಹ್ವಾನ ಸ್ವೀಕರಿಸಿದ್ದಾರೆ.

“ಚಿತ್ರರಂಗದಲ್ಲಿ‌ ಎತ್ತರಕ್ಕೆ ಬೆಳೆದಿರುವ ಚಿತ್ರ ನಟ ದರ್ಶನ್ ನಟನೆಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ. ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ‌. ರೈತರ ಪರವಾಗಿ ದರ್ಶನ್‌ಗೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

“ಇದು ಕೃಷಿ ಇಲಾಖೆಯ ಅಭೂತಪೂರ್ವ ಕಾರ್ಯಕ್ರಮ. ಚಾಲೆಂಜಿಂಗ್ ಸ್ಟಾರ್ ಚಿತ್ರರಂಗದಲ್ಲಿ ನಟನೆಯ ಜೊತೆಗೆ ಕೃಷಿ ಪಶುಸಂಗೋಪನೆ ಚಟುವಟಿಕೆಗಳನ್ನೂ ನಡೆಸುತ್ತಿರುವ ದರ್ಶನ್ ಕೃಷಿ ಕಾಯಕದ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ” ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಇದನ್ನೂ ಓದಿ: ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ ದರ್ಶನ್!

’ರಾಜ್ಯ ಕೃಷಿ ಇಲಾಖೆಯ ಯೋಜನೆಗಳನ್ನು, ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಮತ್ತು ಕೃಷಿ ಬಗ್ಗೆ ಯುವಜನತೆಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ಜನಪ್ರಿಯ ನಟ, ಹೃದಯವಂತ ಚಾಲೆಂಜಿಂಗ್ ಸ್ಟಾರ್ ದರ್ಶನ್, ಇಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸಿದರು’ ಎಂದು ಕಾರ್ಯಕ್ರಮದ ಛಾಯಾಚಿತ್ರಗಳನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

‘ದರ್ಶನ್ ನಟನೆಯ “ರಾಬರ್ಟ್” ಚಿತ್ರವನ್ನು ನೋಡುವುದಾಗಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಬಿ.ಸಿ.ಪಾಟೀಲ್ ಹೇಳಿದರು. ’ನಾನು ಅಧುನಿಕ ಕೌರವನಾಗಿ ನಟನೆ ಮಾಡಿದ್ದೆ. ಆದರೆ ದರ್ಶನ್ ಪೌರಾಣಿಕ ಕೌರವನಾಗಿ ನಟಿಸಿದ್ದಾರೆ. ಮಾರ್ಚ್ 11ರಂದು “ರಾಬರ್ಟ್” ಚಿತ್ರ ಬಿಡುಗಡೆ ಆಗಲಿದ್ದು ಚಿತ್ರ ಸೂಪರ್ ಸೂಪರ್ ಹಿಟ್ ಆಗಲಿ’ ಎಂದು ಸಚಿವ ಬಿ.ಸಿ.ಪಾಟೀಲ್ ಹಾರೈಸಿದರು.

ಎರಡು ವಾರಗಳ ಹಿಂದೆಯೇ ದರ್ಶನ್ ಅವರನ್ನು ಕೃಷಿ ಇಲಾಖೆ ರಾಯಭಾರಿಯಾಗಿ ಘೋಷಿಸಲಾಗಿತ್ತು. ಇಂದು ಅಧಿಕೃತವಾಗಿ ಆಹ್ವಾನ ಸ್ವೀಕರಿಸಿದ್ದಾರೆ.


ಇದನ್ನೂ ಓದಿ: ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್: ದರ್ಶನ್ ಪಾಲ್, ಯೋಗೇಂದ್ರ ಯಾದವ್, ರಾಕೇಶ್ ಟಿಕಾಯತ್ ಭಾಗಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...