Homeಕರ್ನಾಟಕನೀತಿ ಸಂಹಿತೆ ಉಲ್ಲಂಘಿಸಿ ಶಾಲಾ-ಕಾಲೇಜುಗಳಲ್ಲಿ ಮತ ಯಾಚಿಸಿದ ಚಾಮರಾಜನಗರ ಬಿಜೆಪಿ ಅಭ್ಯರ್ಥಿ: ಕಾಂಗ್ರೆಸ್ ಆರೋಪ

ನೀತಿ ಸಂಹಿತೆ ಉಲ್ಲಂಘಿಸಿ ಶಾಲಾ-ಕಾಲೇಜುಗಳಲ್ಲಿ ಮತ ಯಾಚಿಸಿದ ಚಾಮರಾಜನಗರ ಬಿಜೆಪಿ ಅಭ್ಯರ್ಥಿ: ಕಾಂಗ್ರೆಸ್ ಆರೋಪ

- Advertisement -
- Advertisement -

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಶಾಲಾ-ಕಾಲೇಜುಗಳಲ್ಲಿ ಮತ ಯಾಚನೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, “ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಶಾಲಾ ಕಾಲೇಜುಗಳಲ್ಲಿ ಮತ ಯಾಚಿಸಿದ್ದಾರೆ. ವಿದ್ಯಾರ್ಥಿಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು, ರಾಜಕೀಯ ಚಟುವಟಿಕೆಗಳಿಗೆ ಬಳಸುವುದು ಬಿಜೆಪಿಯ ಚುನಾವಣಾ ಅಕ್ರಮದ ಸಾಮಾನ್ಯ ಸಂಗತಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ಬರೆದುಕೊಂಡಿದೆ.

ಕಾಂಗ್ರೆಸ್ ಹಂಚಿಕೊಂಡಿರುವ ವಿಡಿಯೋದಲ್ಲಿ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರು ಕೇಸರಿ ಶಾಲು ಹಾಕಿಕೊಂಡು ಕಾಲೇಜೊಂದರ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡಿರುವುದನ್ನು ಕಾಣಬಹುದು.

ಇದನ್ನೂ ಓದಿ : ಆರ್ಥಿಕ ಅನ್ಯಾಯ| ಮುಖಾಮುಖಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ: ನಿರ್ಮಲಾ ಸೀತಾರಾಮನ್‌ರಿಗೆ ಆಹ್ವಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

0
ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕೆನಡಾದಲ್ಲಿ ಕೆಲ ತಿಂಗಳ ಹಿಂದೆಯೇ ಈ ಶಂಕಿತರನ್ನು ಪೊಲೀಸರು ಗುರುತಿಸಿದ್ದು,...