ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸಮೀಪದ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿಗಳು ಮಣ್ಣಿನಡಿ ಸಿಲುಕಿವೆ. ಮಹೇಂದ್ರಪ್ಪ ಎನ್ನುವವರು ಈ ಸ್ಥಳದ ಮಾಲೀಕರಾಗಿದ್ದು, ಕೇರಳ ಮೂಲದ ಹಕೀಂ ಎಂಬುವವರು ಬಿಳಿ ಕಲ್ಲು ಕ್ವಾರಿ ನಡೆಸುತ್ತಿದ್ದರು ಎನ್ನಲಾಗಿದೆ.
ನಾಪತ್ತೆಯಾಗಿರುವ ಕಾರ್ಮಿಕರು ಕೊಳ್ಳೆಗಾಲ ಅಥವಾ ತಮಿಳುನಾಡು ಮೂಲದವರು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.
ಇದನ್ನೂ ಓದಿ: ‘ಬಿಫೆಸ್’ನಲ್ಲಿ ಸಾವರ್ಕರ್ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್’ ನಾಪತ್ತೆ!

ಕಲ್ಲು ಗಣಿಗಾರಿಕೆಯಲ್ಲಿ 50 ಕ್ಕು ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಪಾಯಕಾರಿ ರೀತಿಯಲ್ಲಿಯೇ ಜೆಸಿಬಿ, ಇಟಾಚಿಗಳು ಕಲ್ಲು ಗಣಿಕಾರಿಕೆ ನಡೆಸುತ್ತಿದ್ದವು. ಅಧಿಕಾರಿಗಳ ನಿರ್ಲಕ್ಷ್ಯವೇ ಅಕ್ರಮ ಗಣಿಗಾರಿಕೆ ನಡೆಸಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

200ಕ್ಕೂ ಹೆಚ್ಚು ಅಡಿ ಆಳದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದ್ದು, ಮತ್ತಷ್ಟು ಮಾಹಿತಿ ಹೊರಬೀಳಬೇಕಿದೆ.
ಇದನ್ನೂ ಓದಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’


