Homeಕರ್ನಾಟಕಚಾಮರಾಜನಗರ | ಖಾಸಗಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಊರು ತೊರೆದ ಜನ!

ಚಾಮರಾಜನಗರ | ಖಾಸಗಿ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಊರು ತೊರೆದ ಜನ!

- Advertisement -
- Advertisement -

ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳ ತಾಳಲಾರದೆ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಪುರ, ದೇಶವಳ್ಳಿ ಸೇರಿದಂತೆ ಹಲವೆಡೆಗಳಲ್ಲಿ ಜನರು ಮನೆಗಳನ್ನೇ ತೊರೆದಿದ್ದಾರೆ ಎಂದು ವರದಿಯಾಗಿದೆ.

ಪಡೆದಿರುವ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿಸಿಲ್ಲ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳ ಏಜೆಂಟರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಹಲವು ಕುಟುಂಬಗಳು ಮನೆಗೆ ಬೀಗ ಹಾಕಿ, ಊರು ಬಿಟ್ಟು ಹೋಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೆಲ ಮಕ್ಕಳು ತಮ್ಮ ಶಿಕ್ಷಣವನ್ನೂ ಅರ್ಧದಲ್ಲಿ ನಿಲ್ಲಿಸಿ ತಮ್ಮ ಫೋಷಕರೊಂದಿಗೆ ಬೇರೆ ಜಿಲ್ಲೆ, ರಾಜ್ಯಗಳಿಗೆ ತೋಟದ ಕೆಲಸಕ್ಕೆ ಹೋಗಿದ್ದಾರೆ. ಮೋಹನ್ ಎಂಬ ವಿದ್ಯಾರ್ಥಿಯೊಬ್ಬ ತಂದೆ ಮಾಡಿದ ಸಾಲ ತೀರಿಸುವ ಸಲುವಾಗಿ ತನ್ನ ಕಿಡ್ನಿ ಮಾರಲು ಅನುವು ಮಾಡಿಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾನೆ. ಫೈನಾನ್ಸ್ ಏಜೆಂಟ್ ಈತನ ಮನೆಗೆ ಬಂದು ಅಶ್ಲೀಲ ಪದ ಬಳಸಿ ತಾಯಿಗೆ ನಿಂದಿಸಿದ್ದ. ಇದರಿಂದ ಬೇಸತ್ತು ಕಿಡ್ನಿ ಮಾರಲು ಮುಂದಾಗಿದ್ದಾನೆ ಎಂದು ವರದಿ ವಿವರಿಸಿದೆ.

ಏಜೆಂಟರು ರಾತ್ರಿ ವೇಳೆ ಸಾಲ ಪಡೆದವರ ಮನೆಗಳಿಗೆ ಭೇಟಿ ನೀಡಿ, ಅವರ ಮಕ್ಕಳ ಸಮ್ಮುಖದಲ್ಲಿಯೇ ಕಿರುಕುಳ ನೀಡುತ್ತಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಮೈಕ್ರೋಫೈನಾನ್ಸ್ ಕಂಪನಿಗಳು 24% ಬಡ್ಡಿಗೆ ಸಾಲ ವಿತರಿಸಿವೆ ಎಂದು ಹೆಗ್ಗವಾಡಿಪುರದ ಜನರು ಆರೋಪಿಸಿದ್ದಾರೆ. ಕೆಲವು ಫೈನಾನ್ಸ್ ಕಂಪನಿಗಳನ್ನು ಟ್ರಸ್ಟ್‌ಗಳು ನಡೆಸುತ್ತಿವೆ. ನೆರೆಯ ತಮಿಳುನಾಡಿನ ಕಂಪನಿಗಳು ಕೂಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಕಂಪನಿಗಳು ವ್ಯಕ್ತಿಗಳಿಗೆ ಮಾತ್ರವಲ್ಲದೆ ಮಹಿಳಾ ಸ್ವಸಹಾಯ ಗುಂಪುಗಳಿಗೂ ಹಣವನ್ನು ಸಾಲ ನೀಡುತ್ತವೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾಗಿ ವರದಿ ಹೇಳಿದೆ.

ಫೈನಾನ್ಸ್ ಕಂಪನಿ ಕಿರುಕುಳ ತಾಳಲಾರದೆ ಪೋಷಕರು ಅತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕೆಲ ಮಕ್ಕಳು ಮಾಹಿತಿ ಬಿಚ್ಚಿಟ್ಟಿದ್ದಾರೆ.

“ಜನರು ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೋಗಬಾರದು. ಸಹಾಯಕ್ಕಾಗಿ ತಮ್ಮನ್ನು, ಸಹಾಯಕ ಆಯುಕ್ತರನ್ನು, ತಹಶೀಲ್ದಾರ್ ಮತ್ತು ಸ್ಥಳೀಯ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಗ್ರಾಮಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಜನರಿಗೆ ಅರಿವು ಮೂಡಿಸಲು ವಿಶೇಷ ಪಂಚಾಯತ್ ಸಭೆಗಳನ್ನು ನಡೆಸಲು ಜಿಲ್ಲಾಡಳಿತ ಯೋಜಿಸಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಕೃಪೆ : newindianexpress.com

ಇದನ್ನೂ ಓದಿ : ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡರೆ ಸಾಲದು, ನಕ್ಸಲಿಸಂಗೆ ಕಾರಣವಾದ ಸಮಸ್ಯೆಗಳನ್ನು ಪರಿಹರಿಸಬೇಕು : ಶಾಂತಿಗಾಗಿ ನಾಗರಿಕ ವೇದಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...