Homeಕರ್ನಾಟಕಚಾಮರಾಜನಗರ: ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ: ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

- Advertisement -
- Advertisement -

ಏಪ್ರಿಲ್ 26 ಶುಕ್ರವಾರದಂದು ಮತದಾನದ ವೇಳೆ ಘರ್ಷಣೆ ಉಂಟಾದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾದ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ “ಚಾಮರಾಜನಗರ ಲೋಕಸಭಾ ಕ್ಷೇತ್ರದ, ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಡಿಗನತ್ತ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 146ರಲ್ಲಿ ನಡೆದ ಮತದಾನವನ್ನು ಅನೂರ್ಜಿತಗೊಳಿಸಿ ಮರು ಮತದಾನ ನಡೆಸಲು ಭಾರತ ಚುನಾವಣಾ ಆಯೋಗ ಆದೇಶಿಸಿದೆ” ಎಂದು ತಿಳಿಸಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಮತ್ತು ಆಯೋಗ ನಿಯೋಜಿತ ಸಾಮಾನ್ಯ ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಮತ್ತು ಎಲ್ಲಾ ಸಂಬಂಧಿತ ಸಂದರ್ಭಗಳನ್ನು ಪರಿಗಣಿಸಿದ ನಂತರ ಭಾರತ ಚುನಾವಣಾ ಆಯೋಗ ಪ್ರಜಾ ಪ್ರತಿನಿಧಿ ಕಾಯ್ದೆಯ ಸೆಕ್ಷನ್ 58 (2) ಮತ್ತು 58ಎ (2) ಪ್ರಕಾರ 29 ಏಪ್ರಿಲ್ 2024ರಂದು ಸೋಮವಾರ ಮರು ಮತದಾನ ನಡೆಸಲು ನಿರ್ಧಿರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಸೋಮವಾರ ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಈ ಮತಗಟ್ಟೆ ವ್ಯಾಪ್ತಿಯಲ್ಲಿ 528 ಮತದಾರರಿದ್ದಾರೆ. ಆದರೆ, ಶುಕ್ರವಾರ ಕೇವಲ ಒಂಬತ್ತು ಮಂದಿಯಷ್ಟೇ ಮತದಾನ ಮಾಡಿದ್ದರು.

ಮತದಾನ ಬಹಿಷ್ಕಾರದ ವಿಚಾರದಲ್ಲಿ ಇಂಡಿಗನತ್ತ, ಮೆಂದಾರೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಉಂಟಾದ ಘರ್ಷಣೆ ಸಂದರ್ಭದಲ್ಲಿ, ಉದ್ರಿಕ್ತರು ಇಂಡಿಗನತ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾಗಿದ್ದ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಮತಗಟ್ಟೆಗೆ ನುಗ್ಗಿ ಇವಿಎಂಗೆ ಬೆಂಕಿ ಹಚ್ಚಲೂ ಯತ್ನಿಸಿದ್ದರು. ಇನ್ನಿತರ ಪರಿಕರಗಳನ್ನು ಕೆಳಕ್ಕೆ ಎಸೆದು ಹಾನಿ ಮಾಡಿದ್ದರು ಎಂದು ತಿಳಿದು ಬಂದಿದೆ.

ಶುಕ್ರವಾರ ಮತದಾನದ ದಿನ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 41 ಗ್ರಾಮಸ್ಥರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಪ್ರಸ್ತುತ ಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಬೆಂಗಳೂರು ದಕ್ಷಿಣ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ‘ನಕಲಿ ಮತದಾನ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...