Homeಕರ್ನಾಟಕಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

ಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

- Advertisement -
- Advertisement -

ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬಹಿಷ್ಕಾರದಂತಹ ಕೆಟ್ಟ ಪದ್ದತಿ ಚಾಲ್ತಿಯಲ್ಲಿದೆ. ಹೌದು, ಅಂತಹದ್ದೇ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಅಂತರ್ಜಾತಿ ಮದುವೆಯಾದ ದಂಪತಿಗೆ ಊರಿನಿಂದ ಬಹಿಷ್ಕಾರ ಹಾಕಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.

ದೂರಿನ ಪ್ರಕಾರ, ಕೊಳ್ಳೇಗಾಲ ಸಮೀಪದ ಕುಣಗಳ್ಳಿ ಗ್ರಾಮದ ಉಪ್ಪಾರ ಸಮುದಾಯದ ಗೋವಿಂದ ಶೆಟ್ಟಿ ಅವರು, 2018ರ ಸೆಪ್ಟೆಂಬರ್ 18ರಂದು ಮಂಡ್ಯ ಜಿಲ್ಲೆಯ ಹೂವಿನಕೊಪ್ಪಲು ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ತನ್ನ ಗೆಳತಿ ಶ್ವೇತಾಳನ್ನು ವಿವಾಹವಾಗಿದ್ದರು. ಅವರಿಗೆ ಈಗ ಇಬ್ಬರು ಮಕ್ಕಳಿದ್ದಾರೆ.

ಈ ಅಂತರ್ಜಾತಿ ವಿವಾಹದ ವಿಷಯ ತಿಳಿದ ಗ್ರಾಮದ ಮುಖಂಡರು ಸಭೆ ಕರೆದು, ಗೋವಿಂದ ಶೆಟ್ಟಿ ಊರಿನ ಕುಲ ಕೆಡಿಸಿದ್ದಾನೆ ಎಂದು ಹೇಳಿ ಅವರ ತಲೆ ಬೋಳಿಸಿ, ಆತನ ಕುಟುಂಬಕ್ಕೆ 1.25 ಲಕ್ಷ ರೂಪಾಯಿ ದಂಡ ವಿಧಿಸಿ, ಗ್ರಾಮದಿಂದ ಬಹಿಷ್ಕರಿಸಿದ್ದರು.

ಇದನ್ನೂ ಓದಿ: ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಂಪತಿಗಳು ಮಳವಳ್ಳಿಯಲ್ಲಿ ಇದ್ದು ಜೀವನೋಪಾಯ ನಡೆಸುತ್ತಿದ್ದರು. ಆದರೆ, ಗೋವಿಂದ ಶೆಟ್ಟಿ ಅವರು, ತನ್ನ ಹೆಂಡತಿ ಒಕ್ಕಲಿಗರ ಜಾತಿ ಎಂದು ಸುಳ್ಳು ಹೇಳುತ್ತ ಆಗಾಗ ಊರಿಗೆ ಹೋಗಿ ತನ್ನ ತಂದೆತಾಯಿಗೆ ಭೇಟಿಯಾಗುತ್ತಿದ್ದರು. ಆದರೆ, ಫೆಬ್ರುವರಿಯಲ್ಲಿ ಗೋವಿಂದ ಶೆಟ್ಟಿ ಅವರ ತಾಯಿಯು ಅನಾರೋಗ್ಯಕ್ಕೆ ತುತ್ತಾಗಿರುವುದರಿಂದ ಹೆಂಡತಿಯನ್ನೂ ಕುಣಗಲ್ಲಿಗೆ ಕರೆದುಕೊಂಡು ಬಂದಿದ್ದರು.

ಈ ವಿಚಾರ ಗ್ರಾಮದ ಮುಖಂಡರಿಗೆ ಕೆರಳಿಸಿದೆ, ಹಾಗಾಗಿ ಮತ್ತೆ ಅವರ ತಂದೆಯನ್ನು ಕರೆಸಿ ನಿನ್ನ ಮಗ ಹೆಂಡತಿಯನ್ನು ಮತ್ತೆ ಊರೊಳಗೆ ಕರೆದುಕೊಂಡು ಬಂದು ಕುಲ ಕೆಡಸಿದ್ದಾನೆ ಹಾಗಾಗಿ 3 ಲಕ್ಷ ರೂ. ದಂಡ ವಿಧಿಸಿ, ಮಾರ್ಚ್ 1ರೊಳಗೆ ಪಾವತಿಸಬೇಕು. ಒಂದು ವೇಳೆ ಅಷ್ಟರಲ್ಲಿ ಕೊಡದೇ ಹೋದಲ್ಲಿ 6 ಲಕ್ಷ ರೂ.ಗೆ ಹೆಚ್ಚಿಸಬೇಕಾಗುತ್ತದೆ ಎಂದಿದ್ದಾರೆ. ಅದರ ಜೊತೆಗೆ ಗ್ರಾಮಸ್ಥರೊಂದಿಗೆ ಮಾತನಾಡದಂತೆ ನಿಷೇಧ ಹೇರಿದ್ದು, ಅವರಿಗೆ ಗ್ರಾಮದ ಅಂಗಡಿಗಳಲ್ಲಿ ಯಾವುದೇ ಅಗತ್ಯ ವಸ್ತುಗಳನ್ನು ನೀಡದಂತೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಗೋವಿಂದ ಶೆಟ್ಟಿ ಅವರು ಮಾರ್ಚ್ 1ರಂದು ಡಿವೈಎಸ್‌ಪಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ಆದರೆ ಅವರು ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರಲಿಲ್ಲ. ಆಗ ಅವರು ಸಿಪಿಎಂ ಮುಖಂಡರಾದ ಕೃಷ್ಣೆಗೌಡರನ್ನು ಭೇಟಿಯಾಗಿ ತಮಗಾದ ಅನ್ಯಾಯದ ಬಗ್ಗೆ ವಿವರಿಸಿದ್ದಾರೆ. ಆನಂತರದಲ್ಲಿ ದಲಿತ ಹಕ್ಕುಗಳ ಸಮಿತಿ ಹಾಗೂ ಸಿಪಿಎಂ ಪಕ್ಷ ಮಧ್ಯಪ್ರವೇಶ ಮಾಡಿ, ಪ್ರಕರಣದ ಬಗ್ಗೆ ಎಸ್‌ಪಿ ಅವರ ಗಮಮಕ್ಕೆ ತಂದಿದ್ದಾರೆ.

ಆನಂತರ ಡಿವೈಎಸ್‌ಪಿ ಕ್ರಮಕ್ಕೆ ಮುಂದಾಗಿ, ಮಾ.3ರಂದು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಸಧ್ಯ ಸಮಾಜದ ಮುಖಂಡರಾದ ವೆಂಕಟಶೆಟ್ಟಿ, ಮಹದೇವ, ಮೋಂಡ ಶೆಟ್ಟಿ ಕನ್ನಪ್ಪ, ನಂಜಶೆಟ್ಟಿ, ಮಹದೇವ ಶೆಟ್ಟಿ, ಸಿದ್ದೇಶ್ ಸೇರಿ 15ಜನರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಪೊಲೀಸರು ಆರೋಪಿಗಳನ್ನು ಪ್ರಶ್ನಿಸಿದಾಗ, ತಾವು ಯಾವುದೇ ರೀತಿಯ ಬಹಿಷ್ಕಾರ ಹಾಕಿಲ್ಲ ಗೋವಿಂದರಾಜುವನ್ನು ಅವರ ತಂದೆಯೇ ಮನೆಗೆ ಸೇರಿಸುತ್ತಿಲ್ಲ. ಹಾಗಾಗಿ ತಂದೆಯ ಮೇಲೆ ದೂರು ನೀಡುವ ಬದಲು ತಮ್ಮ ಮೇಲೆ ದೂರು ನೀಡಿದ್ದಾರೆ ಎಂದು ಉಪ್ಪಾರ ಸಮುದಾಯದ ಯಜಮಾನರು ಪ್ರತ್ಯಾರೋಪ ಮಾಡಿದ್ದಾರೆ. ಆದರೆ, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.

ಸಧ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಆ ದಂಪತಿಗೆ 1.25ಲಕ್ಷ ರೂ. ಹಣ ನೀಡಲಾಗಿದೆ. ಇನ್ನೂ ಗ್ರಾಮದಲ್ಲಿ ಅವರ ಸುರಕ್ಷತೆಗಾಗಿ ಪೊಲೀಸರು ಕ್ರಮವಹಿಸಿದ್ದು, ದಂಪತಿ ಗ್ರಾಮದಲ್ಲಿ ನೆಲೆಯೂರಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಮಾತನಾಡಿದ್ದು, ”ಕೊಳ್ಳೆಗಾಲ ಭಾಗದ ಗ್ರಾಮಗಳಲ್ಲಿ ಊರಿನ ಮುಖಂಡರ ಪಾರುಪತ್ಯ ಹೆಚ್ಚಾಗಿ ನಡೆಯುತ್ತದೆ. ಊರಿನ ಹಿಡಿತವನ್ನು ತಮ್ಮ ಕೈಯಲ್ಲಿ ಇಟ್ಟುಕೊಳ್ಳುವ ಮನಸ್ಥಿಯಲ್ಲಿ ಆ ಮುಖಂಡರು ಪಾಳೇಗಾರರಂತೆ ವರ್ತಿಸುತ್ತಾರೆ. ಈ ರೀತಿಯಲ್ಲಿ ಯಾರಾದರೂ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾದರೆ, ಅವರಿಗೆ ದಂಡ ವಿಧಿಸುವುದು, ಬಹಿಷ್ಕಾರ ಹಾಕುವುದನ್ನು ಮಾಡುತ್ತಾರೆ” ಎಂದು ತಿಳಿಸಿದರು.

”ಈ ಭಾಗದಲ್ಲಿ ಇದು ಒಂದೇ ಪ್ರಕರಣ ಅಲ್ಲ, ಇಂತಹ ಬಹಳಷ್ಟು ಪ್ರಕರಣಗಳಿವೆ. ಇದೇ ಕುಣಿಗಲ್ಲ ಗ್ರಾಮದ 10-12 ಹುಡುಗರು ಬೇರೆ ಜಾತಿಯ ಹುಡುಗಿಯರನ್ನು ಮದುವೆಯಾಗಿದ್ದಾರೆ. ಅವರೆಲ್ಲಾ ಈ ಪಾಳೆಗಾರಿಕೆ ಮನಸ್ಥಿತಿಯವರ ದಂಡ ಮತ್ತು ಶಿಕ್ಷೆಗೆ ಹೆದರಿ, ಊರಿಗೂ ಬರದೇ ಬೇರೆ ಬೇರೆ ಕಡೆಗಳಲ್ಲಿ ಬದುಕು ನಡೆಸುತ್ತಿದ್ದಾರಂತೆ. ಇದು ಪೊಲೀಸರಿಗೂ ಗೊತ್ತಿದೆ, ಅವರ ವಿರುದ್ಧ ದೂರು ನೀಡಲು ಯಾರೂ ಮುಂದೆ ಬರುವುದಿಲ್ಲ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

”ಕೊಳ್ಳೆಗಾಲ ತಾಲೂಕಿನಲ್ಲಿ ಯಾರೆಲ್ಲ ಈ ಪಾಳೆಗಾರಿಕೆ ನಡೆಸುತ್ತಿದ್ದಾರೋ ಅಂತವರ ವಿರುದ್ಧ ಸಿಪಿಎಂ ಪಕ್ಷದ ವತಿಯಿಂದ ಇನ್ನೆರಡು ದಿನಗಳಲ್ಲಿ ಹೋರಾಟ ನಡೆಸುತ್ತೇವೆ. ಅವರ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ನಾವು ಒತ್ತಾಯ ಮಾಡುತ್ತೇವೆ ಎಂದು ಸಿಪಿಎಂ ಮುಖಂಡರಾದ ಕೃಷ್ಣೆಗೌಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...