Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಈ ಜಾಗ ತನ್ನದೆಂದು ಪ್ರತಿಕ್ರಿಯೆ ನೀಡಿದ್ದ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿತ್ತು. ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದು, ವಿವಾದಕ್ಕೆ ತೆರೆ ಎಳೆದಿದೆ.

- Advertisement -
- Advertisement -

ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.

ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿರಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, “ಇದು ಬಿಬಿಎಂಪಿ ಆಸ್ತಿಯಾಗಿದ್ದು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರು ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆಟದ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಈ ಸ್ಥಳವನ್ನು ನೀಡಬಹುದು ಎಂದು ನ್ಯಾಯಾಲಯದ ಆದೇಶವಿದೆ” ಎಂದಿತ್ತು.

“ನ್ಯಾಯಾಲಯದ ಆದೇಶದ ಪ್ರಕಾರ ಪಶ್ಚಿಮ ವಲಯ ಜಂಟಿ ಆಯುಕ್ತರ ಅನುಮತಿಯೊಂದಿಗೆ ಮುಸ್ಲಿಮರು ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ ಪ್ರಾರ್ಥನೆಗಾಗಿ ಇಲ್ಲಿ ಸೇರುತ್ತಾರೆ” ಎಂದು ತಿಳಿಸಿತ್ತು.

“ಪ್ರತಿ ವರ್ಷ ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ, ಈ ಸ್ಥಳವು ಧಾರ್ಮಿಕ ಚಟುವಟಿಕೆಯ ಕೇಂದ್ರವಾಗುತ್ತದೆ. ಬಕ್ರೀದ್ ಸಮಯದಲ್ಲಿ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಮತ್ತು ಇತರ ಜಿಲ್ಲೆಗಳ ರೈತರು ಕುರಿ ಮತ್ತು ಮೇಕೆಗಳನ್ನು ಇಲ್ಲಿಗೆ ತಂದು ಮಾರುತ್ತಾರೆ. ಈ ಎರಡು ಸಂದರ್ಭಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಅವಕಾಶ ನೀಡುವ ಬಗ್ಗೆ ಜಂಟಿ ಆಯುಕ್ತರು ನಿರ್ಧಾರ ತೆಗೆದುಕೊಳ್ಳಬಹುದು” ಎಂದು ಪಾಲಿಕೆ ಹೇಳಿತ್ತು.

“ಈ ಜಾಗವನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಲು ಸಿದ್ಧರಿರುವ ಯಾರಾದರೂ ಬಿಬಿಎಂಪಿಗೆ ಪ್ರಸ್ತಾವನೆಯನ್ನು ಕಳುಹಿಸಬಹುದು. ಅರ್ಜಿಯನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಪಾಲಿಕೆ ತಿಳಿಸಿತ್ತು.

ಈ ಮೂಲಕ ಈ ಜಾಗ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಸೇರಿದ್ದೋ ಅಥವಾ ಬಿಬಿಎಂಪಿಗೆ ಸೇರಿದ್ದೋ ಎಂಬ ಪ್ರಶ್ನೆ ಎದ್ದಿತ್ತು.

“ಚಾಮರಾಜಪೇಟೆ ಈದ್ಗಾ ಮೈದಾನ ತಮ್ಮದೆಂದು ಹೇಳಿಕೆ ನೀಡಿರುವ ಬಿಬಿಎಂಪಿ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು” ಎಂದು ಕೇಂದ್ರ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) ಆಗ್ರಹಿಸಿತ್ತು.

ಬಿಬಿಎಂಪಿ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದ ಸಿಎಂಎ ಪ್ರಧಾನ ಕಾರ್ಯದರ್ಶಿ ಡಾ.ಜಹೀರುದ್ದೀನ್ ಅಹ್ಮದ್, “ಈ ಭೂಮಿ ವಕ್ಫ್‌ಗೆ ಸೇರಿದೆ. ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಶನ್ ಪ್ರತಿಪಾದನೆಯನ್ನು ವಜಾಗೊಳಿಸಿತ್ತು. ಈ ಕುರಿತು ವಕ್ಫ್ ಗೆಜೆಟ್ ಅಧಿಸೂಚನೆಯನ್ನು ಜೂನ್ 7, 1965ರಂದು ಹೊರಡಿಸಿದೆ” ಎಂದು ತಿಳಿಸಿದ್ದರು.

“ಪಾಲಿಕೆಯು ಈದ್ಗಾ ಮೈದಾನದ ನೈಋತ್ಯ ಮೂಲೆಯಲ್ಲಿ ಅನಧಿಕೃತವಾಗಿ ವಾರ್ಡ್ ಕಚೇರಿಯನ್ನು ನಿರ್ಮಿಸಿತ್ತು. ಆದರೆ 1971ರ ಆಗಸ್ಟ್ 28ರಂದು ಅಂದಿನ ಮೇಯರ್ ಎಂ.ಬಿ.ಲಿಂಗಯ್ಯ ಮತ್ತು ಸಿಎಂಎ ಪ್ರತಿನಿಧಿಗಳ ನಡುವೆ ಸಭೆ ನಡೆಯಿತು. 30 ವರ್ಷಗಳ ಕಾಲ ಜಾಗವನ್ನು ಗುತ್ತಿಗೆ ನೀಡಲು ಒಪ್ಪಿಗೆ ನೀಡಲಾಯಿತು” ಎಂದಿದ್ದರು ಅಹ್ಮದ್.

“1994ರ ಮಾರ್ಚ್ 3ರಂದು ಪಾಲಿಕೆಗೆ ಪತ್ರ ಬರೆದು ವಾರ್ಡ್ ಕಚೇರಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಈದ್ಗಾ ಮೈದಾನ ಆಟದ ಮೈದಾನವಾಗಿದ್ದು, ಅದು ತಮಗೆ ಸೇರಿದೆ ಎಂದು ಬಿಬಿಎಂಪಿ ಹೇಳಿರುವುದು ಅಚ್ಚರಿಯ ಸಂಗತಿಯಾಗಿದೆ. ಬಿಬಿಎಂಪಿ ತನ್ನ ಹೇಳಿಕೆಯನ್ನು ವಾಪಸ್ ಪಡೆಯಬೇಕು” ಎಂದು ಅವರು ಆಗ್ರಹಿಸಿದ್ದರು.

’ನ್ಯಾಯಪಥ’ದೊಂದಿಗೆ ಮಾತನಾಡಿದ್ದ ವಕ್ಫ್ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ಪರ್ವೀಜ಼್ ಖಾನ್ ಕೂಡ ಇದೇ ಪ್ರತಿಪಾದನೆಯನ್ನು ಮಾಡಿದ್ದರು. “ಸುಪ್ರೀಂ ಕೋರ್ಟ್ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಅದು ಸಾರ್ವಜನಿಕವಾಗಿಯೂ ಲಭ್ಯವಿದೆ. ಈಗ ಬಿಬಿಎಂಪಿಯವರು ತಮ್ಮದೆಂದು ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ. ಎಲ್ಲ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಕಾನೂನು ಪ್ರಕ್ರಿಯೆ ನಡೆಯಬೇಕು ಎಂದು ಬಿಬಿಎಂಪಿ ತಿಳಿಸಿದೆ” ಎಂದಿದ್ದರು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

“ನ್ಯಾಯಾಲಯದ ಆದೇಶವೇ ಅಂತಿಮ. ಹೀಗಾಗಿ ಯಾರು ಏನೇ ಹೇಳಿದರೂ ನಾವು ಅತಿಯಾದ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ. ಎರಡು ಸರ್ಕಾರಿ ಸಂಸ್ಥೆಗಳ ನಡುವೆ ಈ ಗೊಂದಲ ಏರ್ಪಟ್ಟಿದೆ. ನಾವು ಕಾನೂನಿನ ಚೌಕಟ್ಟಿನಲ್ಲಿ ಸಾಗುತ್ತೇವೆ” ಎಂದು ತಿಳಿಸಿದ್ದರು.

“ಇಷ್ಟು ವರ್ಷ ಕಳೆದರೂ ವಕ್ಫ್ ಮಂಡಳಿ ಈ ಮೈದಾನಕ್ಕೆ ತಂತಿ ಬೇಲಿಯನ್ನು ಹಾಕಿಲ್ಲ. ಎಲ್ಲರೂ ಜೊತೆಯಲ್ಲಿ ಇರಬೇಕೆಂಬುದು ನಮ್ಮ ಆಶಯ. ಇತ್ತೀಚೆಗೆ ಈ ವಿವಾದ ಬಂದಿದೆ. ಹೀಗಾಗಿ ವಿವಾದ ಸೃಷ್ಟಿಸಲು ಯತ್ನಿಸುವವರಿಗೆ ಪ್ರತಿಕ್ರಿಯೆ ನೀಡಲು ನಾವು ಬಯಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಬಿಬಿಎಂಪಿ ಪಶ್ಚಿಮ ವಿಭಾಗದ ಆಯುಕ್ತರಾದ ಶ್ರೀನಿವಾಸ್ ’ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿ, “ಸುಪ್ರೀಂ ಕೋರ್ಟ್ ಆದೇಶವಿರುವ ದಾಖಲೆಗಳನ್ನು ವಕ್ಫ್ ಬೋರ್ಡ್ ಕಳುಹಿಸಿಕೊಟ್ಟಿದೆ. ಇದು ಬಿಬಿಎಂಪಿಗೆ ಸೇರಿದೆ ಎಂಬ ದಾಖಲೆಗಳೂ ಇವೆ. ಅವುಗಳನ್ನು ಮುಖ್ಯ ಕಚೇರಿಯ ಕಾನೂನು ವಿಭಾಗಕ್ಕೆ ಸಲ್ಲಿಸಿದ್ದೇವೆ. ಈಗ ಇರುವ ಪ್ರಸ್ತುತ ದಾಖಲೆಗಳ ಪ್ರಕಾರ ಈ ಆಟದ ಮೈದಾನ ಬಿಬಿಎಂಪಿಗೆ ಸೇರಿದೆ. ಈ ಸಮಸ್ಯೆ ಇತ್ಯರ್ಥವಾಗಲು ಇನ್ನೂ ಹತ್ತು ದಿನ ಬೇಕಾಗಬಹುದು. ಈ ಸ್ಥಳವು ಯಾರಿಗೆ ಸೇರಿದ್ದೆಂದು ತಿಳಿಯಲು ಹಳೆಯ ದಾಖಲೆಗಳನ್ನು ಕಳುಹಿಸಿಕೊಡುವಂತೆ ಕಂದಾಯ ಇಲಾಖೆಗೂ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದರು.

ಕೊನೆಗೂ ಬಿಬಿಎಂಪಿ ತನ್ನ ಪ್ರತಿಪಾದನೆಯಿಂದ ಹಿಂದೆ ಸರಿದಿದ್ದು, ವಿವಾದಕ್ಕೆ ತೆರೆ ಎಳೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...