Homeಕರ್ನಾಟಕಸುಪ್ರೀಂ ಮೆಟ್ಟಿಲೇರಿದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಹೈಕೋರ್ಟ್ ಆದೇಶ ತಡೆಗೆ ಮನವಿ

ಸುಪ್ರೀಂ ಮೆಟ್ಟಿಲೇರಿದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಹೈಕೋರ್ಟ್ ಆದೇಶ ತಡೆಗೆ ಮನವಿ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವವರಿಗೆ ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದು, ಇದನ್ನು ಪ್ರಶ್ನಿಸಿ ವಕ್ಫ್‌‌ ಮಂಡಳಿ ಸುಪ್ರೀಂಕೋರ್ಟ್ ಕದತಟ್ಟಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಹಾಗೂ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್‌ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಎದುರು ವಕ್ಫ್‌‌ ಮಂಡಳಿ, ‘ಈ ವಿಚಾರವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಮನವಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸುವುದಾಗಿ ಪೀಠವು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಅರ್ಜಿಗಳನ್ನು ಸರ್ಕಾರ ಪರಿಗಣಿಸಬಹುದು ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಈದ್ಗಾ ಮೈದಾನದಲ್ಲಿ ಆರು ದಶಕಗಳಿಂದ ಮುಸ್ಲಿಮರು ಪ್ರಾರ್ಥನೆ ಮಾಡುತ್ತಿದ್ದಾರೆ. ಒಂದು ವೇಳೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದರೆ ಧಾರ್ಮಿಕ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ” ಎಂದು ವಕ್ಫ್‌‌ ಪರ ವಕೀಲರು ವಾದಿಸಿದ್ದಾರೆ.

“ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸದಿದ್ದರೆ ಅನಗತ್ಯ ಉದ್ವಿಗ್ನತೆ ಸೃಷ್ಟಿಯಾಗಲಿದೆ” ಎಂದೂ ಎಚ್ಚರಿಸಿದ್ದಾರೆ.

ಸರ್ಕಾರಿ ಸಂಸ್ಥೆಗಳಾದ ವಕ್ಪ್‌ ಮತ್ತು ಬಿಬಿಎಂಪಿ ನಡುವೆ ವಿವಾದ ಉಂಟಾಗಿದ್ದು, ‘ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದೆ’ ಎಂದು ಬಿಬಿಎಂಪಿ ಪ್ರತಿಪಾದಿಸಿದೆ. ಇದನ್ನು ಪ್ರಶ್ನಿಸಿ ವಕ್ಫ್‌ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮತ್ತು ಬೆಂಗಳೂರು ಜಿಲ್ಲೆ ವಕ್ಫ್‌ ಸಲಹಾ ಸಮಿತಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆ.25ರಂದು ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿತ್ತು.

“ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ರಂಜಾನ್‌ ಮತ್ತು ಬಕ್ರೀದ್ ಸಮಯದಲ್ಲಿ ಮೈದಾನದಲ್ಲಿ ಪಾರ್ಥನೆ ಸಲ್ಲಿಸಬಹುದು. ಈ ಎರಡು ದಿನಗಳನ್ನು ಹೊರತು ಪಡಿಸಿ ಬೇರಾವುದೇ ದಿನ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಆಟದ ಮೈದಾನವಾಗಿ ಬಳಸಬೇಕು. ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕು” ಎಂದು ಏಕಸದಸ್ಯ ಪೀಠ ಹೇಳಿತ್ತು.

“ಬಿಬಿಎಂಪಿ ಮತ್ತು ಸರ್ಕಾರ ಮೈದಾನದಲ್ಲಿ ಗಣರಾಜೋತ್ಸವ ಮತ್ತು ಸ್ವಾತಂತ್ರ್ಯ ದಿನಾಚಣೆ ಆಚರಣೆಗೆ ಅನುಮತಿ ನೀಡಬಹುದು ಮತ್ತು ಮೈದಾನವನ್ನು ಆಟದ ಬಳಕೆಗೆ ಮಾತ್ರವೇ ಸೀಮಿತಗೊಳಿಸಬೇಕು” ಎಂದು ಸೂಚಿಸಲಾಗಿತ್ತು.

ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಲಿಸಿದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಮತ್ತು ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಆಗಸ್ಟ್‌ 26ರಂದು ವಿಚಾರಣೆ ನಡೆಸಿತ್ತು.

“ಏಕಸದಸ್ಯ ನ್ಯಾಯಪೀಠ ನೀಡಿರುವ ನಿರ್ದೇಶನಗಳಲ್ಲಿ ಯಾವುದೇ ಬದಾಲಾವಣೆ ಇರುವುದಿಲ್ಲ. ಆದಾಗ್ಯೂ, ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಅನುಮತಿ ಕೋರಿ ಬೆಂಗಳೂರು ಜಿಲ್ಲಾಧಿಕಾರಿ ಸ್ವೀಕರಿಸಿರುವ ಮನವಿ ಪತ್ರಗಳನ್ನು ಇದೇ 31ರಿಂದ ಸೀಮಿತ ಅವಧಿಗೆ ಪರಿಗಣಿಸಿ ಸರ್ಕಾರ ಸೂಕ್ತ ಆದೇಶ ಹೊರಡಿಸಬಹುದು” ಎಂದು ವಿಭಾಗೀಯ ನ್ಯಾಯಪೀಠ ಪ್ರತಿಕ್ರಿಯೆ ನೀಡಿತ್ತು.

ಇದನ್ನೂ ಓದಿರಿ: ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ: ದಲಿತರ ಆಗ್ರಹ

ಹಿಂದೂ- ಮುಸ್ಲಿಂ ಕೋಮು ದಳ್ಳುರಿ ಎಬ್ಬಿಸಲು ಕೆಲವು ಮತೀಯ ಸಂಘಟನೆಗಳು ಬಯಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈದ್ಗಾ ಮೈದಾನದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಬೇಕು ಎಂದು ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯನ್ನು ಕೋರಿದ್ದವು.

ಈದ್ಗಾ ಮೈದಾನದ ವಿವಾದವು 1955ರಷ್ಟು ಹಿಂದಿನದು. ಸುಪ್ರೀಂ ಕೋರ್ಟ್ 1965ರಲ್ಲಿ ವಕ್ಫ್ ಪರವಾಗಿ ತೀರ್ಪು ನೀಡಿತ್ತು. ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್ 1965ರ ಗೆಜೆಟ್ ಅನ್ನು ಪ್ರಸ್ತುತಪಡಿಸಿ ಈ ಮೈದಾನವು ವಕ್ಫ್ ಆಸ್ತಿ ಎಂದು ತಿಳಿಸಿತು. 1974ರ ಸಿಟಿ ಸರ್ವೆ ದಾಖಲೆಗಳು ಈ ಜಾಗವನ್ನು ಆಟದ ಮೈದಾನವೆಂದು ಸೂಚಿಸಿರುವುದಾಗಿ ಹೇಳಲಾಗುತ್ತಿದೆ. ಹೀಗಾಗಿ ವಿವಾದ ಏರ್ಪಟ್ಟಿದೆ. ಇದರ ನಡುವೆ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...