Homeಕರ್ನಾಟಕಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಸುಪ್ರೀಂ ಮೊರೆ ಹೋಗಲಿರುವ ವಕ್ಪ್‌‌ ಮಂಡಳಿ

ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನವು ತಮ್ಮ ಮಾಲೀಕತ್ವದಲ್ಲಿ ಇಲ್ಲ ಎಂದು ಬಿಬಿಎಂಪಿ ಹೇಳಿದ ನಂತರವೂ ಬಿಜೆಪಿ ಸರ್ಕಾರ ವಿವಾದವನ್ನು ಜೀವಂತವಾಗಿಡಲು ಶ್ರಮಿಸುತ್ತಿವೆ. ಇದೀಗ ಈದ್ಗಾ ಮೈದಾನವನ್ನು ಕಂದಾಯ ಭೂಮಿ ಎಂದು ಸರ್ಕಾರ ಹೇಳಿದೆ. ಆದರೆ ಇದರ ವಿರದ್ಧ ರಾಜ್ಯ ವಕ್ಫ್‌ ಮಂಡಳಿ ಸುಪ್ರೀಂಕೋರ್ಟ್‌ಗೆ ತೆರಳುವುದಾಗಿ ಹೇಳಿದೆ.

ಇಷ್ಟೆ ಅಲ್ಲದೆ, ಬಿಜೆಪಿ ಪರ ಒಲವಿರುವ ಬಲಪಂಥೀಯ ಸಂಘಟನೆಗಳು ಅಲ್ಲಿ ಗಣೇಶ ಹಬ್ಬವನ್ನು ಮಾಡುವುದಾಗಿ ಹೇಳಿಕೆ ನೀಡಿ ಮತ್ತೆ ವಿವಾದವೆಬ್ಬಿಸಿದ್ದಾರೆ. ಈ ಹಿನ್ನಲೆಯಲ್ಲಿ “ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವುದಿಲ್ಲ” ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ರಾಜ್ಯ ವಕ್ಪ್‌ ಮಂಡಳಿಯು ಸರ್ಕಾರದ ಆದೇಶ ಮತ್ತು ಗಣೇಶೋತ್ಸವವ ಆಯೋಜಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗುವುದಾಗಿ ಹೇಳಿದೆ.

ಇದನ್ನೂ ಓದಿ: ಕೋಮುವಾದಿಗಳು ಎಬ್ಬಿಸಿದ ವಿವಾದದ ಸುಳಿಯಲ್ಲಿ ಈದ್ಗಾ ಮೈದಾನದ ಬಯಲು

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ವಕ್ಫ್‌ ಮಂಡಳಿಯ ಅಧ್ಯಕ್ಷ ಶಾಫಿ ಸಅದಿ, “ಬಿಬಿಎಂಪಿ ಆಡಳಿತವೇ ಈ ಮೈದಾನ ಬಿಬಿಎಂಪಿಯ ಆಟದ ಮೈದಾನ ಅಲ್ಲ ಎಂದು ಒಪ್ಪಿಕೊಂಡಿರುವುದು ನಮ್ಮ ಕಾನೂನು ತಂಡದ ದೊಡ್ಡ ಗೆಲುವು. ಇದೀಗ ಅದು ಕಂದಾಯ ಇಲಾಖೆಯ ಮೈದಾನ ಎಂದು ಹೇಳಿದೆ. ಆದರೆ ಇದು ಸುಪ್ರಿಂಕೋರ್ಟ್‌ನ ಆದೇಶದ ಉಲ್ಲಂಘನೆಯಾಗಿದ್ದು, ಕಂದಾಯ ಇಲಾಖೆ ಇನ್ನೊಂದು ಮುಜುಗರಕ್ಕೆ ನಿಲ್ಲುವುದಿಲ್ಲ. ಏನೇ ಇದ್ದರೂ ನಮ್ಮ ಕಾನೂನಾತ್ಮಕ ಹೋರಾಟ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ ವಿವಾದವೆದ್ದಿದ್ದಾಗ , ಚಾಮರಾಜಪೇಟೆ ಈದ್ಗಾ ಮೈದಾನವು ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ. ಖಾತೆ ಮಾಡಿಸಿಕೊಳ್ಳಲು ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಜೂನ್ 22ರ ಬುಧವಾರ ಹೇಳಿದ್ದರು. ಈ ಮೂಲಕ ವಿವಾದಕ್ಕೆ ತೆರೆ ಎಳೆದಿತ್ತು.

ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿಲ್ಲ: ಆಯುಕ್ತರ ಸ್ಪಷ್ಟನೆ

ಅಂದು ಮಾಧ್ಯಮಗಳಿಗೆ ಸ್ಪಷ್ಟನೆ ಬಿಬಿಎಂಪಿ ಆಯುಕ್ತ ತುಷಾರ್‌, ಯೋಗ ಮತ್ತು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವ ಅಧಿಕಾರ ನಮಗೆ ಇಲ್ಲ. ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ವಕ್ಫ್‌ ಬೋರ್ಡ್ ನಮ್ಮ ಗಮನಕ್ಕೆ ತಂದಿರುವ ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಈದ್ಗಾ ಮೈದಾನ ಬಿಬಿಎಂಪಿ ಮಾಲೀಕತ್ವದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ನಗರ ವ್ಯಾಪ್ತಿಯಲ್ಲಿ ಸರ್ವೇ ನಡೆದಾಗ ಈದ್ಗಾ ಮೈದಾನವು ನಮ್ಮದು ಎಂದು ಯಾರೂ ಹೆಸರು ಬರೆಸಲಿಲ್ಲ. ಹೀಗಾಗಿ ಅದು ಬಿಬಿಎಂಪಿ ಹೆಸರಿಗೆ ಬಂದಿದೆ. ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಬಹುದು. ಅವರು ಅರ್ಜಿ ಸಲ್ಲಿಸಿದರೆ ದಾಖಲೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಜೂನ್‌ನಲ್ಲಿ ತಿಳಿಸಿದ್ದರು.

ಏನಿದು ವಿವಾದ?

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಬಿಜೆಪಿ ಬೆಂಬಲಿತ ಹಾಗೂ ಅವರ ಪರವಾಗಿ ಇರುವ ಬಲಪಂಥೀಯ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದ್ದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದಿದ್ದವು.

ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಬಿಎಂಪಿ, ಇದು ಬಿಬಿಎಂಪಿ ಆಸ್ತಿಯಾಗಿದೆ ಎಂದು ಹೇಳಿತ್ತು. ಇದರ ನಂತರ ಪತ್ರಗಳನ್ನು ಗಮನಿಸಿದ್ದ ಬಿಬಿಎಂಪಿ ಅದು ಬಿಬಿಎಂಪಿ ಆಸ್ತಿ ಅಲ್ಲ ಎಂದು ಹೇಳಿ ವಿವಾದವನ್ನು ತಣ್ಣಗಾಗಿಸಿತ್ತು. ಆದರೆ ಬಿಜೆಪಿ ಮತ್ತು ಅವರ ಪರವಾಗಿರುವ ಬಲಪಂಥೀಯ ಸಂಘಟನೆಗಳು ಮತ್ತೆ ವಿವಾದ ಸೃಷ್ಟಿಸುತ್ತಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...